ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳಲ್ಲಿನ ಗುಂಡಿ ಮುಚ್ಚಲಾಗಿದೆ: ಗೌರವ್ ಗುಪ್ತಾ ಮಾಹಿತಿ

| Updated By: ganapathi bhat

Updated on: Sep 21, 2021 | 2:40 PM

Bengaluru News: ರಸ್ತೆ ಗುಂಡಿಗಳಿಗೆ ಯಾರು ಹೊಣೆ ಎಂಬ ವಿಚಾರವಾಗಿ ಗೌರವ್ ಗುಪ್ತಾ ಪ್ರತಿಕ್ರಿಯಿಸಿದ್ದಾರೆ. ಮುಖ್ಯ ರಸ್ತೆಗಳ ನಿರ್ವಹಣೆ ಮಾಡಿಲ್ಲ. ವೈಟ್ ಟಾಪಿಂಗ್ ಮಾಡ್ತೇವೆ ಎಂದು ರಸ್ತೆ ನಿರ್ಮಾಣ ಮಾಡಿಲ್ಲ ಹೀಗಾಗಿ ಹಾಳಾಗಿದೆ. ಮೆಟ್ರೋ ಕಾಮಗಾರಿಗಾಗಿ ರಸ್ತೆ ನಿರ್ವಹಣೆ ಮಾಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳಲ್ಲಿನ ಗುಂಡಿ ಮುಚ್ಚಲಾಗಿದೆ: ಗೌರವ್ ಗುಪ್ತಾ ಮಾಹಿತಿ
ಗೌರವ್ ಗುಪ್ತಾ
Follow us on

ಬೆಂಗಳೂರು: ಕೊವಿಡ್ ಪರಿಸ್ಥಿತಿಯನ್ನು ನಿಯಂತ್ರಣ ಮಾಡಲಾಗುತ್ತಿದೆ. ಎಲ್ಲ ವಾಣಿಜ್ಯ ಚಟುವಟಿಕೆ, ಶಾಲೆಗಳು ಆರಂಭ ಆಗುತ್ತಿವೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 300-400 ಗಡಿಯಲ್ಲಿದೆ. ನಿತ್ಯ 20 ಜನ ಸೋಂಕಿತರು ಆಸ್ಪತ್ರೆಗಳಲ್ಲಿ ದಾಖಲಾಗುತ್ತಿದ್ದಾರೆ. ಸದ್ಯ 368 ಸೋಂಕಿತರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಎಲ್ಲರಿಗೂ ಜನರಲ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೆಂಗಳೂರು ನಗರದಲ್ಲಿ ಕೊರೊನಾ ಪರಿಸ್ಥಿತಿಯ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಬೆಂಗಳೂರು ನಗರ, ಬಿಬಿಎಂಪಿ ವ್ಯಾಪ್ತಿಯ ರಸ್ತೆ ದುರಸ್ತಿ ಕಾರ್ಯಗಳ ಬಗ್ಗೆ ಕೂಡ ಅವರು ಮಾತನಾಡಿದ್ದಾರೆ. ಸೆಪ್ಟೆಂಬರ್ 20 ರ ಒಳಗೆ ರಸ್ತೆ ಗುಂಡಿ ಮುಚ್ಚಲು ಸಚಿವರ ಸೂಚನೆ ಇದೆ. ಅದರಂತೆ ಮುಖ್ಯರಸ್ತೆ, ಅಡ್ಡ ರಸ್ತೆಗಳಲ್ಲಿನ ಗುಂಡಿ ಮುಚ್ಚಲಾಗಿದೆ. ಸೆಪ್ಟೆಂಬರ್ 6 ರಂದು ಬೆಂಗಳೂರಿನಲ್ಲಿ 1,332 ರಸ್ತೆ ಗುಂಡಿ ಇತ್ತು. ಸದ್ಯ ನಗರದಲ್ಲಿ ಬಹುತೇಕ ಗುಂಡಿಗಳನ್ನು ಮುಚ್ಚಲಾಗಿದೆ. ಬೆಂಗಳೂರಿನಲ್ಲಿ ಈಗ 194 ರಸ್ತೆ ಗುಂಡಿಗಳು ಬಾಕಿ ಇವೆ ಎಂದು ಬಿಬಿಎಂಪಿ ಆಯುಕ್ತ ಗೌರವ್​​ ಗುಪ್ತಾ ಹೇಳಿದ್ದಾರೆ.

ರಸ್ತೆ ಗುಂಡಿಗಳಿಗೆ ಯಾರು ಹೊಣೆ ಎಂಬ ವಿಚಾರವಾಗಿ ಗೌರವ್ ಗುಪ್ತಾ ಪ್ರತಿಕ್ರಿಯಿಸಿದ್ದಾರೆ. ಮುಖ್ಯ ರಸ್ತೆಗಳ ನಿರ್ವಹಣೆ ಮಾಡಿಲ್ಲ. ವೈಟ್ ಟಾಪಿಂಗ್ ಮಾಡ್ತೇವೆ ಎಂದು ರಸ್ತೆ ನಿರ್ಮಾಣ ಮಾಡಿಲ್ಲ ಹೀಗಾಗಿ ಹಾಳಾಗಿದೆ. ಮೆಟ್ರೋ ಕಾಮಗಾರಿಗಾಗಿ ರಸ್ತೆ ನಿರ್ವಹಣೆ ಮಾಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ವೀಕೆಂಡ್​ ಟ್ರಿಪ್​ಗೆ ಯೋಚಿಸುತ್ತಿದ್ದೀರಾ? ; ಬೆಂಗಳೂರು ಸಮೀಪವೇ ಇರುವ 10 ಅತ್ಯುತ್ತಮ ಸ್ಥಳಗಳ ವಿವರ ಇಲ್ಲಿದೆ

ಇದನ್ನೂ ಓದಿ: ಬೆಂಗಳೂರು: ಗುಂಡಿ ತೆಗೆದು ಕಾಟಾಚಾರಕ್ಕೆ ಬ್ಯಾರಿಕೇಡ್ ಅಳವಡಿಕೆ; ನೈಟ್ ಶಿಫ್ಟ್ ಮುಗಿಸಿ ಬರುತ್ತಿದ್ದ ಮೆಕ್ಯಾನಿಕ್ ಗುಂಡಿಗೆ ಬಿದ್ದು ಸಾವು