Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬೆಂಗಳೂರಿನಲ್ಲಿ ವಿದ್ಯಾರ್ಥಿ ಕೊಲೆ ಪ್ರಕರಣ: 8 ಮಂದಿ ಅರೆಸ್ಟ್

ಬೆಂಗಳೂರು ನಗರದಲ್ಲಿ ನಡೆದ ವಿದ್ಯಾರ್ಥಿಯ ಹತ್ಯೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಸೇರಿದಂತೆ ಒಟ್ಟು 8 ಮಂದಿಯನ್ನು ಬಸವೇಶ್ವರನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

Bengaluru: ಬೆಂಗಳೂರಿನಲ್ಲಿ ವಿದ್ಯಾರ್ಥಿ ಕೊಲೆ ಪ್ರಕರಣ: 8 ಮಂದಿ ಅರೆಸ್ಟ್
ಬೆಂಗಳೂರಿನಲ್ಲಿ ವಿದ್ಯಾರ್ಥಿಯನ್ನು ಕೊಲೆ ಮಾಡಿದ 8 ಮಂದಿಯನ್ನು ಬಂಧಿಸಿದ ಬಸವರೇಶ್ವರ ನಗರ ಠಾಣಾ ಪೊಲೀಸರು (ಸಾಂದರ್ಭಿಕ ಚಿತ್ರ)
Follow us
ರಾಚಪ್ಪಾಜಿ ನಾಯ್ಕ್
| Updated By: Rakesh Nayak Manchi

Updated on:Jul 04, 2023 | 7:01 PM

ಬೆಂಗಳೂರು: ಬಸವೇಶ್ವರನಗರದಲ್ಲಿ ನಡೆದಿದ್ದ ವಿದ್ಯಾರ್ಥಿ ಸೊಹೈಲ್ ಕೊಲೆ (Student Murder) ಪ್ರಕರಣ ಸಂಬಂಧ ಕಾನೂನು ಸಂಘರ್ಷಕ್ಕೊಳಗಾದ ಏಳು ಬಾಲಕರು ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಫ್ರೆಶರ್ಸ್ ಪಾರ್ಟಿ ವೇಳೆ ಡಾನ್ಸ್ ಮಾಡುವಾಗ ಕಾಲು ತಾಗಿದ್ದಕ್ಕೆ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನಿಗೆ ಸೊಹೈಲ್ ಥಳಿಸಿದ್ದನು. ಈ ವಿಚಾರ ದ್ವೇಷಕ್ಕೆ ತಿರುಗಿದ್ದಲ್ಲದೆ, ಹೊಡೆತದಿಂದ ಅವಮಾನಗೊಂಡ ಬಾಲಕ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಸಂಚು ರೂಪಿಸಿ ಸೊಹೈಲ್​ನನ್ನು ಕೊಲೆ ಮಾಡಿರುವುದು ತಿಳಿದುಬಂದಿದೆ.

ಜುಲೈ ಒಂದರನ್ನು ಫ್ರೆಶರ್ಸ್​ ಪಾರ್ಟಿ ವೇಳೆ ಡಾನ್ಸ್ ಮಾಡುತ್ತಿದ್ದಾಗ ಕಾಲು ತಾಗಿತು ಎಂಬ ಕ್ಷುಲ್ಲಕ ಕಾರಣಕ್ಕೆ ಕಾನೂನು ಸಂಘರ್ಷಕ್ಕೆ ಒಳಗಾದ ವಿದ್ಯಾರ್ಥಿಗಳ ಪೈಕಿ ಓರ್ವನಿಗೆ ಸೊಹೈಲ್ ಥಳಿಸಿದ್ದನು. ಇದರಿಂದ ಹೊಡೆತ ತಿಂದ ಬಾಲಕನ ಕಣ್ಣಿಗೆ ಏಟಾಗಿದ್ದಲ್ಲದೆ, ಅವಮಾನಕ್ಕೂ ಒಳಗಾಗಿದ್ದ. ಘಟನೆ ನಂತರ ಮನೆಗೆ ಹೋಗಿದ್ದ ಬಾಲಕ ಬೈಕ್​ನಲ್ಲಿ ಬಿದ್ದಿದ್ದಾಗಿ ಪೋಷಕರಿಗೆ ತಿಳಿಸಿದ್ದ.

ಇದನ್ನೂ ಓದಿ: ಚಲಿಸುತ್ತಿದ್ದ ಬಸ್​ನಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ; ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರು

ಇತ್ತ ಥಳಿತದಿಂದ ದ್ವೇಷಕ್ಕೆ ಬಿದ್ದ ಬಾಲಕ, ಸೊಹೈಲ್​ನನ್ನು ಕೊಲೆ ಮಾಡಲು ಸಂಚು ರೂಪಿಸುತ್ತಾನೆ. ಜುಲೈ ಎರಡರಂದು ಕಾಲೇಜ್​ಗೆ ರಜೆ ಹಿನ್ನಲೆ ನಿನ್ನೆ (ಜುಲೈ 3) ಹೊಂಚು ಹಾಕಿ ಕುಳಿತಿದ್ದ ಆರೋಪಿಗಳು ಸೊಹೈಲ್​ ಕಾಲೇಜು ಬಿಟ್ಟು ಹೊರ ಬರುತ್ತಿದ್ದಂತೆ ಚಾಕುವಿನಿಂದ ಚುಚ್ಚಿ ಪರಾರಿಯಾಗಿದ್ದರು. ಘಟನಾ ಸ್ಥಳಕ್ಕೆ ಆಗಮಿಸಿದ್ದ ಬಸವೇಶ್ವರನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:59 pm, Tue, 4 July 23

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ