ಬೆಂಗಳೂರಿನಲ್ಲಿ ಬೂಸ್ಟರ್ ಡೋಸ್ ನೀಡಲು ಕೋವಿಶಿಲ್ಡ್ ಕೊರತೆ ಇದೆ ಎಂದ ಬಿಬಿಎಂಪಿ ಆಯುಕ್ತ, ಕೊರತೆ ಇಲ್ಲ ಎಂದ ಸಚಿವ

ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಮಾತನಾಡಿ, ನಮ್ಮಲ್ಲಿ ಹೆಚ್ಚಿನ ಜನರಿಗೆ ಬೂಸ್ಟರ್ ಡೋಸ್ ನೀಡಲು ಕೋವಿಶಿಲ್ಡ್ ಕೋವಿಡ್ 19 ಲಸಿಕೆ ಕೊರೆತೆಯಿದೆ. ಹೀಗಾಗಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಶಿಲ್ಡ್ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಬೂಸ್ಟರ್ ಡೋಸ್ ನೀಡಲು ಕೋವಿಶಿಲ್ಡ್ ಕೊರತೆ ಇದೆ ಎಂದ ಬಿಬಿಎಂಪಿ ಆಯುಕ್ತ, ಕೊರತೆ ಇಲ್ಲ ಎಂದ ಸಚಿವ
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಸಚಿವ ಡಾ.ಕೆ. ಸುಧಾಕರ್
Follow us
TV9 Web
| Updated By: ಆಯೇಷಾ ಬಾನು

Updated on:Dec 23, 2022 | 3:01 PM

ಬೆಂಗಳೂರು: ನೆರೆ ರಾಷ್ಟ್ರಗಳಲ್ಲಿ ಮಾಹಾಮಾರಿ ಕೊರೊನಾ(Coronavirus) ನರ್ತನ ಹೆಚ್ಚಾಗಿದ್ದು ರಾಜ್ಯದಲ್ಲೂ ಕೊರೊನಾ ಆತಂಕ ಹುಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ಸಿಎಂ ಬೊಮ್ಮಾಯಿ(Basavaraj Bommai) ಸಭೆ ನಡೆಸಿ ಚರ್ಚೆಗಳನ್ನು ಮಾಡುತ್ತಿದ್ದಾರೆ. ಆದ್ರೆ ಒಂದು ಕಡೆ ಜನರಿಗೆ ಬೂಸ್ಟರ್ ಡೋಸ್ ನೀಡಲು ಕೋವಿಶಿಲ್ಡ್ ಲಸಿಕೆ ಕೊರೆತೆಯಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.  ಮತ್ತೊಂದೆಡೆ ನಮ್ಮಲ್ಲಿ ಲಸಿಕೆ ಸ್ಟಾಕ್ ಇದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್(Dr K Sudhakar) ತಿಳಿಸಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಮಾತನಾಡಿ, ನಮ್ಮಲ್ಲಿ ಹೆಚ್ಚಿನ ಜನರಿಗೆ ಬೂಸ್ಟರ್ ಡೋಸ್ ನೀಡಲು ಕೋವಿಶಿಲ್ಡ್ ಕೋವಿಡ್ 19 ಲಸಿಕೆ ಕೊರೆತೆಯಿದೆ. ಹೀಗಾಗಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಶಿಲ್ಡ್ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. “ನಮ್ಮಲ್ಲಿ ಕೋವಾಕ್ಸಿನ್ ಸ್ಟಾಕ್ ಇದೆ ಆದರೆ ಕೋವಿಶೀಲ್ಡ್ ಸ್ಟಾಕ್ ಇಲ್ಲ. ನಮ್ಮ ಹಿಂದಿನ ವ್ಯಾಕ್ಸಿನೇಷನ್ ಡ್ರೈವ್ ಸಮಯದಲ್ಲಿ, ಬೆಂಗಳೂರಿನಲ್ಲಿ ಶೇಕಡಾ 90 ರಷ್ಟು ಜನರು ಕೋವಿಶೀಲ್ಡ್ ಅನ್ನು ಪಡೆದಿದ್ದರೆ, ಕೇವಲ 10 ಪ್ರತಿಶತದಷ್ಟು ಜನರು ಮಾತ್ರ ಕೋವಾಕ್ಸಿನ್ ಲಸಿಕೆಯನ್ನು ಪಡೆದಿದ್ದಾರೆ. ಸದ್ಯ ಈಗ ಬೂಸ್ಟರ್ ಡೋಸ್ ತೆಗೆದುಕೊಳ್ಳಲು ಅರ್ಹರಾದವರನ್ನು ಸಂಪರ್ಕಿಸಿ ಅವರಿಗೆ ಬೂಸ್ಟರ್ ಡೋಸ್ ಪಡೆಯಲು ವಿನಂತಿಸುತ್ತೇವೆ ಎಂದು ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಹಾಗೂ ಅವರು ಜನರಿಗೆ ಕೊರೊನಾದಿಂದ ತಮ್ಮನ್ನು ಕಾಪಾಡಿಕೊಳ್ಳಲು ಫೇಸ್ ಮಾಸ್ಕನ್ನು ಬಳಸಿ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Bengaluru Covid Guidelines: ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಮಾಸ್ಕ್​ ಕಡ್ಡಾಯಗೊಳಿಸಿ ಆದೇಶ

ರಾಜ್ಯದಲ್ಲಿ ಕೊವಿಡ್ ಲಸಿಕೆಯ ಕೊರತೆ ಇಲ್ಲ ಎಂದ ಸುಧಾಕರ್

ಬೆಂಗಳೂರಿನ ಕೆಂಪೇಗೌಡ ಏರ್​​ಪೋರ್ಟ್​​ನಲ್ಲಿ ಮಾತನಾಡಿದ ಸಚಿವ ಡಾ.ಸುಧಾಕರ್​​​, ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಡೋಸ್​​​ ಇದೆ. ಕೊವಿಶೀಲ್ಡ್​, ಕೊವ್ಯಾಕ್ಸಿನ್​, ನೇಸಲ್​ ಲಸಿಕೆ ಇದೆ. ಇಂದು ಕೇಂದ್ರ ಆರೋಗ್ಯ ಸಚಿವರ ನೇತೃತ್ವದಲ್ಲಿ ಸಭೆ ಇದೆ. ರಾಜ್ಯದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತೇವೆ. ಸದ್ಯಕ್ಕೆ ಮಾಸ್ಕ್, ಕೊವಿಡ್ ಪಾಲನೆಗೆ ಸಲಹೆ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಅಗತ್ಯಬಿದ್ದರೆ ಕಠಿಣ ಕ್ರಮ ಜಾರಿ ಮಾಡುತ್ತೇವೆ. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಒಳ್ಳೆಯದು ಎಂದಿದ್ದಾರೆ.

ಆದ್ರೆ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಆರೋಗ್ಯ ಸಚಿವರ ಹೇಳಿಕೆಗಳಲ್ಲಿ ವ್ಯತ್ಯಾಸ ಕಂಡು ಬಂದಿದ್ದು ಸಂಪರ್ಗ ಕೊರತೆ ಎದ್ದು ಕಾಣುತ್ತಿದೆ.

ಈ ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:50 pm, Fri, 23 December 22

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ