ಕೊವಿಡ್ ಟೆಸ್ಟ್ ಶೇಕಡಾ 50ರಷ್ಟು ಹೆಚ್ಚಿಸುತ್ತೇವೆ; ಮಕ್ಕಳಿಗೂ ಕೊರೊನಾ ಪರೀಕ್ಷೆ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ

BBMP: ರಾತ್ರಿ 9 ಗಂಟೆಯೊಳಗೆ ಅಂಗಡಿ ಮುಂಗಟ್ಟು ಮುಚ್ಚಬೇಕು. ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಹೀಗಾಗಿ, ರಾತ್ರಿ 9 ಗಂಟೆ ನಂತರ ಶಾಪ್ ತೆರೆದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕೊವಿಡ್ ಟೆಸ್ಟ್ ಶೇಕಡಾ 50ರಷ್ಟು ಹೆಚ್ಚಿಸುತ್ತೇವೆ; ಮಕ್ಕಳಿಗೂ ಕೊರೊನಾ ಪರೀಕ್ಷೆ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Aug 17, 2021 | 7:47 PM

ಬೆಂಗಳೂರು: ನಗರದಲ್ಲಿ ಹೆಚ್ಚು ಮಕ್ಕಳಿಗೆ ಕೊವಿಡ್ ಟೆಸ್ಟ್ ಮಾಡುತ್ತೇವೆ. ಯಾರಿಗಾದ್ರೂ ಸೋಂಕು ದೃಢಪಟ್ಟರೆ ಅವರ ಮಕ್ಕಳಿಗೆ ಟೆಸ್ಟ್​ ಮಾಡಿಸುತ್ತೇವೆ. ಕೊವಿಡ್ ಟೆಸ್ಟ್ ಪ್ರಮಾಣ​ ಶೇಕಡಾ 50 ರಷ್ಟು ಹೆಚ್ಚಿಸುತ್ತೇವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ. ರಾತ್ರಿ 9 ಗಂಟೆಯೊಳಗೆ ಅಂಗಡಿ ಮುಂಗಟ್ಟು ಮುಚ್ಚಬೇಕು. ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಹೀಗಾಗಿ, ರಾತ್ರಿ 9 ಗಂಟೆ ನಂತರ ಶಾಪ್ ತೆರೆದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹಬ್ಬ ಹರಿದಿನ ಬರುತ್ತಿರುವ ಹಿನ್ನೆಲೆಯಲ್ಲಿ ಟೆಸ್ಟ್ ಹೆಚ್ಚಿಸ್ತೇವೆ. ಮಹದೇವಪುರ, ಬೊಮ್ಮನಹಳ್ಳಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ನಿರೀಕ್ಷಿಸಿದಷ್ಟು ಪ್ರಮಾಣದಲ್ಲಿ ಬಿಬಿಎಂಪಿಗೆ ಲಸಿಕೆ ಸಿಗುತ್ತಿಲ್ಲ. ಪ್ರತಿದಿನ 30 ಸಾವಿರ ಜನರಿಗೆ ನೀಡುವಷ್ಟು ಲಸಿಕೆ ಸಿಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇಕಡಾ 70ರಷ್ಟು ಜನ ಲಸಿಕೆ ಪಡೆದಿದ್ದಾರೆ. ಸೆಕೆಂಡ್​ ಡೋಸ್ ಪಡೆಯುತ್ತಿರುವವರ ಸಂಖ್ಯೆ ಕ್ರಮೇಣ ಜಾಸ್ತಿಯಿದೆ. ಹೀಗಾಗಿ ಕೇಂದ್ರಕ್ಕೆ ಹೆಚ್ಚಿನ ಲಸಿಕೆಗಾಗಿ ಮನವಿ ಮಾಡಿದ್ದೇವೆ. ಬೆಂಗಳೂರಿಗೆ ದಿನಕ್ಕೆ 1 ಲಕ್ಷ ಲಸಿಕೆ ಬೇಕೆಂದು ತಿಳಿಸಿದ್ದೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಕರ್ನಾಟಕ ಕೊರೊನಾ ಪ್ರಕರಣಗಳ ವಿವರ ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 17) ಹೊಸದಾಗಿ 1,298 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,31,827 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,73,281 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 32 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,039 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 21,481 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 340 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,33,512 ಕ್ಕೆ ಏರಿಕೆಯಾಗಿದೆ. 12,33,512 ಸೋಂಕಿತರ ಪೈಕಿ 12,09,647 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 10 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,951 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,913 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 27, ಬೆಂಗಳೂರು ಗ್ರಾಮಾಂತರ 30, ಬೆಂಗಳೂರು ನಗರ 340, ಬೀದರ್ 0, ಚಾಮರಾಜನಗರ 7, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 59, ಚಿತ್ರದುರ್ಗ 7, ದಕ್ಷಿಣ ಕನ್ನಡ 288, ದಾವಣಗೆರೆ 14, ಧಾರವಾಡ 5, ಗದಗ 1, ಹಾಸನ 66, ಹಾವೇರಿ 1, ಕಲಬುರಗಿ 4, ಕೊಡಗು 37, ಕೋಲಾರ 17, ಕೊಪ್ಪಳ 1, ಮಂಡ್ಯ 18, ಮೈಸೂರು 88, ರಾಯಚೂರು 0, ರಾಮನಗರ 3, ಶಿವಮೊಗ್ಗ 51, ತುಮಕೂರು 52, ಉಡುಪಿ 122, ಉತ್ತರ ಕನ್ನಡ 48, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ 3 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ದೇಶದಲ್ಲಿ 154 ದಿನಗಳಲ್ಲೇ ಅತಿ ಕಡಿಮೆ ಕೊರೊನಾ ಕೇಸ್​ಗಳು ದಾಖಲು; ಚೇತರಿಕೆ ಪ್ರಮಾಣದಲ್ಲೂ ಏರಿಕೆ

ಕೊರೊನಾ, ಬ್ಲ್ಯಾಕ್ ಫಂಗಸ್​ಗೆ ಹೆದರಿದ ಮಂಗಳೂರು ದಂಪತಿ; ಪೊಲೀಸ್ ಕಮಿಷನರ್​ಗೆ ಕರೆ ಮಾಡಿ ಆತ್ಮಹತ್ಯೆಗೆ ಶರಣು

Published On - 6:09 pm, Tue, 17 August 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ