ಬಿಬಿಎಂಪಿ ಶಾಲೆ-ಕಾಲೇಜುಗಳಿಗೆ ಖಾಸಗಿ ಅನುದಾನಕ್ಕೆ ಅವಕಾಶ: ಶೈಕ್ಷಣಿಕ ಅಭಿವೃದ್ಧಿಗೆ ಹೊಸ ಕ್ರಮ

ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಶಾಲೆ, ಕಾಲೇಜುಗಳ ಶೈಕ್ಷಣಿಕ ಅಭಿವೃದ್ಧಿಗೆ ಹೊಸ ಕ್ರಮ ಕೈಗೊಳ್ಳಲು ಪಾಲಿಕೆ ಮುಂದಾಗಿದೆ. ಇನ್ನು ಮುಂದೆ ಈ ಶಾಲೆ, ಕಾಲೇಜುಗಳ ಶೈಕ್ಷಣಿಕ ಅಭಿವೃದ್ಧಿಗೆ ಖಾಸಗಿಯವರೂ ಅನುದಾನ ನೀಡಬಹುದಾಗಿದೆ. ಈ ಬಗ್ಗೆ ಈಗಾಗಲೇ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಆಸಕ್ತರು ಹೇಗೆ ಅನುದಾನ ನೀಡುವುದು? ಪ್ರಕ್ರಿಯೆ ಏನು ಇತ್ಯಾದಿ ವಿವರಗಳು ಇಲ್ಲಿವೆ.

ಬಿಬಿಎಂಪಿ ಶಾಲೆ-ಕಾಲೇಜುಗಳಿಗೆ ಖಾಸಗಿ ಅನುದಾನಕ್ಕೆ ಅವಕಾಶ: ಶೈಕ್ಷಣಿಕ ಅಭಿವೃದ್ಧಿಗೆ ಹೊಸ ಕ್ರಮ
ಬಿಬಿಎಂಪಿ ಶಾಲೆ-ಕಾಲೇಜುಗಳಿಗೆ ಖಾಸಗಿ ಅನುದಾನಕ್ಕೆ ಅವಕಾಶ: ಶೈಕ್ಷಣಿಕ ಅಭಿವೃದ್ಧಿಗೆ ಹೊಸ ಕ್ರಮ
Follow us
| Updated By: ಗಣಪತಿ ಶರ್ಮ

Updated on: Jun 15, 2024 | 11:53 AM

ಬೆಂಗಳೂರು, ಜೂನ್ 15: ಬಿಬಿಎಂಪಿ ಶಾಲೆ, ಕಾಲೇಜುಗಳ (BBMP School Colleges) ಶೈಕ್ಷಣಿಕ ಅಭಿವೃದ್ಧಿಗೆ ಹೊಸ ಕ್ರಮ ಕೈಗೊಳ್ಳಲಾಗುತ್ತಿದ್ದು, ಇನ್ನು ಮುಂದೆ ಖಾಸಗಿ ಅನುದಾನಕ್ಕೆ (Private Fund) ಅವಕಾಶ ಮಾಡಿಕೊಡಲಾಗುತ್ತದೆ. ಬಿಬಿಎಂಪಿಯ ಶಿಶುವಿಹಾರ ಸೇರಿದಂತೆ ಶಾಲಾ- ಕಾಲೇಜುಗಳ ಶೈಕ್ಷಣಿಕ ಅಭಿವೃದ್ಧಿಗೆ ಆಸಕ್ತ ಸಂಘ-ಸಂಸ್ಥೆಗಳು, ಖಾಸಗಿ ಕಂಪನಿಗಳು ಇನ್ನು ಮುಂದೆ ಅನುದಾನ ನೀಡಬಹುದಾಗಿದೆ. ಇದಕ್ಕೆ ಬಿಬಿಎಂಪಿ ಅವಕಾಶ ಮಾಡಿಕೊಡುತ್ತಿದೆ.

ಪಾಲಿಕೆ ವ್ಯಾಪ್ತಿಯಲ್ಲಿರುವ 93 ಶಿಶುವಿಹಾರ, 16 ಪ್ರಾಥಮಿಕ, 33 ಪ್ರೌಢಶಾಲೆ, 18 ಪದವಿ ಪೂರ್ವ ಕಾಲೇಜು, 42 ಸ್ನಾತಕೋತ್ತರ ಕೇಂದ್ರಗಳು 25,500ಕ್ಕೂ ಹೆಚ್ಚು ಬಡ ಹಾಗೂ ಎಲ್ಲಾ ವರ್ಗದ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ನೀಡುತ್ತಿವೆ. ಈ ಶಾಲಾ, ಕಾಲೇಜುಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸಂಘ-ಸಂಸ್ಥೆಗಳ ಅಡಿಯಲ್ಲಿ ಅನುದಾನ ನೀಡಲು ಅವಕಾಶ ನೀಡಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಶಾಲೆಗಳಲ್ಲಿ ದಾಖಲಾತಿ ಇಳಿಕೆ, ಏಕಾಏಕಿಯಾಗಿ ಶೇ 40 ರಷ್ಟು ಕುಸಿತ!

ಮೂರು ಮಾದರಿಯಲ್ಲಿ ಒಡಂಬಡಿಕೆ ಮಾಡಿಕೊಳ್ಳಲು ಅವಕಾಶ ನೀಡಿರುವ ಬಗ್ಗೆ ಸುತ್ತೋಲೆಯಲ್ಲಿ ಉಲ್ಲೇಖಸಲಾಗಿದೆ. ಆಸಕ್ತ ಸಂಘ-ಸಂಸ್ಥೆಗಳು, ಖಾಸಗಿ ಕಂಪನಿಗಳು ಶಿಕ್ಷಣ ವಿಭಾಗ ಸಂಪರ್ಕಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರು ಶಿಕ್ಷಣ ವಿಭಾಗದ ಹಿರಿಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಲು ಕೋರಲಾಗಿದೆ. ಮೊಬೈಲ್ ಸಂಖ್ಯೆ 2- 94801 80152, ಅಥವಾ ಇಮೇಲ್ ಐಡಿ eoeducation@yahoo.in ಅಥವಾ specialcommissioner education@gmail.com ಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ