AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆ ಬದಲಾವಣೆ ತಕ್ಷಣಕ್ಕೆ ಸಾಧ್ಯವಿಲ್ಲ ಎಂದಿರುವ ಸಿಎಂ ಬೊಮ್ಮಾಯಿ; ಅರೆ ಮನಸ್ಸಿನಿಂದ ಹೊರಟ ಎಂಟಿಬಿ ನಾಗರಾಜ್

ಸಿಎಂ ಭೇಟಿ ಬಳಿಕ ಪ್ರತಿಕ್ರಿಯಿಸಿರುವ ಸಚಿವ ಎಂಟಿಬಿ ನಾಗರಾಜ್, ಸದ್ಯ ಈಗ ಇರುವ ಖಾತೆಯಲ್ಲಿ ಮುಂದುವರಿಯುತ್ತೇನೆ. ಖಾತೆ ಹಂಚಿಕೆಯ ಬಗ್ಗೆ ನನಗೆ ಅಸಮಾಧಾನವಿಲ್ಲ. ಹಿಂದಿನ ಸರ್ಕಾರದಲ್ಲಿ ವಸತಿ ಖಾತೆಯನ್ನು ನೀಡಿದ್ದರು.

ಖಾತೆ ಬದಲಾವಣೆ ತಕ್ಷಣಕ್ಕೆ ಸಾಧ್ಯವಿಲ್ಲ ಎಂದಿರುವ ಸಿಎಂ ಬೊಮ್ಮಾಯಿ; ಅರೆ ಮನಸ್ಸಿನಿಂದ ಹೊರಟ ಎಂಟಿಬಿ ನಾಗರಾಜ್
ಎಂಟಿಬಿ ನಾಗರಾಜ್
TV9 Web
| Updated By: sandhya thejappa|

Updated on: Aug 08, 2021 | 2:06 PM

Share

ಬೆಂಗಳೂರು: ಖಾತೆ ಬಗ್ಗೆ ಅಸಮಾಧಾನ ಹೊರಹಾಕಿರುವ ಸಚಿವ ಎಂಟಿಬಿ ನಾಗರಾಜ್ ಇಂದು ಸಿಎಂ ಬಸವರಾಜ ಬೊಮ್ಮಾಯಿರನ್ನು (Basavaraj Bommai) ಭೇಟಿಯಾಗಿದ್ದರು. ಈ ವೇಳೆ ಯಾವುದೇ ಖಾತೆ ಬದಲಾವಣೆ ತಕ್ಷಣಕ್ಕೆ ಸಾಧ್ಯವಿಲ್ಲ. ನಿಮ್ಮ ಬೇಸರದ ಬಗ್ಗೆ ವರಿಷ್ಠರಿಗೆ ತಿಳಿಸುತ್ತೇನೆ ಅಂತ ಬೊಮ್ಮಾಯಿ ಮನವರಿಕೆ ಮಾಡಿದ್ದಾರೆ. ವಲಸಿಗರಲ್ಲಿ ಕೆಲವರಿಗೆ ಪ್ರಬಲ ಖಾತೆ ನೀಡಲಾಗಿದೆ. ಕೆಲವರಿಗೆ ಮಾತ್ರ ಪ್ರಬಲ ಖಾತೆ ಕೊಟ್ಟು ಉಳಿದವರನ್ನ ಕಡೆಗಣಿಸಲಾಗಿದೆ ಅಂತ ಎಂಟಿಬಿ ನಾಗರಾಜ್ (MTB Nagaraj) ಸಿಟ್ಟು ಹೊರ ಹಾಕಿದರು. ಆಗ ಕೆಲ ಕಾಲ ಇದೆ ಖಾತೆಯನ್ನು ಮುಂದುವರೆಸಿಕೊಂಡು ಹೋಗುವಂತೆ ಸಿಎಂ ತಿಳಿಸಿದ್ದಾರೆ.

ಸಿಎಂ ಭೇಟಿ ಬಳಿಕ ಪ್ರತಿಕ್ರಿಯಿಸಿರುವ ಸಚಿವ ಎಂಟಿಬಿ ನಾಗರಾಜ್, ಸದ್ಯ ಈಗ ಇರುವ ಖಾತೆಯಲ್ಲಿ ಮುಂದುವರಿಯುತ್ತೇನೆ. ಖಾತೆ ಹಂಚಿಕೆಯ ಬಗ್ಗೆ ನನಗೆ ಅಸಮಾಧಾನವಿಲ್ಲ. ಹಿಂದಿನ ಸರ್ಕಾರದಲ್ಲಿ ವಸತಿ ಖಾತೆಯನ್ನು ನೀಡಿದ್ದರು. ಅದಕ್ಕಿಂತ ಒಳ್ಳೆಯ ಖಾತೆ ಕೊಡಿ ಎಂದು ಕೇಳಿದ್ದೇನೆ. ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಬೇಡಿಕೆ ಈಡೇರಿಸುವ ಭರವಸೆಯಿದೆ. ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

ಸಿಎಂ ಬೊಮ್ಮಾಯಿ ಹಲವು ಸಲಹೆಯನ್ನು ಕೊಟ್ಟಿದ್ದಾರೆ. ಸಿಎಂ ಕೊಟ್ಟ ಸಲಹೆ, ಭರವಸೆಯಿಂದ ಸಂತೋಷವಾಗಿದೆ. ಹೀಗಾಗಿ ನಾನು ಈಗಿರುವ ಸ್ಥಾನದಲ್ಲಿ ಮುಂದುವರಿಸುತ್ತೇನೆ. ನಾನು ರಾಜೀನಾಮೆ ನೀಡುವುದಾಗಿ ಎಲ್ಲಿಯೂ ಹೇಳಿಲ್ಲ. 3 ದಿನದಲ್ಲಿ ನನ್ನ ತೀರ್ಮಾನ ತಿಳಿಸುವುದಾಗಿ ಹೇಳಿದ್ದೆ ಅಷ್ಟೇ ಅಂತ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್ ಬಳಿ ಕೈ ಕಾರ್ಯಕರ್ತರ ಪ್ರತಿಭಟನೆ, 2 ಕಿಲೋಮೀಟರ್ ಟ್ರಾಫಿಕ್ ಜಾಮ್; ಧರಣಿ ನಿರತರನ್ನು ವಶಕ್ಕೆ ಪಡೆದ ಪೊಲೀಸರು

ಸರ್ಕಾರಿ ಕಾರ್ಯಕ್ರಮಕ್ಕೆ ನಿರೂಪಕರನ್ನು ಬದಲಿಸಿ; ಸಿಎಂ ನಿವಾಸದ ಬಳಿ ಏಕಾಂಗಿಯಾಗಿ ಮಹಿಳೆ ಪ್ರತಿಭಟನೆ

(Basavaraja Bommai told MTB Nagaraj that the Cabinet post change is not immediate)

ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ