Karnataka Budget 2022: ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ ಸಿಎಂ ಬೊಮ್ಮಾಯಿ; ನಿರೀಕ್ಷೆ ಹೆಚ್ಚಳ
ಬಸವರಾಜ ಬೊಮ್ಮಾಯಿ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಈ ಬಾರಿ ಸೂಟ್ ಕೇಸ್ ಬದಲಿಗೆ ಫೈಲ್ ಹಿಡಿದು ಬೊಮ್ಮಾಯಿ ಬರಲಿದ್ದಾರೆ ಎಂದು ತಿಳಿದುಬಂದಿದೆ. ನೀರಾವರಿ, ಕೃಷಿ, ಆರೋಗ್ಯ, ಶಿಕ್ಷಣ, ಮಹಿಳೆಯರಿಗೆ ಹೆಚ್ಚು ಒತ್ತು ನೀಡುವಂತಹ ಬಜೆಟ್ ಮಂಡನೆ ಸಾಧ್ಯತೆ ಇದೆ.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಇಂದು (ಮಾರ್ಚ್ 4) ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಸಿಎಂ ಬೊಮ್ಮಾಯಿ ಇಂದು ಮೊದಲ ಬಾರಿಗೆ ಬಜೆಟ್ (Karnataka Budget 2022) ಮಂಡನೆ ಮಾಡಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಸಿಎಂ ಬೊಮ್ಮಾಯಿ ಅವರಿಂದ ಬಜೆಟ್ ಮಂಡನೆ ಆಗಲಿಲದೆ. ಬಸವರಾಜ ಬೊಮ್ಮಾಯಿ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಈ ಬಾರಿ ಸೂಟ್ ಕೇಸ್ ಬದಲಿಗೆ ಫೈಲ್ ಹಿಡಿದು ಬೊಮ್ಮಾಯಿ ಬರಲಿದ್ದಾರೆ ಎಂದು ತಿಳಿದುಬಂದಿದೆ. ನೀರಾವರಿ, ಕೃಷಿ, ಆರೋಗ್ಯ, ಶಿಕ್ಷಣ, ಮಹಿಳೆಯರಿಗೆ ಹೆಚ್ಚು ಒತ್ತು ನೀಡುವಂತಹ ಬಜೆಟ್ ಮಂಡನೆ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಲವು ದಿನಗಳಿಂದ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಕೊವಿಡ್ ಪಿಡುಗಿನ ಹಿಡಿತಕ್ಕೆ ಸಿಲುಕಿದ್ದ ಆರ್ಥಿಕತೆ ಇನ್ನೂ ಚೇತರಿಸಿಕೊಂಡಿಲ್ಲ. ಕರ್ನಾಟಕ ಸರ್ಕಾರದ ಖಜಾನೆಯು ನಿರೀಕ್ಷಿತ ಪ್ರಮಾಣದಲ್ಲಿ ತುಂಬಿಲ್ಲ ಎಂಬ ಮಾತುಗಳು ಅಧಿಕಾರಿಗಳ ವಲಯದಲ್ಲಿ ಕೇಳಿ ಬರುತ್ತಿದೆ. ಏರಿದ ಹಣದುಬ್ಬರ ಮತ್ತು ಬೆಲೆಏರಿಕೆಯಿಂದ ಕಂಗಾಲಾಗಿರುವ ಜನರು ಸಹ ಬಜೆಟ್ ಮೇಲೆ ನಿರೀಕ್ಷೆಗಳನ್ನು ಬೆಳೆಸಿಕೊಂಡಿದ್ದಾರೆ. ಎಂದಿನಂತೆ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ವಲಯಗಳಿಗೆ ಹೆಚ್ಚಿನ ಮಹತ್ವ ಸಿಗಬೇಕು ಎಂಬ ಆಗ್ರಹ ವ್ಯಕ್ತವಾಗಿದೆ. ಬಜೆಟ್ ಪ್ರಕ್ರಿಯೆ ಶುರುವಾಗಿದ್ದು ಇಲಾಖಾವಾರು ಸಭೆ ನಡೆಸಿದ್ದೇನೆ. ಫೆಬ್ರವರಿ 25ರ ನಂತರ ಎಲ್ಲಾ ಇಲಾಖೆಗಳ ಬೇಡಿಕೆ ಗಮನಿಸಿ ಬಜೆಟ್ ಸಿದ್ಧಪಡಿಸಲಾಗುವುದು. ಕೇಂದ್ರ, ರಾಜ್ಯ ಸರ್ಕಾರಗಳ ಯೋಜನೆ ಗಮನಿಸಿ ಬಜೆಟ್ ಸಿದ್ಧಪಡಿಸುತ್ತೇನೆ. ಬಜೆಟ್ನಲ್ಲಿ ರೂಪಿಸುವ ಯೋಜನೆಗಳು ಹೇಗಿರುತ್ತೆ ಎಂದು ಮೊದಲೇ ಹೇಳಲು ಆಗುವುದಿಲ್ಲ ಎಂದು ಬೊಮ್ಮಾಯಿ ಈ ಮೊದಲು ಹೇಳಿದ್ದರು.
ಬಜೆಟ್ಗೆ ಪೂರ್ವಭಾವಿಯಾಗಿ ಫೆ.25ರವರೆಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ವಿವಿಧ ವರ್ಗಗಳ ಪ್ರತಿನಿಧಿಗಳೊಂದಿಗೆ ಸಿಎಂ ಬೊಮ್ಮಾಯಿ ಸಮಾಲೋಚನೆ ನಡೆಸಿದ್ದಾರೆ. ಈಗಾಗಲೇ ಕಂದಾಯ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ, ಲೋಕೋಪಯೋಗಿ ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇಂಧನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ 3,661 ಕೋಟಿ ರೂ. ಅನುದಾನ ಬಿಡುಗಡೆ; ಬಿಜೆಪಿ ಶಾಸಕರ ಕ್ಷೇತ್ರಕ್ಕೆ ಬಂಪರ್ ಕೊಡುಗೆ
ಇದನ್ನೂ ಓದಿ: Karnataka Budget 2022: ಕನಿಷ್ಠ ಬೆಂಬಲ ಬೆಲೆ, ವಿಮೆ ಯೋಜನೆ ಸೇರಿದಂತೆ ಕರ್ನಾಟಕ ಬಜೆಟ್ನಿಂದ ನಿರೀಕ್ಷೆಗಳೇನು?
Published On - 8:30 am, Fri, 4 March 22