ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದ ಬಿಬಿಎಂಪಿ, ನಾಗರಿಕರು ನೋಂದಣಿ ಯಾವಾಗ ಮಾಡಿಕೊಳ್ಳಬಹುದು? ಇಲ್ಲಿದೆ ಮಾಹಿತಿ

|

Updated on: Jun 04, 2023 | 7:37 AM

ಲೋಕಸಭೆ ಚುನಾವಣೆಗೆ ಇನ್ನೊಂದು ವರ್ಷವಷ್ಟೇ ಬಾಕಿ ಇದೆ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಬಿಎಂಪಿ ಸಿದ್ಧತೆಗಳನ್ನು ಆರಂಭಿಸಿದ್ದು, ಅಧಿಕಾರಿಗಳಿಗೆ ತರಬೇತಿಯನ್ನು ನೀಡಲು ಮುಂದಾಗಿದೆ.

ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದ ಬಿಬಿಎಂಪಿ, ನಾಗರಿಕರು ನೋಂದಣಿ ಯಾವಾಗ ಮಾಡಿಕೊಳ್ಳಬಹುದು? ಇಲ್ಲಿದೆ ಮಾಹಿತಿ
ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದ ಬಿಬಿಎಂಪಿ
Follow us on

ಬೆಂಗಳೂರು: ಲೋಕಸಭೆ ಚುನಾವಣೆಗೆ (Lok Sabha Elections 2024) ಇನ್ನೊಂದು ವರ್ಷವಷ್ಟೇ ಬಾಕಿ ಇದೆ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಬಿಎಂಪಿ (BBMP) ಸಿದ್ಧತೆಗಳನ್ನು ಆರಂಭಿಸಿದ್ದು, ಅಧಿಕಾರಿಗಳಿಗೆ ತರಬೇತಿಯನ್ನು ನೀಡಲು ಆರಂಬಿಸಿದೆ. ಅಧಿಕಾರಿಗಳಿಗೆ ತರಬೇತಿ ನೀಡುವುದರಿಂದ ಹಿಡಿದು ಮತದಾರರ ಪಟ್ಟಿ ಪರಿಷ್ಕರಣೆಯವರೆಗೆ ಹಲವಾರು ಚಟುವಟಿಕೆಗಳನ್ನು ಯೋಜಿಸಿದೆ.

ಈ ಅವಧಿಯಲ್ಲಿ ನಾಗರಿಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬಹುದು. ಅಂತಿಮ ಮತದಾರರ ಪಟ್ಟಿಯನ್ನು ಜನವರಿ 5 ರಂದು ಪ್ರಕಟಿಸಲಾಗುತ್ತದೆ. ಬ್ಲಾಕ್ ಮಟ್ಟದ ಅಧಿಕಾರಿಗಳು (BLOs) ಸೇರಿದಂತೆ ಚುನಾವಣಾ ಅಧಿಕಾರಿಗಳ ತರಬೇತಿ ಜುಲೈ 20 ರಂದು ಮುಕ್ತಾಯಗೊಳ್ಳಲಿದೆ. BLO ಗಳು ಜುಲೈ 21 ರಿಂದ ಆಗಸ್ಟ್ 21 ರವರೆಗೆ ಮನೆ-ಮನೆ ಪರಿಶೀಲನೆ ಸಮೀಕ್ಷೆ ಕೈಗೊಳ್ಳಲಿದ್ದಾರೆ.

ಇದನ್ನೂ ಓದಿ: BBMP Election: 8 ವರ್ಷದಿಂದ ನಡೆಯದ ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್ ಪ್ಲಾನ್

ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಇದೇ ರೀತಿಯ ಕಸರತ್ತನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೈಗೊಂಡಿತ್ತು. ಆದರೆ ನಾಗರಿಕ ಸಂಸ್ಥೆಯು ವಿವಿಧ ರಾಜಕೀಯ ಮುಖಂಡರೊಂದಿಗೆ ವಾಣಿಜ್ಯ ಸಂಪರ್ಕ ಹೊಂದಿರುವ ಎನ್‌ಜಿಒ ಜೊತೆ ಪಾಲುದಾರಿಕೆ ಹೊಂದಿದ್ದರಿಂದ ವಿವಾದಕ್ಕೆ ಸಿಲುಕಿತ್ತು.

ನೆನಪಿಡಬೇಕಾದ ಅಂಶಗಳು

  • ಚುನಾವಣಾ ಅಧಿಕಾರಿಗಳ ತರಬೇತಿ: ಜೂನ್ 1 ರಿಂದ ಜುಲೈ 20
  • BLO ಗಳಿಂದ ಮನೆ-ಮನೆ ಪರಿಶೀಲನೆ: ಜುಲೈ 21 ರಿಂದ ಆಗಸ್ಟ್ 21
  • ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 22 ರಿಂದ ಸೆಪ್ಟೆಂಬರ್ 29
  • ಹಕ್ಕುಗಳು, ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿ: ಅಕ್ಟೋಬರ್ 17 ರಿಂದ ನವೆಂಬರ್ 30
  • ಮತದಾರರ ಪಟ್ಟಿಯ ಅಂತಿಮ ಪ್ರಕಟಣೆ: ಜನವರಿ 5, 2024

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ