New Year 2024: ಡಿ.27ರಂದು ಹೊಸ​​ ವರ್ಷಾಚರಣೆ ಮಾರ್ಗಸೂಚಿ ಬಗ್ಗೆ ನಿರ್ಧರಿಸಲಾಗುತ್ತೆ; ಬಿಎಂಪಿ ಮುಖ್ಯ ಆಯುಕ್ತ

ಹೊಸ ವರ್ಷ(New Year) ಹತ್ತಿರ ಬರುತ್ತಿದ್ದು, ಈ ಹಿನ್ನಲೆ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ವಿಚಾರ ‘ಡಿ.27ರಂದು ಈ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ(BBMP Chief Commissioner) ತುಷಾರ್ ಗಿರಿನಾಥ್ ಹೇಳಿದ್ದಾರೆ.

New Year 2024: ಡಿ.27ರಂದು ಹೊಸ​​ ವರ್ಷಾಚರಣೆ ಮಾರ್ಗಸೂಚಿ ಬಗ್ಗೆ ನಿರ್ಧರಿಸಲಾಗುತ್ತೆ; ಬಿಎಂಪಿ ಮುಖ್ಯ ಆಯುಕ್ತ
ಹೊಸ ವರ್ಷಾಚರಣೆಗೆ ಮಾರ್ಗಸೂಚಿ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 24, 2023 | 4:27 PM

ಬೆಂಗಳೂರು, ಡಿ.24: ಇನ್ನೇನು ಹೊಸ ವರ್ಷ(New Year) ಹತ್ತಿರ ಬರುತ್ತಿದ್ದು, ಈ ಹಿನ್ನಲೆ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ವಿಚಾರ ‘ಡಿ.27ರಂದು ಈ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ(BBMP Chief Commissioner) ತುಷಾರ್ ಗಿರಿನಾಥ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚಿಸಿ, ಪೊಲೀಸ್​​​​ ಇಲಾಖೆ, ಬಿಬಿಎಂಪಿ ಸೇರಿ ಗೈಡ್​​ಲೈನ್ಸ್​​ ಸಿದ್ಧಪಡಿಸುತ್ತೇವೆ ಎಂದರು.

ಇನ್ನು ಕೊರೊನಾ ವಿಚಾರವಾಗಿ ‘ಸರ್ಕಾರ ಕೊಟ್ಟಿರುವ ಟಾರ್ಗೆಟ್​ನಂತೆ ಟೆಸ್ಟಿಂಗ್ ಮಾಡಿದ್ದೇವೆ. ಮೊದಲ ದಿನ ಟಾರ್ಗೆಟ್​ಗಿಂತ ಹೆಚ್ಚು ಟೆಸ್ಟಿಂಗ್ ಮಾಡಿದ್ದು, ಆರೋಗ್ಯ ಇಲಾಖೆ ಸೂಚನೆಯಂತೆ ಲ್ಯಾಬ್​ಗೆ ರವಾನೆಯಾಗುತ್ತಿದೆ. ಆರಂಭದಲ್ಲಿ ಸ್ವಲ್ಪ ಸಮಸ್ಯೆಯಾಗಿತ್ತಾದರೂ, ಅದನ್ನ ಸರಿಪಡಿಸಿ ಟೆಸ್ಟಿಂಗ್ ನಡೆಸಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ:New Year Covid Guidelines: ಹೊಸ ವರ್ಷಾಚರಣೆಗೆ ಮಾಸ್ಕ್ ಕಡ್ಡಾಯಕ್ಕೆ ಟ್ಯಾಕ್ ಮನವಿ, ಕಠಿಣ ನಿಯಮ ಡೌಟ್

ಇನ್ನು ಹೊಸ ವರ್ಷ ಹಿನ್ನಲೆ ಬೆಂಗಳೂರು ನಗರ ಪೊಲೀಸರು ಹಾಗೂ ಪಾಲಿಕೆ ಅಲರ್ಟ್ ಆಗಿದ್ದು, ಅಹಿತಕರ ಘಟನೆ ನಡೆಯದಂತೆ ಪ್ಲ್ಯಾನಿಂಗ್​ ನಡೆಸಿದ್ದರು. ಅದರಂತೆ ಡಿ.17 ರಂದು ಪಾಲಿಕೆ ಜೊತೆ ಸಭೆ ನಡೆಸಿ ಪೊಲೀಸರು ಗೈಡ್ ಲೈನ್ಸ್ ರೆಡಿ ಮಾಡಿದ್ದರು. ನಗರದ ಬ್ರಿಗೇಡ್ ರೋಡ್, ಎಂಜಿ ರಸ್ತೆಯಲ್ಲಿ ಹೊಸ ಅಲೆಯ ವರ್ಷಾಚರಣೆಗೆ ಹೆಚ್ಚಿನ ಜನ ಸೇರುತ್ತಾರೆ. ಹಾಗಾಗಿ ಪ್ರತಿ ಬಾರಿ ಒಂದಷ್ಟು ಗೊಂದಲ ಮತ್ತು ಅಹಿತಕರ ಘಟನೆ ನಡೆಯುತ್ತದೆ. ಈ ಬಾರಿ ಆ ರೀತಿ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದರು.

ಗೈಡ್ ಲೈನ್ಸ್ ನಲ್ಲಿ ಏನೇನು ಇರಬಹುದು?

  • ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು.
  • ಎಂ.ಜಿ.ರಸ್ತೆ,ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ.
  • ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್ ಗಳು ಬಂದ್.
  • ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ.
  • ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್.
  • ಸೆಲೆಬ್ರೇಷನ್ ಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ.
  • ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ.
  • ಬಾರ್, ಪಬ್ ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್ ಗೆ ಸೂಚನೆ.
  • ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯ.
  • ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ.
  • ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರ.
  • ರಾತ್ರಿ 1 ಗಂಟೆ ತನಕ ನಮ್ಮ ಮೆಟ್ರೋ ಸಂಚಾರ.

ಇನ್ನು ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಭರ್ಜರಿ ತಯಾರಿ ನಡೆಸಲಾಗಿದೆ. ಇದಕ್ಕೋಸ್ಕರ ಮಾದಕ ಲೋಕ ಕೂಡ ಸಿದ್ಧವಾಗಿದ್ದು, ಪೊಲೀಸರು ಕೂಡ ಹೈ ಅಲರ್ಟ್​ ಆಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್