ಬೆಂಗಳೂರು ವಿವಿ ಆವರಣದಲ್ಲಿ ಸಾರ್ವಜನಿಕ ವಾಹನ ಸಂಚಾರ ನಿಷೇಧಿಸಿ: ಸರ್ಕಾರಕ್ಕೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ

ಸಾರ್ವಜನಿಕರ ವಾಹನ ಸಂಚಾರಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ನಿಷೇಧ ಹೇರಬೇಕು ಎಂಬ ಕೂಗು ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಈ ವಿಚಾರವಾಗಿ 2022ರಲ್ಲಿ ಭಾರಿ ಪ್ರತಿಭಟನೆ ಭುಗಿಲೆದ್ದು ನಂತರ ತಣ್ಣಗಾಗಿತ್ತು. ಇದೀಗ ಸ್ವತಃ ವಿಧಾನಪರಿಷತ್ ಸಭಾಪತಿಯೇ ಆ ವಿಚಾರವಾಗಿ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ.

ಬೆಂಗಳೂರು ವಿವಿ ಆವರಣದಲ್ಲಿ ಸಾರ್ವಜನಿಕ ವಾಹನ ಸಂಚಾರ ನಿಷೇಧಿಸಿ: ಸರ್ಕಾರಕ್ಕೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ
ಬೆಂಗಳೂರು ವಿವಿ ಆವರಣದಲ್ಲಿ ಸಾರ್ವಜನಿಕ ವಾಹನ ಸಂಚಾರ ನಿಷೇಧ ಶೀಘ್ರ
Follow us
Anil Kalkere
| Updated By: Ganapathi Sharma

Updated on: Jun 13, 2024 | 10:49 AM

ಬೆಂಗಳೂರು, ಜೂನ್ 13: ಜ್ಞಾನಭಾರತಿ (Jnanabharathi) ಆವರಣದಲ್ಲಿ ಸಂಚಾರ ದಟ್ಟಣೆ ಹೆಚ್ಚಾದ ಕಾರಣ ಬೆಂಗಳೂರು ವಿಶ್ವವಿದ್ಯಾಲಯ (Bangalore University) ಆವರಣದಲ್ಲಿ ಸಾರ್ವಜನಿಕ ವಾಹನ ಸಂಚಾರಕ್ಕೆ ನಿಷೇಧ ಹೇರಬೇಕು ಎಂಬ ಆಗ್ರಹ ಮತ್ತೆ ಜೋರಾಗಿದೆ. ಸಂಚಾರ ದಟ್ಟಣೆ ಹೆಚ್ಚಳ ಮಾತ್ರವಲ್ಲದೆ, ವಿದ್ಯಾರ್ಥಿಗಳ ಅಪಘಾತಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ಹೀಗಾಗಿ ಅಲ್ಲಿ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ನಿಷೇಧ ಹೇರಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಶೀಘ್ರವೇ ವಿವಿ ಮುಖ್ಯ ರಸ್ತೆಯಲ್ಲಿ ಸಾರ್ವಜನಿಕರ ವಾಹನ ಓಡಾಟಕ್ಕೆ ನಿಷೇಧ ಹೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಕೂಡ ವಿಶ್ವ ವಿದ್ಯಾಲಯದ ಆವರಣದಲ್ಲಿ ಸಾರ್ವಜನಿಕ ವಾಹನ ಸಂಚಾರ ನಿಷೇಧಿಸುವ ಬಗ್ಗೆ ಚರ್ಚೆಯಾಗಿತ್ತು. ವಾಹನಗಳಿಗೆ ಪರ್ಯಾಯ ಮಾರ್ಗ ಒದಗಿಸುವ ಬಗ್ಗೆ ಚಿಂತನೆ ನಡೆಸಲಾಗಿತ್ತು. ಆದರೆ, ಯಾವುದೂ ಕಾರ್ಯರೂಪಕ್ಕೆ ಬಂದಿರಲಿಲ್ಲ.

ವಿವಿ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಆಗುವ ಸಮಸ್ಯೆಗಳನ್ನು ಕಣ್ಣಾರೆ ಕಂಡಿದ್ದೇನೆ. ಆದಷ್ಟು ಬೇಗ ಸಾರ್ವಜನಿಕ ವಾಹನಕ್ಕೆ ಸಂಚಾರಕ್ಕೆ ನಿಷೇಧ ಹೇರಬೇಕು ಎಂದು ಸರ್ಕಾರಕ್ಕೆ ಬರೆದ ಪತ್ರದಲ್ಲಿ ಬಸವರಾಜ ಹೊರಟ್ಟಿ ಉಲ್ಲೇಖಿಸಿದ್ದಾರೆ.

ಕೆಲವು ವರ್ಷಗಳ ಕೂಗು

ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸಾರ್ವಜನಿಕ ವಾಹನಗಳ ಸಂಚಾರ ನಿಷೇಧಿಸಬೇಕೆಂಬ ಕೂಗು ಇಂದುನಿನ್ನೆಯದಲ್ಲ. ಕಳೆದ ಕೆಲವು ವರ್ಷಗಳಿಂದ ಈ ಬೇಡಿಕೆ ಇದೆ. 2022ರ ಅಕ್ಟೋಬರ್​​ನಲ್ಲಿ ಜ್ಞಾನಭಾರತಿ ಆವರಣದಲ್ಲಿ ಬಿಎಂಟಿಸಿ ಬಸ್ ಹರಿದು ಎಂಎಸ್​​ಸಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದರು (ಅದಕ್ಕೂ ಮುನ್ನ ಮತ್ತು ನಂತರವೂ ಇಂಥ ಕೆಲವು ಅಪಘಾತಗಳು ಸಂಭವಿಸಿವೆ). ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ವಿವಿ ಆವರಣದಲ್ಲಿ ವಾಹನ ಸಂಚಾರ ನಿಷೇಧಕ್ಕೆ ಆಗ್ರಹಿಸಿ ಭಾರಿ ಪ್ರತಿಭಟನೆ ನಡೆಸಿದ್ದರು. ನಂತರ ಅವರ ಮನವೊಲಿಸಿ ಪ್ರತಿಭಟನೆ ನಿಲ್ಲಿಸುವಂತೆ ಮಾಡಲಾಗಿತ್ತು.

ಇದನ್ನೂ ಓದಿ: ಬೆಂಗಳೂರು ಉಪನಗರ ರೈಲ್ವೆ ಯೋಜನೆ: 699 ಮರ ಕಡಿಯುವುದಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಅಂದಿನಿಂದಲೂ ವಿವಿ ಆವರಣದಲ್ಲಿ ಸಾರ್ವಜನಿಕ ವಾಹನಗಳ ಸಂಚಾರ ನಿಷೇಧಿಸಬೇಕೆಂಬ ಕೂಗು ಚಾಲ್ತಿಯಲ್ಲಿದೆ. ಜತೆಗೆ, ಆ ಬಗ್ಗೆ ಸರ್ಕಾರದ ಮಟ್ಟದಲ್ಲಿಯೂ ಸಮಾಲೋಚನೆ ನಡೆಯುತ್ತಿದೆ. ಆದರೆ, ಈವರೆಗೆ ಅಂತಿಮ ನಿರ್ಧಾರಕ್ಕೆ ಬರಲಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ