ಜಾತಿ ಸಮೀಕ್ಷೆ ಮಾಡದೇ ಕಳ್ಳಾಟವಾಡಿದ ಐವರು ಅಧಿಕಾರಿಗಳ ಅಮಾನತು
ಕರ್ನಾಟಕದಲ್ಲಿ ಜಾತಿ ಗಣತಿ ವರದಿ ಬಗ್ಗೆ ಆಡಳಿತರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಡುವೆ ಜಟಾಪಟಿ ನಡೆಯುತ್ತಿದೆ. ಮತ್ತೊಂದೆಡೆ ರಾಜ್ಯ ಸರ್ಕಾರ, ಜಾತಿ ಸಮೀಕ್ಷೆ ನಡೆಸುತ್ತಿದೆ. ಆದ್ರೆ, ಜಾತಿ ಸಮೀಕ್ಷೆ ಮಾಡದೇ ಕೆಲ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ. ಹೀಗಾಗಿ ಕರ್ತವ್ಯಲೋಪದಡಿ ಐವರು ಅಧಿಕಾರಿಗಳನ್ನು ಅಮಾನತು ಮಾಡಿ ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು, (ಮೇ 23): ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ಜಾತಿ ಸಮೀಕ್ಷೆ ಮಾಡದ ನಿರ್ಲಕ್ಷ್ಯ ತೋರಿಸಿದ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ನಿಗದಿತ ಸಮಯದಲ್ಲಿ ಮಾಹಿತಿ ಸಂಗ್ರಹಿಸದ ಹಿನ್ನೆಲೆಯಲ್ಲಿ ಕರ್ತವ್ಯಲೋಪದಡಿ ಐವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಆದೇಶ ಹೊರಡಿಸಿದ್ದಾರೆ. ಶ್ರೀಜೇಶ್, ವಿಜಯ್ ಕುಮಾರ್, ಶಿವರಾಜ್ ಹೆಚ್.ಸಿ, ಮಹದೇವ್, ಶ್ರೀಶಂಕರ್ ಅಮಾನತಾದ ಅಧಿಕಾರಿಗಳು. ನಿತ್ಯ ಮನೆಗಳಿಗೆ ಭೇಟಿ ನೀಡಿ ವರದಿ ಸಂಗ್ರಹಕ್ಕೆ ಸೂಚನೆ ನೀಡಲಾಗಿದೆ. ಆದ್ರೆ, ಅಧಿಕಾತರಿಗಳು ಮೊಬೈಲ್ ಲಾಗಿನ್ ಮಾಡದೇ ಕಳ್ಳಾಟವಾಡಿದ್ದಾರೆ.
ಜಾತಿ ಜನಗಣತಿ ನಡೆಸುವ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ಈಗಾಗಲೇ ಜಾತಿ ಗಣತಿ ನಡೆಸಿರುವ ಕರ್ನಾಟಕ ಇದೀಗ, ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಗಣತಿ ಆರಂಭಿಸಿದೆ. ಒಳಮೀಸಲಾತಿ ಬಗ್ಗೆ ನಿಖರವಾದ ವರದಿ ಕೊಡಲು ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗ ರಚಿಸಲಾಗಿದೆ.
ಇದನ್ನೂ ಓದಿ: ಕರ್ನಾಟಕ ಒಳಮೀಸಲಾತಿ ಜಾತಿ ಗಣತಿ ಇಂದಿನಿಂದ ಶುರು: ಸಿಎಂ ಸಿದ್ದರಾಮಯ್ಯ ಮಾಹಿತಿ
ಒಳಮೀಸಲಾತಿ ಜಾತಿ ಗಣತಿ ಸಮೀಕ್ಷೆ ಕಾರ್ಯಕ್ಕೆ 65 ಸಾವಿರ ಶಿಕ್ಷಕರನ್ನು ನೇಮಿಸಲಾಗಿದೆ. ಅವರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಾರೆ. ಪರಿಶಿಷ್ಟ ಜಾತಿಗಳ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡಲಿದ್ದಾರೆ. ಮೊದಲ ಹಂತದಲ್ಲಿ ಮನೆ ಮನೆಗೆ ತೆರಳಿ ಅಂಕಿ ಅಂಶ ಸಂಗ್ರಹ ಮಾಡಲಾಗುತ್ತದೆ. 2ನೇ ಹಂತದಲ್ಲಿ ಮೇ 19 ರಿಂದ 21 ರವರೆಗೆ ವಿಶೇಷ ಶಿಬಿರ ಆಯೋಜನೆ ಮಾಡಲಾಗಿದೆ. ಆ ಶಿಬಿರಗಳಿಗೂ ಬಂದು ಜನರು ಮಾಹಿತಿಗಳನ್ನು ನೀಡಬಹುದು. ಇನ್ನು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ–2025 ಕ್ಕೆ ಸಂಬಂಧಿಸಿದಂತೆ, ಒಳಮೀಸಲಾತಿ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದ್ದು, ಮನೆ ಮನೆ ಭೇಟಿ ಸಮೀಕ್ಷೆಯು ಮೇ 17 ರಿಂದ 25 ವರೆಗೆ ವಿಸ್ತರಿಸಲಾಗಿದೆ.
ಮತಗಟ್ಟೆವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳುವ ಅವಧಿಯನ್ನು ಮೇ 26 ರಿಂದ ಮೇ 28ರ ವರೆಗೂ ನಿಗದಿಗೊಳಿಸಿದೆ. ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ಮಾಡುವ ಅವಧಿಯನ್ನು ಮೇ 19 ರಿಂದ ಮೇ 28 ರವರೆಗೆ ನಿಗದಿಗೊಳಿಸಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:30 pm, Fri, 23 May 25




