ಬಿಟ್​ಕಾಯಿನ್​ ಪ್ರಕರಣ 2018ರಿಂದಲೂ ಇದೆ ಅಂತಾರೆ, ಯಾಕೆ ಕ್ರಮ ಕೈಗೊಳ್ಳಲಿಲ್ಲ ಅಂತ ಸುರ್ಜೇವಾಲ ಕೇಳಲಿ; ಸಿಎಂ ಬೊಮ್ಮಾಯಿ

ಪ್ರಕರಣದ ತನಿಖೆಯನ್ನು ಮಾಡುತ್ತಿರುವುದು ನಾವು. ಇದರ ಹಿಂದೆ ಯಾರೇ ಇದ್ದರೂ ಅವರನ್ನ ಬಲಿ ಹಾಕ್ತೀವಿ. ಆರೋಪಿಗಳನ್ನು ಬಿಡುವ ಪ್ರಶ್ನೆ ಇಲ್ಲ. ಇಬ್ಬರು ಇದ್ದಾರೆ ಅಂದ್ರೆ ಯಾರೆಂದು ಅವರ ಹೆಸರು ಹೇಳಿ.

ಬಿಟ್​ಕಾಯಿನ್​ ಪ್ರಕರಣ 2018ರಿಂದಲೂ ಇದೆ ಅಂತಾರೆ, ಯಾಕೆ ಕ್ರಮ ಕೈಗೊಳ್ಳಲಿಲ್ಲ ಅಂತ ಸುರ್ಜೇವಾಲ ಕೇಳಲಿ; ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
TV9 Web
| Updated By: sandhya thejappa

Updated on:Nov 14, 2021 | 11:36 AM

ಬೆಂಗಳೂರು: ಬಿಟ್​ಕಾಯಿನ್ (Bitcoin) ವಿಚಾರದ ಬಗ್ಗೆ ಈಗಾಗಲೇ ಉತ್ತರಿಸಿದ್ದೇನೆ. ಈ ಪ್ರಕರಣ 2018ರಿಂದಲೂ ಇದೆ ಅಂತಾರೆ. ಆಗ ಅವರದ್ದೇ ಸರ್ಕಾರ ಇತ್ತು. ಯಾಕೆ ಕ್ರಮ ಕೈಗೊಳ್ಳಲಿಲ್ಲ ಅಂತ ಸುರ್ಜೇವಾಲ ಕೇಳಲಿ. ಆಗ ಆರೋಪಿ ಬಂಧಿಸಿದ್ದಾಗ ವಿಚಾರಣೆ ನಡೆಸದೆ ಬಿಟ್ಟರು. ಆಗ ಬಿಟ್ಟು ದೊಡ್ಡ ಪ್ರಮಾಣದಲ್ಲಿ ಆದಾಗ ಪ್ರಶ್ನಿಸುತ್ತಿದ್ದಾರೆ. ಒಂದು ಟ್ವೀಟ್ ಆಧಾರದ ಮೇಲೆ ವಿಚಾರಣೆ ಮಾಡ್ತೀರಾ? ಎಂದು ಪ್ರಶ್ನಿಸಿದ ಬೊಮ್ಮಾಯಿ, ಟ್ವೀಟ್ ಆಧಾರದ ಮೇಲೆ ಆರೋಪ ಸರಿಯಲ್ಲ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿಕೆ ನೀಡಿದ್ದಾರೆ.

ಪ್ರಕರಣದ ತನಿಖೆಯನ್ನು ಮಾಡುತ್ತಿರುವುದು ನಾವು. ಇದರ ಹಿಂದೆ ಯಾರೇ ಇದ್ದರೂ ಅವರನ್ನ ಬಲಿ ಹಾಕ್ತೀವಿ. ಆರೋಪಿಗಳನ್ನು ಬಿಡುವ ಪ್ರಶ್ನೆ ಇಲ್ಲ. ಇಬ್ಬರು ಇದ್ದಾರೆ ಅಂದ್ರೆ ಯಾರೆಂದು ಅವರ ಹೆಸರು ಹೇಳಿ. ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಪ್ರಕರಣ ತನಿಖೆ ನಡೀತಿದೆ. ನಾವು ಆರೋಪಿ ಬಂಧಿಸಿದ್ದೇವೆ. ಬಿಟ್ಟವರಿಂದ ಕಲಿಯಬೇಕಿಲ್ಲ ಅಂತ ಸಿಎಂ ಬೊಮ್ಮಾಯಿ ಹೇಳಿದರು.

ಬಿಟ್ಕಾಯಿನ್ ಹಗರಣದ ಬಗ್ಗೆ ಮಾಹಿತಿ ಇದ್ದರೆ ನೀಡಲಿ. ಕಾಂಗ್ರೆಸ್ ಬಳಿ ಮಾಹಿತಿ, ದಾಖಲೆಗಳು ಇದ್ದರೆ ನೀಡಲಿ. ನಮಗಾದ್ರೂ ದಾಖಲೆ ನೀಡಲಿ. ಇಲ್ಲಾ ಇ.ಡಿಗಾದ್ರೂ ಕೊಡಲಿ. ಕಾಂಗ್ರೆಸ್​ನವರು ದಾಖಲೆ ಕೊಟ್ಟರೆ ನಾವು ತನಿಖೆ ಮಾಡುತ್ತೇವೆ ಅಂತ ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪೊಲೀಸರಿಗೆ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಯಾಮಾರಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಶ್ರೀಕಿ ಯಾವುದೋ ಎಕ್ಸ್​ಚೇಂಜ್ ಖಾತೆ ತೋರಿಸಿದ್ದಾನೆ. ಎಕ್ಸ್​ಚೇಂಜ್ ಅಕೌಂಟ್ ತೋರಿಸಿ ತನ್ನದೆಂದು ಹೇಳಿದ್ದಾನೆ. ಯಾರಿಗೂ ವೈಯಕ್ತಿಕವಾಗಿ ಎಕ್ಸ್​ಚೇಂಜ್ ಅಕೌಂಟ್ ಇರಲ್ಲ ಅಂತ ತಿಳಿಸಿದರು.

ಕಟೀಲು ಮೌನ ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿ ಚರ್ಚೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೈಲೆಂಟಾಗಿದ್ದಾರೆ. ಈವರೆಗೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದ ಕಟೀಲು, ಮಾಧ್ಯಮಗಳಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಪ್ರಕರಣದಲ್ಲಿ ಕರಾವಳಿ ಭಾಗದ ಪ್ರಭಾವಿ ಇರುವ ಆರೋಪವಿದೆ. ಈ ಆರೋಪಗಳಿಗೂ ನಳಿನ್ ಕುಮಾರ್ ಸ್ಪಷ್ಟತೆ ನೀಡಿಲ್ಲ.

ಇದನ್ನೂ ಓದಿ

Viral Video: ಬಲೂನ್ ಆಟವಾಡುತ್ತಿದ್ದ ಕೋತಿ; ಮುಂದೇನಾಯ್ತು? ತಮಾಷೆ ವಿಡಿಯೊ ನೋಡಿ

ಮಿಟ್ಟಹಳ್ಳಿಯಲ್ಲಿ ಮತ್ತೆ ಕೇಳಿ ಬಂತು ಸ್ಫೋಟದ ಸದ್ದು, ರಾತ್ರಿಯಿಡೀ ನಿದ್ದೆ ಮಾಡದೆ ಬೀದಿಯಲ್ಲಿ ಕಾಲ ಕಳೆದ ಜನ

Published On - 11:35 am, Sun, 14 November 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ