ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್​ಗೆ ಡೆಂಗ್ಯೂ, ಮನೆಯಲ್ಲೇ ಚಿಕಿತ್ಸೆ

ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಇದರಿಂದ ನೀರಿನ ಮೂಲಗಳಿಗೆ ಜೀವ ಕಳೆ ಬಂದಿದೆ. ಕೃಷಿ ಚಟುವಟಿಕೆಗಳು ಆರಂಭವಾಗಿದೆ. ಇದೊಂದಡೆಯಾದರೆ ಮತ್ತೊಂದಡೆ, ಮಳೆಯಿಂದಾಗ ನಿಂತ ನೀರಿನಿಂದ ಡ್ಯೆಂಗ್ಯೂ ರೋಗ ಹುಟ್ಟಿಕೊಂಡಿದೆ. ಬೆಂಗಳೂರಿನಲ್ಲೇ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಇದೀಗ ಬಿಬಿಎಂಪಿ ಆಯುಕ್ತರಿಗೆನೇ ಡೆಂಗ್ಯೂ ಬಂದಿದೆ.

ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್​ಗೆ ಡೆಂಗ್ಯೂ, ಮನೆಯಲ್ಲೇ ಚಿಕಿತ್ಸೆ
ಬಿಬಿಎಂಪಿ ಆಯುಕ್ತ ತುಷಾರ್​​ ಗಿರಿನಾಥ್​
Follow us
|

Updated on: Jun 24, 2024 | 12:04 PM

ಬೆಂಗಳೂರು, ಜೂನ್​ 24: ಮಳೆಗಾಲ (Mansoon) ಆರಂಭವಾಗುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯೂ (Dengue) ಉಲ್ಬಣಗೊಳ್ಳುತ್ತಿದೆ. ಬೆಂಗಳೂರಿನ (Bengaluru) ಅನೇಕ ಜನರು ಡೆಂಗ್ಯೂ ರೋಗದಿಂದ ಬಳಲುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೃಹತ್​ ಬೆಂಗಳೂರು ಮಹಾನಗರ ಪಾಲೀಕೆ (BBMP) ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಅವರಿಗೂ ಡೆಂಗೂ ರೋಗ ಕಾಣಿಸಿಕೊಂಡಿದೆ. ನಾಲ್ಕು ದಿನಗಳಲ್ಲಿ ರಜೆಯಲ್ಲಿರುವ ಆಯುಕ್ತರು, ಮನೆಯಲ್ಲೇ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಾರೆ.

ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಜೂನ್​ 22ರವರೆಗೆ ಒಟ್ಟು 5187 ಡೆಂಗ್ಯೂ ಕೇಸ್ ಪತ್ತೆ ಆಗಿದ್ದವು. ಡೆಂಗ್ಯೂ ಹಾವಳಿಗೆ ಜನರು ಹೈರಾಣಾಗಿದ್ದು, ರಾಜಧಾನಿಯಲ್ಲಿ ಜ್ವರ, ನೆಗಡಿ ಹೆಚ್ಚಾಗುತ್ತಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 6 ತಿಂಗಳಲ್ಲಿ 1,230 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದವು. ರಾಜ್ಯದಲ್ಲಿ ಜನವರಿಯಿಂದ 3975 ಕೇಸ್ ಪತ್ತೆ ಆಗಿದ್ದು, ಜೂನ್ ತಿಂಗಳಿನಿಂದ ಕೇಸ್​ಗಳ ಸಂಖ್ಯೆ ಏರಿಕೆ ಕಂಡಿದೆ.

ಇದನ್ನೂ ಓದಿ: ಡೆಂಘೀ ತಡೆಗಟ್ಟಲು ಆಸ್ಪತ್ರೆ, ಪಾಲಿಕೆಗಳಿಗೆ ಸೂಚನೆ ನೀಡಿದ್ದೇವೆ: ಶರಣ ಪ್ರಕಾಶ್​​​, ಗುಂಡೂರಾವ್​

ರಾಜ್ಯದಲ್ಲಿ 37144 ಜನರ ರಕ್ತ ಮಾದರಿ ಪಡೆಯಲಾಗಿತ್ತು. ಇದರಲ್ಲಿ 3957 ಜನರಿಗೆ ಪಾಸಿಟಿವ್ ಬಂದಿತ್ತು. ಬಿಬಿಎಂಪಿ ವ್ಯಾಪ್ತಿಯಲ್ಲಿ 4063 ಜನರ ಸ್ಯಾಂಪಲ್ಸ್ ಸಂಗ್ರಹ ಮಾಡಲಾಗಿದ್ದು, ಈ ಪೈಕಿ 1230 ಜನರಲ್ಲಿ ಡೆಂಗ್ಯೂ ಪಾಸಿಟಿವ್​ ಕಾಣಿಸಿಕೊಂಡಿತ್ತು. ಇಲ್ಲಿಯವರೆಗೆ ಒಟ್ಟು 5187 ಡೆಂಘಿ ಕೇಸ್ ಪತ್ತೆ ಆಗಿದ್ದವು.

ಡೆಂಗ್ಯೂ ಕೇಸ್​​ಗಳಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಹಾವೇರಿ ಇದ್ದು, 389 ಪ್ರಕರಣ ಪತ್ತೆಯಾಗಿವೆ. 12 ಜನರಿಗೆ ಚಿಕಿತ್ಸೆ ಮುಂದುವರೆದಿತ್ತು. ಮೈಸೂರಿನಲ್ಲಿ 358, ಚಿಕ್ಕಮಗಳೂರಲ್ಲಿ 346, ಕಲಬುರಗಿಯಲ್ಲಿ 153 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿದ್ದವು. ರಾಜ್ಯದಲ್ಲಿ ಅತೀ ಕಡಿಮೆ ಅಂದರೆ, ಯಾದಗಿರಿಯಲ್ಲಿ ಕೇವಲ 4 ಪ್ರಕರಣಗಳು ಮಾತ್ರ ಕಂಡು ಬಂದಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!