ಬಿಬಿಎಂಪಿ ಗುತ್ತಿಗೆದಾರರಿಂದ ದೂರು: ರಾಜ್ಯಪಾಲರನ್ನು ಭೇಟಿಯಾದ ಬಿಬಿಎಂಪಿ ಮುಖ್ಯ ಆಯುಕ್ತ
ಕಾಮಗಾರಿ ಬಿಲ್ ಪಾವತಿ ವಿಳಂಬ ವಿಚಾರವಾಗಿ ಬಿಬಿಎಂಪಿ ಗುತ್ತಿಗೆದಾರರು ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ವಿಚಾರವಾಗಿ ಆಹ್ವಾನ ಬಂದ ಹಿನ್ನೆಲೆ ರಾಜ್ಯಪಾಲರನ್ನು ಭೇಟಿಯಾದ ಆಯುಕ್ತ ತುಷಾರ್ ಗಿರಿನಾಥ್, ಬಾಕಿ ಬಿಲ್ಗಳ ಮಾಹಿತಿ ನೀಡಿದರು.
ಬೆಂಗಳೂರು, ಆಗಸ್ಟ್ 10: ಕಾಮಗಾರಿ ಬಿಲ್ ಪಾವತಿ ವಿಳಂಬ ವಿಚಾರವಾಗಿ ಬಿಬಿಎಂಪಿ (BBMP) ಗುತ್ತಿಗೆದಾರರು ನೀಡಿದ ದೂರಿನ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರನ್ನು ಭೇಟಿಯಾದ ಆಯುಕ್ತ ತುಷಾರ್ ಗಿರಿನಾಥ್ (Tushar Girinath), ಬಾಕಿ ಇರುವ ಬಿಲ್ಗಳ ಮಾಹಿತಿ ನೀಡಿದರು.
ಸರ್ಕಾರದ ವ್ಯಾಪ್ತಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಸಂಪೂರ್ಣ ಕಾಮಗಾರಿಗಳ ಬಗ್ಗೆ ಬಿಬಿಎಂಪಿ ಆಯುಕ್ತರು ರಾಜ್ಯಪಾಲರಿಗೆ ಮಾಹಿತಿ ನೀಡಿದರು. ಸರ್ಕಾರಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ 5000 ಸಾವಿರ ಕೋಟಿ ಬಿಲ್ ಬಾಕಿ ಇದ್ದು, ಸದ್ಯ 670 ಕೋಟಿ ಬಿಬಿಎಂಪಿ ಖಾತೆಗೆ ಸರ್ಕಾರ ವರ್ಗಾವಣೆ ಮಾಡಿದೆ.
ಇದನ್ನೂ ಓದಿ: ಚಲುವರಾಯಸ್ವಾಮಿ ವಿರುದ್ಧದ ಲಂಚ ಪತ್ರ ರಾಜ್ಯಪಾಲರ ಕಚೇರಿಗೆ ಹೋಗಿದ್ದು ಎಲ್ಲಿಂದ? ಸ್ಫೋಟಕ ಮಾಹಿತಿ ಬಹಿರಂಗ
ಬಿಲ್ ಪಾವತಿ ದೂರಿನ ಸಂಬಂಧ ಬಿಬಿಎಂಪಿ ಗುತ್ತಿಗೆದಾರರು ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಸ್ಪಷ್ಟನೆ ಪಡೆಯಲು ರಾಜ್ಯಪಾಲರು ಮುಂದಾಗಿದ್ದರು. ಅದರಂತೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಮೂಲಕ ಭೇಟಿಗೆ ಸೂಚನೆ ನೀಡಿದ್ದರು. ಅಲ್ಲದೆ, ಕಮಿಷನ್ ಆರೋಪ ಎದುರಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಅಧಿಕಾರಿಗಳ ಜೊತೆ ಚರ್ಚೆಗೆ ಮುಂದಾಗಿದ್ದಾರೆ.
ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿ ಸಂಬಂಧ ಗುತ್ತಿಗೆದಾರರಿಗೆ ಬಿಲ್ ಪಾವತಿ ಬಾಕಿ ಇರಿಸಲಾಗಿದೆ. ಇದನ್ನು ಬಿಡುಗಡೆ ಮಾಡುವಂತೆ ಗುತ್ತಿಗೆದಾರರು ಆಗ್ರಹಿಸಿದ್ದಲ್ಲದೆ, ರಾಜ್ಯಪಾಲರಿಗೆ ದೂರು ಕೂಡ ನೀಡಿದ್ದರು. ಡಿಕೆ ಶಿವಕುಮಾರ್ ಅವರು 10-15 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘವು ಟ್ವೀಟ್ ಮೂಲಕ ಗಂಭೀರ ಆರೋಪ ಮಾಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ