Bengaluru Rain: ಎಚ್ಚೆತ್ತುಕೊಂಡ ಬಿಬಿಎಂಪಿ, ಸಂಚಾರಕ್ಕೆ ಸೂಕ್ತವಿಲ್ಲದಿರುವ ಅಂಡರ್ ಪಾಸ್ ಬಂದ್​ ಮಾಡಲು ತೀರ್ಮಾನಿಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಿನ್ನೆ ಮಧ್ಯಾಹ್ನ 3.15ರಿಂದ 4 ಗಂಟೆ ವೇಳೆಗೆ 50 ಮಿ.ಮೀ ಮಳೆ ಆಗಿದೆ. 45 ನಿಮಿಷದ ಅವಧಿಯಲ್ಲಿ ಭಾರಿ ಮಳೆ ಬಂದಿದ್ದರಿಂದ ಸಮಸ್ಯೆ ಆಗಿದೆ.

Bengaluru Rain: ಎಚ್ಚೆತ್ತುಕೊಂಡ ಬಿಬಿಎಂಪಿ, ಸಂಚಾರಕ್ಕೆ ಸೂಕ್ತವಿಲ್ಲದಿರುವ ಅಂಡರ್ ಪಾಸ್ ಬಂದ್​ ಮಾಡಲು ತೀರ್ಮಾನಿಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
Follow us
ಆಯೇಷಾ ಬಾನು
|

Updated on: May 22, 2023 | 1:11 PM

ಬೆಂಗಳೂರು: ನಗರದಲ್ಲಿ ನಿನ್ನೆ(ಮೇ 21) ಸುರಿದ ಮಳೆ ಭಾರೀ ಅವಾಂತರಗಳನ್ನು ಸೃಷ್ಟಿಸಿದೆ(Bengaluru Rain). ರಣ ಮಳೆಗೆ ಬೆಂಗಳೂರಿನಲ್ಲಿ ಇಬ್ಬರು ಬಲಿಯಾಗಿದ್ದಾರೆ(Death). ಅನೇಕ ಏರಿಯಾಗಳಲ್ಲಿ ಮರಗಳು, ಲೈಟ್ ಕಂಬಗಳು ಧರೆಗುರುಳಿದ್ದು ಕಗ್ಗತ್ತಲು ಆವರಿಸಿದೆ. ನಗರದ ಅವ್ಯವಸ್ಥೆ, ಅವೈಜ್ಞಾನಿಕ ರಸ್ತೆ, ಅಂಡರ್​ ಪಾಸ್​ಗಳಿಗಾಗಿ ಜನ ಬಿಬಿಎಂಪಿ(BBMP) ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಬೆಂಗಳೂರಿನ ಮಳೆ ಸಂಬಂಧ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಿನ್ನೆ ಮಧ್ಯಾಹ್ನ 3.15ರಿಂದ 4 ಗಂಟೆ ವೇಳೆಗೆ 50 ಮಿ.ಮೀ ಮಳೆ ಆಗಿದೆ. 45 ನಿಮಿಷದ ಅವಧಿಯಲ್ಲಿ ಭಾರಿ ಮಳೆ ಬಂದಿದ್ದರಿಂದ ಸಮಸ್ಯೆ ಆಗಿದೆ. ಬೆಂಗಳೂರು ನಗರದ ಎಲ್ಲಾ ಅಂಡರ್​ಪಾಸ್​ಗಳ ಸರ್ವೆ ನಡೆಯುತ್ತಿದೆ. ಡ್ರೈನೇಜ್ ಇಲ್ಲದ ಅಂಡರ್ ಪಾಸ್​​ಗಳನ್ನು ಬಂದ್ ಮಾಡಲಾಗುವುದು. ಲೋಪ ಇರೋ ಅಂಡರ್ ಪಾಸ್ ರಿಪೇರಿ ಮಾಡಿಯೇ ರಿ ಓಪನ್ ಮಾಡಲಾಗುವುದು. ಬೆಂಗಳೂರಿನಲ್ಲಿ 18 ಅಂಡರ್ ಪಾಸ್​ಗಳಿವೆ. ನಿನ್ನೆ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಭಾರೀ ಮಳೆಗೆ ಬೆಂಗಳೂರಿನಲ್ಲಿ ಅವಘಡ; ನೂತನ ಮುಖ್ಯಮಂತ್ರಿಗೆ ಮಾಜಿ ಸಿಎಂ ಬೊಮ್ಮಾಯಿ ಮಹತ್ವದ ಸಲಹೆ

ಇನ್ನು ಇದೇ ವೇಳೆ ಬೆಂಗಳೂರು ನಗರದಲ್ಲಿ ನಿನ್ನೆ 20 ಮನೆಗಳಿಗೆ ಮಳೆ ನೀರು ನುಗ್ಗಿದೆ.  ಸಂಚಾರಕ್ಕೆ ಸೂಕ್ತವಿಲ್ಲದಿರುವ ಅಂಡರ್ ಪಾಸ್ ಬಂದ್​ ಮಾಡುತ್ತೇವೆ. ಮಹಾಲಕ್ಷ್ಮಿ ಲೇಔಟ್​ನಲ್ಲಿ ರಾಜಕಾಲುವೆ ಕೆಲಸ ನಡೆಯುತ್ತಿದ್ದ ಹಿನ್ನೆಲೆ ಅತೀವ ಮಳೆಯಾಗಿ 20 ಮನೆಗಳಿಗೆ ನೀರು ನುಗ್ಗಿದೆ. ಚಂಡ ಮಾರುತದಿಂದ ಎಲೆಗಳು ಉದುರಿದ್ದು 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬಂದಿದೆ. ಹಾಗಾಗಿ ಎಲೆಗಳು ಉದುರಿ ಅಂಡರ್ ಪಾಸ್ ನಲ್ಲಿ ನೀರುಹೋಗುವ ಸ್ಥಳಗಳು ಬಂದ್ ಆಗಿ ಅನಾಹುತ ನಡೆದಿದೆ ಎಂದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು