ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸುವಂತೆ ಸಾರ್ವಜನಿಕರಿಗೆ ಬಿಬಿಎಂಪಿ ಸಲಹೆ

ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್​ ನೇತೃತ್ವದಲ್ಲಿ ಗಣೇಶ ಹಬ್ಬ ಹಿನ್ನಲೆ ಪಾಲಿಕೆ ವತಿಯಿಂದ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ಮಾಡಿದ್ದು, ಕೆಲ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲಿ ಮುಖ್ಯವಾಗಿ ಪರಿಸರ ಸ್ನೇಹಿ ಗಣೇಶ ಚತುರ್ಥಿ ಹಬ್ಬ ಆಚರಿಸುವಂತೆ ಸಾರ್ವಜನಿಕರಿಗೆ ಬಿಬಿಎಂಪಿ ಸಲಹೆ ನೀಡಿದೆ.

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸುವಂತೆ ಸಾರ್ವಜನಿಕರಿಗೆ ಬಿಬಿಎಂಪಿ ಸಲಹೆ
ಅಧಿಕಾರಿಗಳೊಂದಿಗೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸಭೆ
Follow us
Shivaraj
| Updated By: ಗಂಗಾಧರ​ ಬ. ಸಾಬೋಜಿ

Updated on:Sep 01, 2023 | 1:28 PM

ಬೆಂಗಳೂರು, ಸೆಪ್ಟೆಂಬರ್​ 1: ಗಣೇಶ ಚತುರ್ಥಿ ಹಿನ್ನಲೆ ಪರಿಸರ ಸ್ನೇಹಿ ಹಬ್ಬ ಆಚರಿಸಲು ಬಿಬಿಎಂಪಿ ಸಾರ್ವಜನಿಕರಿಗೆ ಸಲಹೆ ನೀಡಿದೆ. ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ (Tushar Giri Nath) ನೇತೃತ್ವದಲ್ಲಿ ಪಾಲಿಕೆ ವತಿಯಿಂದ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ  ಸಭೆ ಮಾಡಿದ್ದು, ಕೆಲ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 63 ಉಪ ವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗುವುದು.

ಪ್ರತಿ ವರ್ಷದಂತೆ ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ನಗರದ ಕೇಂದ್ರ ಭಾಗದಲ್ಲಿ ವ್ಯವಸ್ಥೆ ಮಾಡಲಾಗುತ್ತಿದ್ದು, ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ, ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Festivals in September 2023: ಕೃಷ್ಣ ಜನ್ಮಾಷ್ಟಮಿಯಿಂದ ಗಣೇಶ ಚತುರ್ಥಿಯವರೆಗೆ, ಸಪ್ಟೆಂಬರ್​​ನಲ್ಲಿ ಬರುವ ಎಲ್ಲಾ ಹಬ್ಬ, ವ್ರತಗಳ ಮಾಹಿತಿ ಇಲ್ಲಿದೆ

ಸಾರ್ವಜನಿಕರು ಚಿಕ್ಕ-ಚಿಕ್ಕ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಲುವಾಗಿ ಪ್ರತಿ ವಲಯಗಳ ಪ್ರಮುಖ ಸ್ಥಳ, ಜಂಕ್ಷನ್ ಮತ್ತು ಅವಶ್ಯಕತೆ ಇರುವ ಕಡೆ ವಾರ್ಡ್​ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ (ಮೊಬೈಲ್ ಟ್ಯಾಂಕ್)ಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ.

ಗಣೇಶ ಮೂರ್ತಿಗಳ ವಿಸರ್ಜನೆಗೆ ಗುರುತಿಸಿರುವ ಕೆರೆಗಳ ಸುತ್ತಮುತ್ತ ಹಾಗೂ ಕಲ್ಯಾಣಿಗಳ ಆವರಣದಲ್ಲಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್‌ ಅಳವಡಿಸಬೇಕು. ಎಲ್ಲಾ ವಿಸರ್ಜನಾ ಕೇಂದ್ರಗಳಲ್ಲೂ ಪಾಳಿಯನುಸಾರ ನುರಿತ ಈಜುಗಾರರನ್ನು ಮತ್ತು ಅಗತ್ಯ ಸಿಬ್ಬಂದಿಯನ್ನು ನೇಮಿಸಲು ಕ್ರಮ ಕೈಗೊಳ್ಳಬೇಕು. ಜೊತೆಗೆ ಆಯಾ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮ ವಹಿಸುವ ಸಲುವಾಗಿ ಸಿಸಿಟಿವಿ, ವಿದ್ಯುತ್ ದ್ವೀಪಗಳ ಸೌಲಭ್ಯಗಳನ್ನು ತಪ್ಪದೇ ಅಳವಡಿಸಲು ಸಲಹೆ ನೀಡಲಾಗಿದೆ.

ವಿಸರ್ಜನಾ ಕೇಂದ್ರಗಳಲ್ಲಿ ಸಂಗ್ರಹವಾಗುವ ಪೂಜಾ ಸಾಮಗ್ರಿಗಳಾದ ಹೂವು, ಬಾಳೆಯ ಕಂದು, ತಳಿರು ತೋರಣ, ಮತ್ತಿತರ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ನಿಗದಿತ ಕಂಟೈನರ್‌ಗಳ ಮೂಲಕ ಆವಾಗಲೇ ತೆರವುಗೊಳಿಸಲು ಅಗತ್ಯ ಸ್ವಚ್ಛತಾ ಸಿಬ್ಬಂದಿ ಹಾಗೂ ಸಾಗಣೆ ವಾಹನಗಳನ್ನು ಸಜ್ಜುಗೊಳಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಶಕ್ತಿಯೋಜನೆಯಿಂದ ಖಾಸಗಿ ವಾಹನ ಚಾಲಕರು, ಮಾಲಿಕರಿಗೆ ಸಂಕಷ್ಟ; ಸೆ.11 ರಂದು ಬೆಂಗಳೂರು ಬಂದ್​ಗೆ ಕರೆ

ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ದೋಣಿಗಳ ವ್ಯವಸ್ಥೆ, ನೀರೆತ್ತುವ ಪಂಪ್‌ಗಳ ವ್ಯವಸ್ಥೆ, ಕ್ರೇನ್‌ಗಳ ವ್ಯವಸ್ಥೆಗಳನ್ನು ಕೂಡ ಸಿದ್ದಪಡಿಸಿರಬೇಕು. ಪೋಲಿಸ್ ಬಂದೋಬಸ್ತ್ ಮೂಲಕ ಸೂಕ್ತ ಏರ್ಪಾಡುಗಳನ್ನು ಮಾಡಿಕೊಳ್ಳಬೇಕು‌‌. ವಿಸರ್ಜನಾ ಮೆರವಣಿಗೆಯ ವೇಳೆ ಪಟಾಕಿ, ಸಿಡಿ ಮದ್ದು ಸಿಡಿಸುವುದು ಹಾಗೂ ನಾಗರಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಲಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿ ತಯಾರಿಕೆ ಮಾಡುತ್ತಿರುವವರಿಗೆ ದಂಡ ವಿಧಿಸುವ ಜೊತೆಗೆ ಸೂಕ್ತ ಕ್ರಮವಹಿಸಲು ಸೂಚಿಸಲಾಗಿದೆ.

ಗಣೇಶ ಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ, ಸ್ವಚ್ಛತೆ ಕಾಪಾಡುವ ಹಾಗೂ ಇನ್ನಿತರೆ ಸೂಚನೆಗಳನ್ನು ಕಡ್ಡಾಯವಾಗಿ ಅನುಮತಿಯ ಆದೇಶ ಪತ್ರದಲ್ಲಿ ವಿವರಣೆ ಸಮೇತ ಆದೇಶ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಫೆಕ್ಸ್, ಬ್ಯಾನರ್ ಅಳವಡಿಸುವುದು ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಸಾರ್ವಜನಿಕರು ಸಹಕರಿಸಲು ಬಿಬಿಎಂಪಿ ಆಯುಕ್ತರಿಂದ ಮನವಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:27 pm, Fri, 1 September 23

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ