ಕಾಂಗ್ರೆಸ್​ನವರು ಯುಪಿಎ ಸರ್ಕಾರ ಇದ್ದಾಗ ಪ್ರತಿಭಟನೆ ಮಾಡಬೇಕಿತ್ತು; ಸದನದಲ್ಲೇ ತಕ್ಕ ಉತ್ತರ ನೀಡುವೆ – ಸಿಎಂ ಬೊಮ್ಮಾಯಿ

TV9 Digital Desk

| Edited By: sandhya thejappa

Updated on:Sep 13, 2021 | 11:21 AM

ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಎತ್ತಿನಗಾಡಿ ಚಲೋ ನಡೆಯುತ್ತಿದೆ.

Follow us

ಬೆಂಗಳೂರು: ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ (Congress) ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಎತ್ತಿನಗಾಡಿ ಚಲೋ ನಡೆಯುತ್ತಿದ್ದು, ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai )ಕಿಡಿಕಾರಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲೂ ಧರಣಿ ಮಾಡಬೇಕಿತ್ತು. ಆಗ ಇರುವ ಮಾಡಿದ ಪ್ರತಿಭಟನೆಗೆ ಅರ್ಥ ಬರುತ್ತಿತ್ತು. ಬೆಲೆ ಏರಿಕೆಯ ಬಗ್ಗೆ ಸದನದಲ್ಲಿ ಪ್ರಶ್ನೆ ಎತ್ತುತ್ತಾರಂತೆ. ಕಾಂಗ್ರೆಸ್​ನವರ ಪ್ರಶ್ನೆಗಳಿಗೆ ನಾನು ತಕ್ಕ ಉತ್ತರ ನೀಡುತ್ತೇನೆ ಎಂದು ಸಿಎಂ ಗರಂ ಆಗಿದ್ದಾರೆ.

ಕಾಂಗ್ರೆಸ್‌ನ ಎತ್ತಿನಗಾಡಿ ಚಲೋ ಬಗ್ಗೆ ವಿಧಾನಸೌಧದಲ್ಲಿ ಹೇಳಿಕೆ ನೀಡಿದ ಸಚಿವ ಡಾ.ಕೆ.ಸುಧಾಕರ್, ಬಂಡಿಯಲ್ಲಿ ಬಂದು ಎತ್ತುಗಳಿಗೆ ತೊಂದರೆ ಕೊಡುತ್ತಿದ್ದಾರೆ. ಇವರು ಎತ್ತಿನ ಬಂಡಿ ಬದಲಿಗೆ ಸೈಕಲ್‌ನಲ್ಲಿ ಬರಬೇಕಾಗಿತ್ತು ಎಂದು ಕಿಡಿಕಾರಿದ್ದಾರೆ.

ಇನ್ನು ವಿಧಾನಸೌಧದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಕೇಂದ್ರ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ. ಹಿಂದಿನ ಸರ್ಕಾರ ಹೆಚ್ಚು ಸಾಲ ಮಾಡಿದೆ ಎಂದು ಹೇಳುತ್ತಾರೆ. ಕಚ್ಚಾ ತೈಲ ಬೆಲೆ ಹೆಚ್ಚಾಗಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಾಗಿಲ್ಲ. ಕೇಂದ್ರ ಸರ್ಕಾರ ಬರೀ ಸುಳ್ಳು ಹೇಳುತ್ತಿದೆ. 7 ವರ್ಷದಲ್ಲಿ 24 ಲಕ್ಷ ಕೋಟಿ ರೂ. ಆದಾಯ ಬಂದಿದೆ. ಬೆಲೆ ಏರಿಕೆ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ

’ಕಾಂಗ್ರೆಸ್​ ಪಕ್ಷ ಭಯೋತ್ಪಾದನೆಯ ತಾಯಿ’- ವಿವಾದ ಸೃಷ್ಟಿಸಿದ ಸಿಎಂ ಯೋಗಿ ಆದಿತ್ಯನಾಥ್​

ವಿಧಾನಸೌಧದೊಳಗೆ ಎತ್ತಿನಗಾಡಿ ಬಿಟ್ಟರೆ ಏನಾಗುತ್ತೆ, ಆಕಾಶ ಬಿದ್ದು ಹೋಗುತ್ತಾ; ಸಿದ್ದರಾಮಯ್ಯ ಕಿಡಿ

(Basavaraj Bommai react to Bullock cart rally in Bengaluru)

ತಾಜಾ ಸುದ್ದಿ

Related Stories

Click on your DTH Provider to Add TV9 Kannada