ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ಕ್ರಮಕೈಗೊಳ್ಳಿ: ಬಿಬಿಎಂಪಿ ಹಾಗೂ ಸರ್ಕಾರಕ್ಕೆ ಹೈಕೋರ್ಟ ಸೂಚನೆ

| Updated By: ವಿವೇಕ ಬಿರಾದಾರ

Updated on: Sep 12, 2022 | 7:22 PM

ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಸಂಬಂಧ ಹೈಕೋರ್ಟ ಸರ್ಕಾರ ಹಾಗೂ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದೆ.

ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ಕ್ರಮಕೈಗೊಳ್ಳಿ: ಬಿಬಿಎಂಪಿ ಹಾಗೂ ಸರ್ಕಾರಕ್ಕೆ ಹೈಕೋರ್ಟ ಸೂಚನೆ
ಕರ್ನಾಟಕ ಉಚ್ಚ ನ್ಯಾಯಾಲಯ
Follow us on

ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಸಂಬಂಧ ಹೈಕೋರ್ಟ ಸರ್ಕಾರ ಮತ್ತು ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದೆ. 2019 ಜೂ.18 ರಂದು ಹೈಕೋರ್ಟ, ರಾಜಕಾಲುವೆ ಒತ್ತುವರಿ ಸರ್ವೆ ನಡೆಸಿ ತೆರವು ಮಾಡುವಂತೆ ಆದೇಶ ನೀಡಿತ್ತು. ಈ ಆದೇಶವನ್ನು ಸರ್ಕಾರ ಮತ್ತು ಬಿಬಿಎಂಪಿ ಪಾಲಿಸದ ಹಿನ್ನೆಲೆ ಹೈಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ.

“2019ರ ಜೂ.18ರಂದೇ ರಾಜಕಾಲುವೆ ಒತ್ತುವರಿ ಸರ್ವೆ ನಡೆಸಿ ತೆರವಿಗೆ ಆದೇಶಿಸಿದ್ದೆವು. ಕೆರೆಗಳ ಒತ್ತುವರಿ ತಡೆಗೆ ಸಿಸಿಕ್ಯಾಮರಾ ಅಳವಡಿಕೆಗೂ ಸೂಚಿಸಿದ್ದೆವು‌‌‌. ಹೈಕೋರ್ಟ್ ಆದೇಶ ಪಾಲಿಸಿದ್ದರೆ ಈಗ ಪ್ರವಾಹ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ”, ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ಕ್ರಮಕೈಗೊಳ್ಳಿ ಎಂದು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ  ಹೈಕೋರ್ಟ್ ನಿರ್ದೇಶನ ನೀಡಿದೆ.

ಹಿನ್ನಲೆ

2019 ರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕು ಎಂದು ಕೋರಿ ಸಿಟಿಜನ್ಸ್ ಆಕ್ಷನ್ ಗ್ರೂಪ್ ಕಾರ್ಯದರ್ಶಿ ನೊಮಿತಾ ಚಾಂಡಿ ಹಾಗೂ ಜೆ.ಪಿ.ನಗರ 4ನೇ ಹಂತದ ಡಾಲರ್ಸ್ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಗುಂಡಾ ಭಟ್‌ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್​​ ಜೂನ್​ 18 2019 ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆರೆ, ರಾಜಕಾಲುವೆ ಒತ್ತುವರಿಯನ್ನು ಸರ್ವೆ ನಡೆಸಿ ತೆರವುಗೊಳಿಸಬೇಕು ಎಂದು ಆದೇಶ ನೀಡಿತ್ತು. ಅಲ್ಲದೇ ಒತ್ತುವರಿ ತಡೆಗೆ ಕೆರೆಗಳ ಸುತ್ತಮುತ್ತ ಸಿಸಿಕ್ಯಾಮರಾ ಅಳವಡಿಸಬೇಕು. ಕೆರೆ ಸಂರಕ್ಷಣೆ ಕುರಿತು ಜನರಲ್ಲಿ ಜನಜಾಗೃತಿಯನ್ನು ಮೂಡಿಸುವುದರ ಜೊತೆಗೆ, ಕೆರೆಗೆ ತ್ಯಾಜ್ಯ ಎಸೆಯುವ, ಕಲುಷಿತಗೊಳಿಸುವವರ ವಿರುದ್ಧ ಕ್ರಿಮಿನಲ್ ಕೇಸ್‌ ದಾಖಲಿಸಬೇಕು ಎಂದು ಬಿಬಿಎಂಪಿ ಹಾಗೂ ರಾಜ್ಯ ಸರಕಾರಕ್ಕೆ ಸೂಚಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:08 pm, Mon, 12 September 22