ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ

Basavaraj Bommai Oath Taking: ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಬಸವರಾಜ ಬೊಮ್ಮಾಯಿಯವರಿಗೆ ಪ್ರಮಾಣ ವಚನ ಭೋದಿಸಿದ್ದಾರೆ. ಈ ಸಮಾರಂಭಕ್ಕೆ ಬಸವರಾಜ ಬೊಮ್ಮಾಯಿ ಕುಟುಂಬ, ಬಿಜೆಪಿ ನಾಯಕರು, ಬಿಜೆಪಿ ಮುಖಂಡರು ಸೇರಿದಂತೆ ಗಣ್ಯರು ಸಾಕ್ಷಿಯಾಗಿದ್ದಾರೆ.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ
ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ‌
Follow us
TV9 Web
| Updated By: ಆಯೇಷಾ ಬಾನು

Updated on:Jul 28, 2021 | 11:20 AM

ಬೆಂಗಳೂರು: ಬಸವರಾಜ ಬೊಮ್ಮಾಯಿ ಕರ್ನಾಟಕ ರಾಜ್ಯದ 30ನೇ ನೂತನ ಮುಖ್ಯಮಂತ್ರಿಯಾಗಿ ಬೆಂಗಳೂರಿನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿಯವರಿಗೆ ಪ್ರಮಾಣ ವಚನ ಭೋದಿಸಿದ್ದು ದೇವರ ಹೆಸರಿನಲ್ಲಿ ಬೊಮ್ಮಾಯಿ‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೇವಲ ಮೂರೇ ನಿಮಿಷದಲ್ಲಿ ಕಾರ್ಯಕ್ರಮ ಮುಗಿದಿದೆ. ಈ ಸಮಾರಂಭಕ್ಕೆ ಬಸವರಾಜ ಬೊಮ್ಮಾಯಿ ಕುಟುಂಬಸ್ಥರಾದ ಪತ್ನಿ ಚನ್ನಮ್ಮ, ಪುತ್ರ ಭರತ್, ಪುತ್ರಿ ಆದಿತಿ ಸಾಕ್ಷಿಯಾಗಿದ್ದಾರೆ.

ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಸಚಿವ ಅರ್. ವಿ. ದೇಶಪಾಂಡೆ, ಸೇರಿದಂತೆ ಹಿಂದಿನ ಸಚಿವ ಸಂಪುಟದ ಬಹುತೇಕ ಸಚಿವರು, ಅನೇಕ ಬಿಜೆಪಿ ಶಾಸಕರು, ಬಿಜೆಪಿ ಮುಖಂಡರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಆದರೆ ಮಾಜಿ ಸಚಿವ K.S.ಈಶ್ವರಪ್ಪರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಇನ್ನು ರಾಜ ಭವನದ ಹೊರಗೆ ಬೆಂಬಲಿಗರು, ಕಾರ್ಯಕರ್ತರು ಘೋಷಣೆ ಕೂಗಿ ಶುಭ ಹಾರೈಸಿದ್ದಾರೆ. ಮತ್ತೊಂದು ಕಡೆ ಹುಬ್ಬಳ್ಳಿಯ ಮಾರುತಿ ದೇವಾಲಯದಲ್ಲಿ ಬೊಮ್ಮಾಯಿ ಸಹೋದರಿ ಉಮಾ ಪಾಟೀಲ್‌ ಬೊಮ್ಮಾಯಿ ಹೆಸರಿನಲ್ಲಿ ವಿಶೇಷ ಪೂಜೆ, ಅರ್ಚನೆ ಮಾಡಿಸಿ ಟಿವಿ ಮೂಲಕ ಪ್ರಮಾಣ ವಚನ ಕಾರ್ಯಕ್ರಮ ವೀಕ್ಷಿಸಿದ್ದಾರೆ.

ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಅನೇಕ ಗಣ್ಯರಿಂದ ನೂತನ ಮುಖ್ಯಮಂತ್ರಿ ಬೊಮ್ಮಾಯಿ ಶುಭಾಶಯಗಳನ್ನು ಸ್ವೀಕರಿಸಿದರು. ಆ ಬಳಿಕ ಸೀದಾ ವಿಧಾನಸೌಧದತ್ತ ತೆರಳಿದ ಬಸವರಾಜ ಬೊಮ್ಮಾಯಿ ಅವರು ಅಲ್ಲಿ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕೊಠಡಿಗೆ ಪ್ರವೇಶ ಮಾಡಲಿದ್ದಾರೆ. CM ಕೊಠಡಿ ಪ್ರವೇಶಿಸಿದ ಬಳಿಕ ನೂತನ ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ ರವಿಕುಮಾರ್ ನೇತೃತ್ವದಲ್ಲಿ ಔಪಚಾರಿಕ ಸಂಪುಟ ಸಭೆ ನಡೆಸಲಿದ್ದಾರೆ. ಸಂಪುಟ ಸಭೆ ಬಳಿಕ ಉನ್ನತ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.

basavaraj bommai

ಪ್ರಮಾಣ ವಚನ ಪತ್ರಕ್ಕೆ ಸಹಿ ಮಾಡಿದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ಮುಖ್ಯಮಂತ್ರಿಯಾದ ಬಳಿಕ ಮಾಡುವ ಮೊಟ್ಟ ಮೊದಲ ಕೆಲಸ ಇದು – ಬಸವರಾಜ ಬೊಮ್ಮಾಯಿ

(basavaraj bommai takes oath as 30 th chief minister of karnataka today july 28 at raj bhavan bengaluru)

Published On - 10:52 am, Wed, 28 July 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ