ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಹಳ್ಳಿಗಳಿಗೆ ನೀರಿನ ಕೊರತೆ; ಸಮಸ್ಯೆ ಪರಿಹಾರಕ್ಕೆ 100 ಕೊಳವೆಬಾವಿ ಕೊರೆಯಲು ಪ್ಲ್ಯಾನ್

110 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇರುವ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಪ್ರತಿಕ್ರಿಯೆ ನೀಡಿದ್ದು ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಸುಮಾರು 100 ಕೊಳವೆಬಾವಿಗಳನ್ನು ಕೊರೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಹಳ್ಳಿಗಳಿಗೆ ನೀರಿನ ಕೊರತೆ; ಸಮಸ್ಯೆ ಪರಿಹಾರಕ್ಕೆ 100 ಕೊಳವೆಬಾವಿ ಕೊರೆಯಲು ಪ್ಲ್ಯಾನ್
ಬಿಬಿಎಂಪಿ
Follow us
Poornima Agali Nagaraj
| Updated By: ಆಯೇಷಾ ಬಾನು

Updated on:Jul 05, 2023 | 3:31 PM

ಬೆಂಗಳೂರು: ಬಿಬಿಎಂಪಿ(BBMP) ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾದ 110 ಹಳ್ಳಿಗಳಿಗೆ ನೀರಿನ ಕೊರತೆ(Drinking Water Crisis) ಎದುರಾಗಿದೆ. ಕುಡಿಯಲು ನೀರಿಲ್ಲದೆ 110 ಹಳ್ಳಿಗಳ ನಿವಾಸಿಗಳು ಪರದಾಡುತ್ತಿದ್ದು ನೀರು ಸರಿಯಾಗಿ ಬರದ ಕಾರಣ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಹಳ್ಳಿಗಳಿಗೆ ಕಾವೇರಿ ನೀರಿನ ವ್ಯವಸ್ಥೆ ಮಾಡಬೇಕಿದೆ.

110 ಹಳ್ಳಿಗಳನ್ನ ಬಿಬಿಎಂಪಿ ವ್ಯಾಪ್ತಿಗೆ ತೆಗೆದುಕೊಂಡಾಗಿನಿಂದ ನೀರಿಗೆ ಸಮಸ್ಯೆ ಆಗುತ್ತಲೇ ಇದೆ. ಈ ವರ್ಷ ಮಳೆಯಾಗದ ಕಾರಣ ಬೋರ್​ವೆಲ್​ಗಳಲ್ಲಿ ನೀರು ಬರ್ತಿಲ್ಲ. ಅಲ್ಲದೇ ಅಕ್ಕಪಕ್ಕದ ಕೆರೆಗಳು ಬತ್ತಿ ಹೋಗಿವೆ. ಸದ್ಯ 110 ಹಳ್ಳಿಗಳಿಗೆ ವಾರಕ್ಕೊಮ್ಮೆ ನೀರು ಬಿಡಲಾಗುತ್ತಿದ್ದು ಇದು ಸಾಕಾಗುತ್ತಿಲ್ಲ. ಇನ್ನು ನಗರದ ದಾಸರಹಳ್ಳಿ, ಯಲಹಂಕ ವ್ಯಾಪ್ತಿಯ ಹಳ್ಳಿಗಳಲ್ಲಿ ನೀರಿಗೆ ಹಾಹಾಕಾರವಿದ್ದು ಹೊಸದಾಗಿ ಬೋರ್​ವೆಲ್​ ಕೊರೆಸಲು ಬಿಬಿಎಂಪಿ ಮುಂದಾಗಿದೆ.

ನೀರು ಒದಗಿಸಲು 3 ವಲಯದ ಜಂಟಿ ಆಯುಕ್ತರು 10 ಕೋಟಿಗೂ ಹೆಚ್ಚು ಅನುಧಾನ ಕೇಳಿದ್ದಾರೆ. ಹೀಗಾಗಿ ಮೊದಲು ಬೋರ್ ವೆಲ್ ಕೊರೆಸಿ ಬೋರ್ ವೆಲ್ ಮೂಲಕ ಟ್ಯಾಂಕರ್ ಗಳಲ್ಲಿ ನೀರು ಸರಬರಾಜು ಮಾಡಲು ಪ್ಲಾನ್ ನಡೆದಿದೆ. ಸದ್ಯ 110 ಹಳ್ಳಿಗಳಿಗೆ ನೀರು ಸಮಸ್ಯೆ ನೀಗಿಸಬೇಕು ಎಂದ್ರೆ ಐದನೇ ಹಂತದ ನೀರಿನ ಸಫ್ಲೈ ಯೋಜನೆ ಕಂಪ್ಲೀಟ್ ಆಗಬೇಕು. ಆದ್ರೆ ಆ ಯೋಜನೆ ಮುಗಿಯಲು ಇನ್ನು ಸಾಕಷ್ಟು ಸಮಯ ಹಿಡಿಯಲಿದೆ. ಹೀಗಾಗಿ ಹೊಸ ಬೋರ್ ವೆಲ್ ಕೊರೆಸಿ ನೀರನ್ನ ಪೂರೈಕೆ ಮಾಡಲು ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ವೇಗಕ್ಕೆ ಬ್ರೇಕ್: 100 ಕಿ ಮೀ ಕ್ಕಿಂತ ಸ್ಪೀಡ್​​ ಓಡಿಸಿದರೆ ಫೈನ್​ ಗ್ಯಾರಂಟಿ

ಇನ್ನು ಈ 110 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇರುವ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಪ್ರತಿಕ್ರಿಯೆ ನೀಡಿದ್ದು ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಸುಮಾರು 100 ಕೊಳವೆಬಾವಿಗಳನ್ನು ಕೊರೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಕುಡಿಯುವ ನೀರು ಸರಬರಾಜು ಮಾಡುವುದು ಬಿಬಿಎಂಪಿಯ ಜವಾಬ್ದಾರಿ ಅಲ್ಲದಿದ್ದರೂ, ಹೊರಭಾಗದ 110 ಹಳ್ಳಿಗಳಲ್ಲಿ ಕಾವೇರಿ ನೀರು ಪೂರೈಕೆ ಇನ್ನೂ ಸಾಧ್ಯವಾಗಿಲ್ಲ. ಹೀಗಾಗಿ ಅಲ್ಲಿನ ಜನರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ತುರ್ತು ಕಾಮಗಾರಿಯಡಿ ₹10 ಕೋಟಿ ವೆಚ್ಚ ಮಾಡಿ ನೀರು ಒದಗಿಸಲು ಸಿದ್ಧತೆ ನಡೆದಿದ. ಪ್ರತಿ ಕೊಳವೆಬಾವಿಗೆ ಸುಮಾರು ₹8 ಲಕ್ಷ ವೆಚ್ಚವಾಗಲಿದೆ. ಯಲಹಂಕ, ದಾಸರಹಳ್ಳಿ, ಆರ್‌.ಆರ್‌. ನಗರ, ಬೊಮ್ಮನಹಳ್ಳಿ ವಲಯಗಳಲ್ಲಿ ಅಗತ್ಯಕ್ಕನುಸಾರವಾಗಿ ಕೊಳವೆಬಾವಿ ಕೊರೆಯಲಾಗುತ್ತದೆ ಎಂದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:30 pm, Wed, 5 July 23

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ