BBMP Budget: ಬೆಂಗಳೂರಿನ ರಸ್ತೆ ಅಭಿವೃದ್ಧಿ, ಮೂಲಸೌಕರ್ಯ ಕ್ಷೇತ್ರಕ್ಕೆ ಬಿಬಿಎಂಪಿ ಬಜೆಟ್​ನಲ್ಲಿ ಸಿಕ್ಕಿದ್ದೇನು? ಇಲ್ಲಿದೆ ವಿವರ

2024-25ನೇ ಸಾಲಿನ ಬಿಬಿಎಂಪಿ ಬಜೆಟ್​ನಲ್ಲಿ ಬೆಂಗಳೂರು ನಗರದ ಮೂಲಸೌಕರ್ಯ ಕ್ಷೇತ್ರಕ್ಕೆ ಸಿಕ್ಕ ಅನುದಾನವೆಷ್ಟು? ಯೋಜನೆಗಳೇನೇನು? ರಸ್ತೆ ನಿರ್ಮಾಣ, ಅಭಿವೃದ್ಧಿ, ಅಗಲೀಕರಣಕ್ಕೆ ಮೀಸಲಿಟ್ಟ ಅನುದಾನ ಎಷ್ಟು? ನಗರದ ಯಾವೆಲ್ಲ ರಸ್ತೆಗಳು ಅಭಿವೃದ್ಧಿ ಹೊಂದಲಿವೆ? ಈ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

BBMP Budget: ಬೆಂಗಳೂರಿನ ರಸ್ತೆ ಅಭಿವೃದ್ಧಿ, ಮೂಲಸೌಕರ್ಯ ಕ್ಷೇತ್ರಕ್ಕೆ ಬಿಬಿಎಂಪಿ ಬಜೆಟ್​ನಲ್ಲಿ ಸಿಕ್ಕಿದ್ದೇನು? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Feb 29, 2024 | 12:58 PM

ಬೆಂಗಳೂರು, ಫೆಬ್ರವರಿ 29: ಬೆಂಗಳೂರು ಮಹಾನಗರ ಪಾಲಿಕೆಯ 2024-25ನೇ ಸಾಲಿನ ಬಜೆಟ್​​  (BBMP Budget) ಗುರುವಾರ ಮಂಡನೆಯಾಗಿದ್ದು, ರಸ್ತೆ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಕ್ಷೇತ್ರಕ್ಕೆ (Infrastructure) ಹಲವು ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಜತೆಗೆ, ಅನುದಾನವನ್ನೂ ಮೀಸಲಿಡಲಾಗಿದೆ. ಬಿಬಿಎಂಪಿ ವಿಶೇಷ ಅಯುಕ್ತ ಶಿವಾನಂದ ಕಲ್ಕೆರಿ ಬೆಂಗಳೂರಿನ ಟೌನ್ ಹಾಲ್​ನಲ್ಲಿ ಬಜೆಟ್ ಮಂಡನೆ ಮಾಡಿದ್ದು. ಬ್ರ್ಯಾಂಡ್ ಬೆಂಗಳೂರಿನ ಹೆಸರಲ್ಲಿ ಪ್ರತ್ಯೇಕ ESCROW ಖಾತೆ ತೆರೆಯುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಸಹಾಯವಾಗಲಿದೆ ಎಂದು ಅವರು ಹೇಳಿದ್ದಾರೆ.

ಸುರಂಗ ಮಾರ್ಗಕ್ಕೆ 200 ಕೋಟಿ ರೂ.

ಸುಗಮ ಸಂಚಾರ ಶೀರ್ಷಿಕೆಯಡಿ ಬೆಂಗಳೂರು ನಗರ ಸುಗಮ ಸಂಚಾರ ಯೋಜನೆ ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ಮೊದಲು 2 ಸ್ಥಳದಲ್ಲಿ ಸುರಂಗಮಾರ್ಗ ನಿರ್ಮಾಣ ಮಾಡಲು 200 ಕೋಟಿ ರೂ. ಮೀಸಲು ಇಡಲಾಗುವುದು. ಕನಕಪುರ ಮುಖ್ಯರಸ್ತೆಯಿಂದ ಬನ್ನೇರುಘಟ್ಟ ಮುಖ್ಯರಸ್ತೆ, ವಿಮಾನ ನಿಲ್ದಾಣಕ್ಕೆ ಸಂಪರ್ಕ ನೀಡುವ ಹೆಣ್ಣೂರು-ಬಾಗಲೂರು ರಸ್ತೆ ಅಗಲೀಕರಣ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ.

ಚಾಮರಾಜಪೇಟೆ, ಪಾದಾರಾಯನಪುರ ರಸ್ತೆ ಅಗಲೀಕರಣಕ್ಕೆ 130 ಕೋಟಿ ರೂ. ಮೀಸಲಿಡಲಾಗುವುದು. ಬಳ್ಳಾರಿ ರಸ್ತೆಯಿಂದ ಸಾದಹಳ್ಳಿ ಗೇಟ್ ವರೆಗೆ ರಸ್ತೆ ಅಗಲೀಕರಣ ಟಿಡಿಆರ್ ವಿತರಣೆ ಹಾಗೂ ಕೆಂಗೇರಿ ಉಪನಗರದಿಂದ ಮೈಸೂರು ರಸ್ತೆಗೆ ನೇರವಾಗಿ ಸಂಪರ್ಕ ಕಲ್ಪಿಸಲು ರೇಲ್ವೇ ಮೇಲ್ಸೇತುವೆ ನಿರ್ಮಾಣ ಮಾಡುವ ಬಗ್ಗೆ ಬಜೆಟ್​​ನಲ್ಲಿ ಘೋಷಣೆ ಮಾಡಲಾಗಿದೆ.

ಪರಿಶುದ್ಧ ಗಾಳಿ ಯೋಜನೆಯಡಿ 45 ಕಿಮೀ ಉದ್ದದ ಪಾದಚಾರಿ ಸ್ನೇಹಿ ನಡಿಗೆ ಪಥಗಳನ್ನು ಸ್ಥಾಪಿಸಲು 135 ಕೋಟಿ ರೂ. ಮೀಸಲಿಡಲಾಗುವುದು. ರಾಜಕಾಲುವೆ ಬಫರ್ ಝೋನ್ ನಲ್ಲಿ 300 ಕಿಮೀ ಉದ್ದದ ಜನ ಸ್ನೇಹಿ ಪಥ ನಿರ್ಮಿಸಲು 600 ಕೋಟಿ ರೂ. ಮೀಸಲಿಡಲಾಗುವುದು. ಲಘುವಾಹನ, ಸೈಕಲ್ ಪಥ, ನಡಿಗೆ ಮಾರ್ಗ ಯೋಜಿತ ಜನ ಸ್ನೇಹಿ ಪಥ ಇದಾಗಿರಲಿದೆ ಎಂದು ಬಜೆಟ್​​ನಲ್ಲಿ ಉಲ್ಲೇಖಿಸಲಾಗಿದೆ.

ಮೂಲಸೌಕರ್ಯ ಯೋಜನೆಗೆ ಇನ್ನೂ ಏನೇನು ಕೊಡುಗೆ?

  • ಚರಂಡಿ ಹೂಳೆತ್ತುವಿಕೆ, ನಿರ್ವಹಣೆಗೆ ತಲಾ 30 ಲಕ್ಷ ರೂ.
  • ರಸ್ತೆ ಗುಂಡಿ ಮುಚ್ಚಲು 15 ಲಕ್ಷ ರೂ.
  • ಪಾದಚಾರಿ ಮಾರ್ಗ ನಿರ್ವಹಣೆ ತಲಾ 25 ಲಕ್ಷ ರೂ.
  • ಮಾನ್ಸೂನ್ ಕಂಟ್ರೋಲ್ ರೂಂ ನಿರ್ವಹಣೆಗೆ 5 ಲಕ್ಷ ರೂ. ನಿಯೋಜನೆ
  • ಪ್ರತಿ ವಾಡ್೯ ಅಭಿವೃದ್ಧಿ ಕಾಮಗಾರಿಗಳಿಗೆ ತಲಾ 1.25 ಕೋಟಿ ರೂ.
  • ಒಟ್ಟು 225 ವಾಡ್೯ಗಳಲ್ಲಿ ನಿರ್ವಹಣೆ ಮತ್ತು ಅಭಿವೃದ್ಧಿ ಕಾಮಗಾರಿಗೆ 450 ಕೋಟಿ ರೂ.

ಇದನ್ನೂ ಓದಿ: ಬೆಂಗಳೂರಿನ ನೂರು ಕಡೆ SHE TOILET, ಪೌರಕಾರ್ಮಿಕ ವಿಶ್ರಾಂತಿ ತಾಣಕ್ಕೆ 10 ಕೋಟಿ ರೂ, ಇನ್ನೂ ಏನೇನಿದೆ?

ವೈಟ್ ಟಾಪಿಂಗ್​ಗೆ 800 ಕೋಟಿ ರೂ.

ಬೆಂಗಳೂರು ನಗರದಲ್ಲಿ 145 ಕಿಮೀ ರಸ್ತೆಗೆ ವೈಟ್ ಟಾಪಿಂಗ್​ಗೆ 800 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ. ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ ಸಂಪರ್ಕ ಮೇಲ್ಸೇತುವೆಗೆ 380 ಕೋಟಿ ರೂ. ಘೋಷಿಸಲಾಗಿದೆ. ಮೆಟ್ರೋ ಯೋಜನೆಯಲ್ಲಿ ಸಂಯುಕ್ತ ಮೆಟ್ರೋ-ರಸ್ತೆ ಮೇಲ್ಸೇತುವೆಗೆ 100ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ.

ಇಷ್ಟೇ ಅಲ್ಲದೆ, ಬನಶಂಕರಿ ವೃತ್ತದಲ್ಲಿ ಸ್ಕೈವಾಕ್ ನಿರ್ಮಾಣ, ಬಿಎಂಟಿಸಿ, ಮೆಟ್ರೋಗೆ ಹೊಂದಿಕೊಂಡಂತೆ ಸ್ಕೈವಾಕ್ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನ ಘೋಷಿಸಲಾಗಿದೆ.

ಇದನ್ನೂ ಓದಿ: ಬ್ರಾಂಡ್ ಬೆಂಗಳೂರು ಪರಿಕಲ್ಪನೆಯಡಿ ಆರೋಗ್ಯ ಸೇವೆ ಉನ್ನತಿಕರಣಕ್ಕೆ 200 ಕೋಟಿ

ನಗರ ಪಾರ್ಕಿಂಗ್​​ಗೆ ಏನೇನು ಯೋಜನೆ?

ಪಾಲಿಕೆ ಮೈದಾನಗಳ ತಳಭಾಗದಲ್ಲಿ ಅಂಡರ್ ಗ್ರೌಂಡ್ ಪಾರ್ಕಿಂಗ್ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ಹಮ್ಮಿಕೊಳ್ಳಲಾಗುತ್ತದೆ. ಈ ಯೋಜನೆಗೆ 5 ಕೋಟಿ ರೂ. ಅನುದಾನ ಘೋಷಿಸಲಾಗಿದೆ.

ಇನ್ನಷ್ಟು ಅನುದಾನ

  • ಮೇಲ್ಸೇತುವೆ, ಕಳಸೇತುವೆ ನಿರ್ವಹಣೆಗೆ 25 ಕೋಟಿ ರೂ. ಅನುದಾನ.
  • ಟ್ರಾಫಿಕ್ ಸಮಸ್ಯೆ ನಿರ್ವಹಣೆಗೆ 40 ಕೋಟಿ ರೂ. ಮೀಸಲು.
  • ಪಾಲಿಕೆಯ ಪ್ರತಿ ವಾರ್ಡ್ ನಿರ್ವಹಣೆಗೆ 75 ಲಕ್ಷ ರೂ.
  • ಪ್ರತಿ ವಾರ್ಡ್ ಅಭಿವೃದ್ಧಿಗೆ ತಲಾ 1ಕೋಟಿ 25 ಲಕ್ಷದಂತೆ 225 ವಾರ್ಡ್ ಗೆ 450 ಕೋಟಿ ರೂ. ಅನುದಾನ.
  • ಬ್ರ್ಯಾಂಡ್ ಬೆಂಗಳೂರು, ಸ್ವಚ್ಚ ಬೆಂಗಳೂರು ಅಡಿ ಘನತ್ಯಾಜ್ಯ ನಿರ್ವಹಣೆ
  • ಕೆಂಗೇರಿ ಉಪನಗರ – ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸಲು ಮೇಲ್ಸೇತುವೆ
  • 300 ಕಿಮೀ ಉದ್ದದ ಜನಸ್ನೇಹಿ ಪಥ ನಿರ್ಮಿಸಲು 600 ಕೋಟಿ ರೂ.
  • ಚರಂಡಿ ಹೂಳೆತ್ತುವಿಕೆ, ನಿರ್ವಹಣೆಗೆ ತಲಾ 30 ಲಕ್ಷ ರೂ.
  • ಪ್ರತಿ ವಾರ್ಡ್ ಅಭಿವೃದ್ಧಿ ಕಾಮಗಾರಿಗಳಿಗೆ ತಲಾ 1.25 ಕೋಟಿ ರೂ.
  • ನಿರ್ವಹಣೆ ಮತ್ತು ಅಭಿವೃದ್ಧಿ ಕಾಮಗಾರಿಗೆ 450 ಕೋಟಿ ರೂ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಭಾರತದ ಅತಿದೊಡ್ಡ ಸಕ್ಕರೆ ಕಾರ್ಖಾನೆ ಚಿಂಚೋಳಿಯಲ್ಲಿ ಸ್ಥಾಪಿಸಿರುವೆ: ಯತ್ನಾಳ್
ಭಾರತದ ಅತಿದೊಡ್ಡ ಸಕ್ಕರೆ ಕಾರ್ಖಾನೆ ಚಿಂಚೋಳಿಯಲ್ಲಿ ಸ್ಥಾಪಿಸಿರುವೆ: ಯತ್ನಾಳ್
ಕೊಪ್ಪಳದಲ್ಲಿ ಶುರುವಾದ ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ರ‍್ಯಾಲಿ
ಕೊಪ್ಪಳದಲ್ಲಿ ಶುರುವಾದ ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ರ‍್ಯಾಲಿ
ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್