AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಫೆ.26ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಮಹಾ ಶಿವರಾತ್ರಿ ಹಬ್ಬದ ದಿನದಂದು ಪರಶಿವನ ಆಶೀರ್ವಾದವನ್ನು ಪಡೆದುಕೊಳ್ಳುವುದಕ್ಕಾಗಿ ಭಕ್ತರು ನಾನಾ ಕಾರ್ಯಗಳನ್ನು ಮಾಡುತ್ತಾರೆ. ಯಾವ ವ್ಯಕ್ತಿ ಶಿವನಿಗೆ ಪ್ರಿಯವಾಗುವಂತಹ ಕೆಲಸಗಳನ್ನು ಮಾಡುತ್ತಾನೋ ಅವನ ಜೀವನದಲ್ಲಿನ ಸಕಲ ಸಂಕಷ್ಟಗಳು ದೂರಾಗುತ್ತದೆ ಎನ್ನುವ ನಂಬಿಕೆಯಿದೆ. ಹೀಗಾಗಿ ಈ ದಿನದಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧಿಸಲಾಗಿದೆ.

ಬೆಂಗಳೂರಿನಲ್ಲಿ ಫೆ.26ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Feb 24, 2025 | 4:44 PM

Share

ಬೆಂಗಳೂರು, (ಫೆಬ್ರವರಿ 24): ಮಹಾಶಿವರಾತ್ರಿ ಹಬ್ಬದ (Maha Shivaratri Festival) ಪ್ರಯುಕ್ತ ಫೆಬ್ರವರಿ 26ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧಿಸಲಾಗಿದೆ. ಎಲ್ಲಾ ರೀತಿಯ ಮಾಂಸ ಮಾರಾಟ ಮಾಡದಂತೆ ಬಿಬಿಎಂಪಿ ಆದೇಶ ಹೊರಡಿಸಿದೆ. ಹೀಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲ ಕಸಾಯಿಖಾನೆ ಮುಚ್ಚುವಂತೆ ಆದೇಶಿಸಿದ್ದು, ಒಂದು ವೇಳೆ ಆದೇಶ ಉಲ್ಲಂಘಿಸಿ ಪ್ರಾಣಿ ವಧೆ, ಮಾಂಸ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ-2025ರ ಪ್ರಯುಕ್ತ 23ನೇ ಜನವರಿಯಿಂದ 17ನೇ ಫೆಬ್ರವರಿ 2025ರವರೆಗೆ ಮಾಂಸ ಮಾರಾಟವನ್ನು ನಿಷೇಧಿಸಲಾಗಿತ್ತು. ಯಲಹಂಕ ವಲಯದ ಏರ್‌ಪೋರ್ಸ್‌ ಸ್ಟೇಷನಿಂದ 13 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಎಲ್ಲ ಮಾಂಸ ಮಾರಾಟದ ಉದ್ದಿಮೆಗಳು ಮುಚ್ಚಬೇಕು ಹಾಗೂ ಹೋಟೆಲ್ ಮತ್ತು ಡಾಬಾಗಳಲ್ಲಿ ಮಾಂಸಾಹಾರ ತಯಾರಿಕೆ ಮತ್ತು ಮಾರಾಟವನ್ನು ನಿಷೇಧ ಮಾಡಲಾಗಿತ್ತು. ಇದಕ್ಕೆ ವ್ಯಾಪಕ ವಿರೋಧಗಳು ವ್ಯಕ್ತವಾಗಿದ್ದವು. ಇದೀಗ ಮಹಾಶಿವರಾತ್ರಿಯಂದು ಫೆ.26ರಂದು ಸಹ ಮತ್ತೊಮ್ಮೆ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: Mahashivratri 2025: ಮಹಾಶಿವರಾತ್ರಿ ಉಪವಾಸದ ಸಮಯದಲ್ಲಿ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು?

ಫೆಬ್ರವರಿ  26ರ ಬುಧವಾರ ಮಹಾಶಿವರಾತ್ರಿ ಹಬ್ಬ . ಈ ಹಬ್ಬ ಅತ್ಯಂತ ಶಕ್ತಿಯುತ ಮತ್ತು ಪವಿತ್ರ ಹಿಂದೂ ಹಬ್ಬಗಳಲ್ಲಿ  ಒಂದಾಗಿದೆ. ಈ ದಿನ ಭಕ್ತರು ಶಿವನ ಪ್ರೀತಿ ಮತ್ತು ಭಕ್ತಿಯಲ್ಲಿ ಮುಳುಗುತ್ತಾರೆ. ದೈವಿಕ ಶಕ್ತಿಗಳೊಂದಿಗೆ ಸಂಪರ್ಕ ಸಾಧಿಸಲು ರಾತ್ರಿಯನ್ನು ಧ್ಯಾನ, ಜಪ, ನೃತ್ಯ ಇನ್ನಿತರ ಧಾರ್ಮಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಾರೆ. ಈ ದಿನ ಶಿವನ ಭಕ್ತರು ಬೆಳಗ್ಗೆಯಿಂದ ಸಂಜೆ ವರೆಗೂ ಉಪವಾಸ ಮಾಡುತ್ತಾರೆ.

ಶಿವನು ಲಿಂಗ ರೂಪವನ್ನು ಪಡೆದುಕೊಂಡ ದಿನವನ್ನೇ ಮಹಾ ಶಿವರಾತ್ರಿ ಎಂದು ಕರೆಯಲಾಗುತ್ತದೆ. ಇದಕ್ಕೆ ಇನ್ನೊಂದು ಕಾರಣವೆಂದರೆ ಮಹಾ ಶಿವರಾತ್ರಿಯಂದು ರಾತ್ರಿ ಪೂಜೆಗೆ ಹೆಚ್ಚಿನ ಮಹತ್ವವಿದೆ. ಮಹಾ ಶಿವರಾತ್ರಿ ಹಬ್ಬದ ದಿನದಂದು ಪರಶಿವನ ಆಶೀರ್ವಾದವನ್ನು ಪಡೆದುಕೊಳ್ಳುವುದಕ್ಕಾಗಿ ಭಕ್ತರು ನಾನಾ ಕಾರ್ಯಗಳನ್ನು ಮಾಡುತ್ತಾರೆ. ಯಾವ ವ್ಯಕ್ತಿ ಶಿವನಿಗೆ ಪ್ರಿಯವಾಗುವಂತಹ ಕೆಲಸಗಳನ್ನು ಮಾಡುತ್ತಾನೋ ಅವನ ಜೀವನದಲ್ಲಿನ ಸಕಲ ಸಂಕಷ್ಟಗಳು ದೂರಾಗುತ್ತದೆ ಎನ್ನುವ ನಂಬಿಕೆಯಿದೆ.

Published On - 4:40 pm, Mon, 24 February 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ