AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ಕೋಟಿ ರೂಪಾಯಿ ಮೌಲ್ಯದ ಒತ್ತುವರಿ ಜಾಗ ಮತ್ತೆ ತನ್ನ ಸುಪರ್ದಿಗೆ ತೆಗೆದುಕೊಂಡ ಬಿಬಿಎಂಪಿ

ಗಾಂಧಿಬಜಾರ್​ನ ವಿದ್ಯಾರ್ಥಿ ಭವನ ಸಮೀಪ ಇರುವ ಈ ಜಾಗದ ಮೌಲ್ಯವು ₹ 50 ಕೋಟಿ ಎಂದು ಅಂದಾಜಿಸಲಾಗಿದೆ.

50 ಕೋಟಿ ರೂಪಾಯಿ ಮೌಲ್ಯದ ಒತ್ತುವರಿ ಜಾಗ ಮತ್ತೆ ತನ್ನ ಸುಪರ್ದಿಗೆ ತೆಗೆದುಕೊಂಡ ಬಿಬಿಎಂಪಿ
ಬಿಬಿಎಂಪಿ ಕಚೇರಿ
TV9 Web
| Edited By: |

Updated on: Jul 22, 2022 | 11:34 AM

Share

ಬೆಂಗಳೂರು: ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದ ₹ 50 ಕೋಟಿ ಮೌಲ್ಯದ ನಿವೇಶನವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (Bruhat Bengaluru Mahanagara Palike – BBMP) ಅಧಿಕಾರಿಗಳು ಮತ್ತೆ ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ. ಗಾಂಧಿಬಜಾರ್​ನ ವಿದ್ಯಾರ್ಥಿ ಭವನ ಸಮೀಪ ಇರುವ ಈ ಜಾಗದ ಮೌಲ್ಯವು ₹ 50 ಕೋಟಿ ಎಂದು ಅಂದಾಜಿಸಲಾಗಿದೆ. ಇಬ್ಬರು ಖಾಸಗಿ ವ್ಯಕ್ತಿಗಳು 9,000 ಚದರ ಮೀಟರ್​ನಷ್ಟಿರುವ ಈ ಜಮೀನನ್ನು ಹಲವು ವರ್ಷಗಳಿಂದ ಒತ್ತುವರಿ ಮಾಡಿಕೊಂಡಿದ್ದರು. ಇದೀಗ ಬಿಬಿಎಂಪಿ ಒತ್ತುವರಿ ತೆರವುಗೊಳಿಸಿ ಜಾಗವನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ.

ಕೆರೆ ಒತ್ತುವರಿ ತೆರವುಗೊಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಸುಬ್ರಹ್ಮಣ್ಯಪುರ ಕೆರೆ, ಬೇಗೂರು ಕೆರೆ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿ ಕೆರೆ ಒತ್ತುವರಿ ತೆರವು ವಿಳಂಬಕ್ಕೆ ಹೈಕೋರ್ಟ್(High Court) ಅಸಮಾಧಾನ ವ್ಯಕ್ತಪಡಿಸಿದೆ. ಹಾಗೂ ರಾಜ್ಯಸರ್ಕಾರ (Karnataka Government) ಮತ್ತು ಬಿಬಿಎಂಪಿಗೆ (BBMP) ತರಾಟೆಗೆ ತೆಗೆದುಕೊಂಡಿದೆ. ಕಳೆದ 6 ತಿಂಗಳಿನಿಂದ ಒಂದೇ ಒಂದು ಒತ್ತುವರಿ ತೆರವುಗೊಳಿಸಿಲ್ಲ. ಬೆಂಗಳೂರಿನ ಕೆರೆಗಳನ್ನು ಭವಿಷ್ಯದ ಜನರಿಗಾಗಿ ರಕ್ಷಿಸಬೇಕು. ತಹಶೀಲ್ದಾರ್‌ಗಳು ಒತ್ತುವರಿ ತೆರವಿಗೆ ಸಹಕರಿಸಬೇಕು ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

10 ದಿನಗಳಲ್ಲಿ ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಳಿಸಬೇಕು. ಸರ್ವೆ ಕಾರ್ಯಕ್ಕೆ ಅಧಿಕಾರಿಗಳನ್ನು ನಿಯೋಜಿಸಬೇಕು. ಅದಾದ 1 ವಾರದಲ್ಲಿ ಒತ್ತುವರಿದಾರರಿಗೆ ನೋಟಿಸ್ ನೀಡಬೇಕು. ನಂತರದ ಒಂದು ವಾರದಲ್ಲಿ ಒತ್ತುವರಿ ತೆರವುಗೊಳಿಸಬೇಕು. ಅಗತ್ಯ ಸಿಬ್ಬಂದಿ, ಪೊಲೀಸ್ ಭದ್ರತೆ ಒದಗಿಸುವಂತೆ ಕೆರೆ ಸುತ್ತಲ ರಸ್ತೆ ಅಗಲೀಕರಣಗೊಳಿಸದಂತೆ ರಾಜ್ಯಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ