ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

ಮೆಟ್ರೋ 2ನೇ ಹಂತದ ಯೋಜನೆಯಡಿ ಕಂಟೋನ್ಮೆಂಟ್​ನಿಂದ ಶಿವಾಜಿನಗರ ನಿಲ್ದಾಣದ ವರೆಗೆ ಸುರಂಗ ಮಾರ್ಗ ಕೊರೆದ ಟಿಬಿಎಂ ಊರ್ಜಾ ಯಂತ್ರವು ಹೊರಗೆ ಬರುವುದನ್ನು ವೀಕ್ಷಿಸಿದ ನಂತರ ಮಾತನಾಡುತ್ತಿದ್ದರು.

ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ
ಬಸವರಾಜ ಬೊಮ್ಮಾಯಿ
Follow us
TV9 Web
| Updated By: sandhya thejappa

Updated on: Sep 22, 2021 | 3:45 PM

ಬೆಂಗಳೂರು: ನಮ್ಮ ಮೆಟ್ರೋ (Namma Metro) ಯೋಜನೆಯ ಎರಡನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ನೀಡಲಾಗಿದ್ದ 2025ರ ಗಡುವನ್ನು ಮಾರ್ಪಡಿಸಿ, 2024 ಕ್ಕೆ ನಿಗದಿ ಪಡಿಸುವಂತೆ ಹಾಗೂ ಇದಕ್ಕೆ ತಕ್ಕ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದು ಪೂರ್ಣಗೊಳ್ಳುತ್ತಿದ್ದಂತೆಯೇ ಮೂರನೇ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಸಿಎಂ ಇಂದು (ಸೆ.22) ಮೆಟ್ರೋ 2ನೇ ಹಂತದ ಯೋಜನೆಯಡಿ ಕಂಟೋನ್ಮೆಂಟ್​ನಿಂದ ಶಿವಾಜಿನಗರ ನಿಲ್ದಾಣದ ವರೆಗೆ ಸುರಂಗ ಮಾರ್ಗ ಕೊರೆದ ಟಿಬಿಎಂ ಊರ್ಜಾ ಯಂತ್ರವು ಹೊರಗೆ ಬರುವುದನ್ನು ವೀಕ್ಷಿಸಿದ ನಂತರ ಮಾತನಾಡುತ್ತಿದ್ದರು. ಎರಡನೇ ಹಂತ 2024ಕ್ಕೇ ಮುಗಿಸಲು ಯೋಜನೆ ರೂಪಿಸಿ, ಹೆಚ್ಚುವರಿ ಮಾನವ ಸಂಪನ್ಮೂಲ ಬಳಸಿಕೊಂಡು ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಇನ್ನು 21 ಕಿ.ಮೀ. ಆಗಬೇಕಾಗಿದೆ. ಇದಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ನಂತರ ಮೂರನೇ ಹಂತ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಮೆಟ್ರೋ ಯೋಜನೆ ತ್ವರಿತವಾಗಿ ಪೂರ್ಣಗೊಳಿಸಬೇಕಾಗಿದೆ. ಮೆಟ್ರೋ 2ನೇ ಹಂತ ಪೂರ್ಣಗೊಂಡಾಗ 56 ಕಿ.ಮೀ. ಮಾರ್ಗ ಪೂರ್ಣಗೊಳ್ಳುವುದು. ಇದರೊಂದಿಗೆ 3ನೇ ಹಂತ ಕೈಗೆತ್ತಿಕೊಳ್ಳುತ್ತಿದ್ದೇವೆ. ಮೂರು ಹಂತಗಳು ಪೂರ್ಣಗೊಂಡಾಗ ಮೆಟ್ರೋ ರೈಲು ಬೆಂಗಳೂರಿನ ಜೀವನಾಡಿಯಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮೆಟ್ರೋ ಕಾಮಗಾರಿಯನ್ನು ಹಲವು ಸವಾಲುಗಳ ನಡುವೆಯೂ ವೈಜ್ಞಾನಿಕವಾಗಿ, ಸುರಕ್ಷತೆಗೆ ಆದ್ಯತೆ ನೀಡಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮೊದಲ ಹಂತದಲ್ಲಿ ಹಲವು ಸವಾಲುಗಳು ಎದುರಾಗಿದ್ದವು. ಮೆಜೆಸ್ಟಿಕ್ ಬಳಿ ಟನೆಲ್ ಬೋರಿಂಗ್ ಮಷಿನ್ ಸಿಲುಕಿಕೊಂಡಿತ್ತು ಎಂದು ಅವರು ಸ್ಮರಿಸಿಕೊಂಡರು. ಇಂದು ಅತ್ಯುತ್ತಮ ಟಿಬಿಎಂ ಊರ್ಜಾ ಮೂಲಕ ಕಾರ್ಯ ನಿರ್ವಹಿಸಲಾಗುತ್ತಿದೆ. 855 ಮೀಟರ್ ಸುರಂಗ ಕೊರೆಯಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಮೆಟ್ರೋ ಯೋಜನೆಗೆ ಜನರು ಸಹಕಾರ ನೀಡಿದ್ದಾರೆ. ಬೆಂಗಳೂರು ನಗರದ ಎಲ್ಲ ದಿಕ್ಕಿನಲ್ಲಿ ಮೆಟ್ರೋ ವಿಸ್ತರಿಸಲು ಸಹಕಾರ ನೀಡಿದ ಜನತೆಗೆ ಧನ್ಯವಾದ ಸಲ್ಲಿಸಿದ ಮುಖ್ಯಮಂತ್ರಿಗಳು, ವಿಮಾನ ನಿಲ್ದಾಣದ ವರೆಗೆ ಮೆಟ್ರೋ ವಿಸ್ತರಣೆಗೆ ಶೀಘ್ರವೇ ಚಾಲನೆ ನೀಡಲಾಗುವುದು. ಕೇಂದ್ರದಿಂದ ಉತ್ತಮ ಸಹಕಾರ ಹಾಗೂ ಹಣಕಾಸಿನ ನೆರವು ದೊರೆಯುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಉಮೇಶ ಕತ್ತಿ, ಎಸ್.ಟಿ.ಸೋಮಶೇಖರ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ, ಸಂಸದ ಪಿ.ಸಿ.ಮೋಹನ್, ಶಾಸಕರಾದ ರಿಜ್ವಾನ್ ಅರ್ಷದ್, ಲೆಹರ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ

ಶಿವಾಜಿನಗರದಲ್ಲಿ ಮೆಟ್ರೋ ಸುರಂಗ ಕೊರೆದು 13 ತಿಂಗಳ ನಂತರ ಹೊರಬಂದ ಊರ್ಜಾ ಯಂತ್ರ

IPL 2021: ಸನ್​ರೈಸರ್ಸ್​ ತಂಡದ ಟಿ. ನಟರಾಜನ್​ಗೆ ಕೊರೊನಾ ಪಾಸಿಟಿವ್; ಮತ್ತೆ ರದ್ದಾಗುತ್ತಾ ಐಪಿಎಲ್?

(Basavaraj Bommai says that we will be start to third stage Metro soon at Bengaluru)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್