ಚಿತಾಗಾರಗಳಲ್ಲಿ ವಸೂಲಿ ತಡೆಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಧ್ಯಪ್ರವೇಶ; ಆದೇಶ ಪಾಲನೆಗೆ ಖಡಕ್ ಸೂಚನೆ

ಚಟ್ಟಕ್ಕೆ ₹ 300, ಅಸ್ಥಿ ಕೊಡುವ ಮಡಿಕೆಗೆ ₹ 250 ನಿಗದಿಪಡಿಸಲಾಗಿದೆ. ಈ ಪೈಕಿ ₹ 350 ಹಣವನ್ನು ಬಿಬಿಎಂಪಿ ನೀಡುತ್ತದೆ. ಮೃತರ ಸಂಬಂಧಿಕರಿಂದ ₹ 250 ಪಡೆಯಬೇಕು ಎಂದು ಆಯುಕ್ತರು ಸೂಚಿಸಿದ್ದಾರೆ.

ಚಿತಾಗಾರಗಳಲ್ಲಿ ವಸೂಲಿ ತಡೆಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಧ್ಯಪ್ರವೇಶ; ಆದೇಶ ಪಾಲನೆಗೆ ಖಡಕ್ ಸೂಚನೆ
ಅಂತ್ಯಸಂಸ್ಕಾರಕ್ಕೆ ಕ್ಯೂ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 15, 2021 | 6:06 PM

ಬೆಂಗಳೂರು: ನಗರದ ಚಿತಾಗಾರಗಳಲ್ಲಿ ಅಂತ್ಯಸಂಸ್ಕಾರಕ್ಕೆ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವ ಆರೋಪಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್​ ಗುಪ್ತಾ ಹಿಂದಿನ ಆದೇಶ ಪಾಲನೆ ಮಾಡುವಂತೆ ಖಡಕ್ ಸೂಚನೆ ನೀಡಿದ್ದಾರೆ. ಚಟ್ಟಕ್ಕೆ ₹ 300, ಅಸ್ಥಿ ಕೊಡುವ ಮಡಿಕೆಗೆ ₹ 250 ನಿಗದಿಪಡಿಸಲಾಗಿದೆ. ಈ ಪೈಕಿ ₹ 350 ಹಣವನ್ನು ಬಿಬಿಎಂಪಿ ನೀಡುತ್ತದೆ. ಮೃತರ ಸಂಬಂಧಿಕರಿಂದ ₹ 250 ಪಡೆಯಬೇಕು ಎಂದು ಆಯುಕ್ತರು ಸೂಚಿಸಿದ್ದಾರೆ. ಈ ಕುರಿತು ಬಿಬಿಎಂಪಿ ಈ ಹಿಂದೆಯೇ ಆದೇಶ ಹೊರಡಿಸಿತ್ತು. ಅದನ್ನು ಪಾಲಿಸಬೇಕೆಂದು ಗೌರವ್ ಗುಪ್ತಾ ಸ್ಪಷ್ಟವಾಗಿ ಹೇಳಿದ್ದಾರೆ.

ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಹೆಚ್ಚು ಹಣ ಪಡೆಯುತ್ತಿರುವ ಕುರಿತು ನಗರದ ನಾಗರಿಕರು ಗಂಭೀರ ಆರೋಪ ಮಾಡಿದ್ದಾರೆ. ಅಂತ್ಯಸಂಸ್ಕಾರಕ್ಕೆ 25ರಿಂದ 30 ಸಾವಿರ ರೂಪಾಯಿಯಷ್ಟು ಹಣ ಪಡೆದುಕೊಳ್ಳಲಾಗುತ್ತಿದೆ. ಆಸ್ಪತ್ರೆಯಿಂದ ಆಂಬುಲೆನ್ಸ್​ಗಳಲ್ಲಿ ಶವ ತಂದು ಚಿತಾಗಾರದಲ್ಲಿ ಅಂತ್ಯಸಂಸ್ಕಾರ ಮಾಡಲು ದುಬಾರಿ ಮೊತ್ತ ವಸೂಲಿ ಮಾಡುತ್ತಿದ್ದಾರೆ ಎಂದು ಖಾಸಗಿ ಆಂಬುಲೆನ್ಸ್​ಗಳ ವಿರುದ್ಧ ನಾಗರಿಕರು ಗಂಭೀರ ಆರೋಪ ಮಾಡಿದ್ದಾರೆ.

ಚಿತಾಗಾರದಲ್ಲಿ ಕೊವಿಡ್ ಮೃತದೇಹಗಳ ಕ್ಯೂ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ ನಿನ್ನೆ ಸುಮಾರು 15 ಕೊವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಅವರೆಲ್ಲರ ಶವಗಳನ್ನು ಯಲಹಂಕ ಚಿತಾಗಾರಕ್ಕೆ ಕಳುಹಿಸಿದ್ದರು. ಒಂದೇ ಚಿತಾಗಾರಕ್ಕೆ ಕಳುಹಿಸಿದ್ದರಿಂದ ಹೀಗಾಗಿದೆ. ಎಲ್ಲ ಚಿತಾಗಾರಗಳಲ್ಲೂ ಜಂಟಿ ಆಯುಕ್ತರಿಂದ ಪರಿವೀಕ್ಷಣೆ ಮಾಡಿಸಲಾಗುತ್ತಿದೆ. ಈ ಕುರಿತು ಬಿಬಿಎಂಪಿ ಆಯುಕ್ತರ ಜೊತೆ ಈ ಬಗ್ಗೆ ಮಾತನಾಡಿದ್ದೇನೆ. ಸೂಕ್ತ ನಿರ್ಣಯಗಳನ್ನ ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ ಎಂದು ಸಚಿವರ ತಿಳಿಸಿದ್ದಾರೆ.

ಹೋಟೆಲ್​ಗಳಲ್ಲಿ ಕೋವಿಡ್ ಕೇರ್ ಸೆಂಟರ್ ಬೆಂಗಳೂರಿನ ಖಾಸಗಿ ಹೋಟೆಲ್‌ಗಳನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲು ಸರ್ಕಾರ ನಿರ್ಧರಿಸಿದೆ. ಕಾರ್ಪೋರೇಟ್ ಆಸ್ಪತ್ರೆಗಳೇ ಕೋವಿಡ್ ಕೇರ್ ಸೆಂಟರ್​ನ ಜವಾಬ್ದಾರಿ ವಹಿಸಿಕೊಳ್ಳುತ್ತವೆ. ಗಂಭೀರ ಸ್ವರೂಪದ ರೋಗಿಗಳನ್ನು ಆಸ್ಪತ್ರೆಯಲ್ಲಿ ದಾಖಲು‌ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ದೇಶದಲ್ಲಿ ಕೊರೊನಾ 2ನೇ ಅಲೆ ಭಾರತದಲ್ಲಿ ಇಂದು 24 ಗಂಟೆಯಲ್ಲಿ (ಬೆಳಿಗ್ಗೆ 9 ಗಂಟೆ ವೇಳೆಗೆ) 2,00,739 ಜನರಿಗೆ ಕೊರೊನಾ ದೃಢಪಟ್ಟಿತ್ತು. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,40,74,564ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ 24 ಗಂಟೆಯಲ್ಲಿ ಕೊರೊನಾಗೆ 1,038 ಜನರು ಬಲಿಯಾಗಿದ್ದಾರೆ. ಕೊರೊನಾದಿಂದ ದೇಶದಲ್ಲಿ ಈವರೆಗೆ 1,73,123 ಜನರು ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ 1,24,29,564 ಜನರು ಗುಣಮುಖರಾಗಿದ್ದಾರೆ. 14,71,877 ಸಕ್ರಿಯ ಪ್ರಕರಣಗಳು ದೇಶದಲ್ಲಿವೆ. 11,44,93,238 ಜನರಿಗೆ ಕೊವಿಡ್ ಲಸಿಕೆ ನೀಡಲಾಗಿದೆ.

(BBMP Chief Commissioner intervene to prevent taking extra money crematorium)

ಇದನ್ನೂ ಓದಿ: ರಾಜಧಾನಿ ಬೆಂಗಳೂರಿನಲ್ಲಿ ಚಿತಾಗಾರದ ಎದುರು ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಕ್ಯೂ

ಇದನ್ನೂ ಓದಿ: ಕೊರೊನಾ ಮಾರಿಗೆ ಹೆದರಿ ಮುಂಬೈ ತೊರೆದ ಮುಕೇಶ್​ ಅಂಬಾನಿ ಕುಟುಂಬ ಉಳಿದಿಕೊಂಡಿರುವುದು ಎಲ್ಲಿ?

Published On - 6:02 pm, Thu, 15 April 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್