Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿ ನಾಯಿಗಳ ಸಮೀಕ್ಷೆ ಮಾಡಿ ಮುಗಿಸಿದ ಬಿಬಿಎಂಪಿ: ವಲಯವಾರು ಪಟ್ಟಿ ಬಿಡುಗಡೆ, ಗಣನೀಯ ಇಳಿಕೆ

Street Dogs: ಇತ್ತೀಚೆಗೆ ಬೀದಿ ನಾಯಿಗಳ ದಾಳಿಗೆ ಬೆಂಗಳೂರು ಜನರು ಒಳಗಾಗುತ್ತಿದ್ದಾರೆ. ಹಾಗಾಗಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಬೀದಿ ನಾಯಿಗಳ ಸಮೀಕ್ಷೆ ಮಾಡಿ ಮುಗಿಸಿದ್ದು, ವಲಯವಾರು ಬೀದಿ ನಾಯಿಗಳ ಪಟ್ಟಿಯನ್ನು ಪಾಲಿಕೆ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಲ್ಲಿ ಒಟ್ಟು 2,79,335 ಬೀದಿ ನಾಯಿಗಳನ್ನು ಪಾಲಿಕೆ ಗುರುತಿಸಿದೆ.

ಬೀದಿ ನಾಯಿಗಳ ಸಮೀಕ್ಷೆ ಮಾಡಿ ಮುಗಿಸಿದ ಬಿಬಿಎಂಪಿ: ವಲಯವಾರು ಪಟ್ಟಿ ಬಿಡುಗಡೆ, ಗಣನೀಯ ಇಳಿಕೆ
ಬೀದಿ ನಾಯಿ, ಬಿಬಿಎಂಪಿ
Follow us
Vinayak Hanamant Gurav
| Updated By: ಗಂಗಾಧರ​ ಬ. ಸಾಬೋಜಿ

Updated on:Oct 04, 2023 | 1:54 PM

ಬೆಂಗಳೂರು, ಅಕ್ಟೋಬರ್​ 04: ಇತ್ತೀಚೆಗೆ ಬೀದಿ ನಾಯಿಗಳ (Street Dogs) ದಾಳಿಗೆ ಬೆಂಗಳೂರು ಜನರು ಒಳಗಾಗುತ್ತಿದ್ದಾರೆ. ಈ ಹಿನ್ನೆಲೆ ಮೂರು ತಿಂಗಳ ಹಿಂದೆ ಸಮೀಕ್ಷೆ ನಡೆಸುವುದಾಗಿ ಬಿಬಿಎಂಪಿ ಹೇಳಿತ್ತು. ಹಾಗಾಗಿ ಇದೀಗ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಬೀದಿ ನಾಯಿಗಳ ಸಮೀಕ್ಷೆ ಮಾಡಿ ಮುಗಿಸಿದ್ದು, ವಲಯವಾರು ಬೀದಿ ನಾಯಿಗಳ ಪಟ್ಟಿಯನ್ನು ಪಾಲಿಕೆ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಲ್ಲಿ ಒಟ್ಟು 2,79,335 ಬೀದಿ ನಾಯಿಗಳನ್ನು ಪಾಲಿಕೆ ಗುರುತಿಸಿದೆ.

2019ರ ಸಮೀಕ್ಷೆ ಪ್ರಕಾರ ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಆಗಿದ್ದು, ಸುಮಾರು 32 ಸಾವಿರ ಬೀದಿ ನಾಯಿಗಳು ಕಾಲಕ್ರಮೇಣವಾಗಿ ಕಡಿಮೆಯಾಗಿದೆ. ಈ 2.79 ಲಕ್ಷ ಬೀದಿ ನಾಯಿಗಳ ಪೈಕಿ 71.85% ಸಂತಾನಹರಣ ಚಿಕಿತ್ಸೆ ನಡೆಸಲಾಗಿದೆ. ಬಿಬಿಎಂಪಿ ಬೀದಿ ನಾಯಿ ಸಮೀಕ್ಷೆಗೆ ಒಟ್ಟು 50 ತಂಡಗಳನ್ನು ಪಾಲಿಕೆ ರಚಿಸಿತ್ತು.

ಇದನ್ನು ಓದಿ: ರೇಬಿಸ್ ರೋಗ ತಡೆಗಟ್ಟಲು ಸಂತಾನ ಶಕ್ತಿ ಹರಣ ಚಿಕಿತ್ಸೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಳೆಯಿಂದ ಬೀದಿ ನಾಯಿಗಳ ಸಮೀಕ್ಷೆ

ಈ ಕುರಿತಾಗಿ ಬಿಬಿಎಂಪಿ ಸ್ಪೆಷಲ್ ಕಮಿಷನರ್ ತ್ರಿಲೋಕ್‌ ಚಂದ್ರ ಪ್ರತಿಕ್ರಿಯಿಸಿದ್ದು, ರೇಬೀಸ್ ರೋಗವನ್ನು ತಡೆ ಹಿಡಿಯುವ ನಿಟ್ಟಿನಲ್ಲಿ ಸಮೀಕ್ಷೆ ನಡೆಸಲಾಗಿದೆ. ಬೀದಿನಾಯಿಗಳ ಪರಿಪಾಲನೆ ದೃಷ್ಟಿಯಿಂದಲೂ ಸಮೀಕ್ಷೆ ನಡೆಸಲಾಗಿದೆ. ಪಾಲಿಕೆ‌ ಸತತವಾಗಿ ಸಂತಾನಹರಣ ಚಿಕಿತ್ಸೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಬೀದಿ ನಾಯಿಗಳ ಸಮೀಕ್ಷೆ ನಡೆದು ನಾಲ್ಕು ವರ್ಷ ಆಗಿತ್ತು. ವೈಜ್ಞಾನಿಕವಾಗಿ 50 ತಂಡಗಳ ಮೂಲಕ ನಾವು ಸಮೀಕ್ಷೆ ನಡೆಸಿ, ವರದಿ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Street Dogs Census: ಡ್ರೋನ್ ಬಳಸಿ ಬೀದಿ ನಾಯಿಗಳ ಗಣತಿಗೆ ಮುಂದಾದ ಬಿಬಿಎಂಪಿ

ಸಮೀಕ್ಷೆ ಸಿಬ್ಬಂದಿಗಳಿಗೆ ಬಿಬಿಎಂಪಿ ಕಡೆಯಿಂದಲೇ ನಾವು ತರಬೇತಿ ಕೊಟ್ಟಿದ್ದೆವು. ಸಮೀಕ್ಷೆ ನಡೆಸಲು ಡ್ರೋನ್ ಅನ್ನು ಕೂಡ ಬಳಸಲಾಗಿದೆ. ಕೆರೆ ಹಾಗೂ ಖಾಲಿ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಲು ಡ್ರೋನ್ ಬಳಸಲಾಗಿದೆ. ಈ ರೀತಿಯ ಬೀದಿನಾಯಿಗಳ ಸಮೀಕ್ಷೆಗೂ ಟೆಕ್ನಾಲಜಿ ಬಳಸಿ ಯಶಸ್ವಿಯಾಗಿದ್ದೇವೆ. ಬೀದಿನಾಯಿಗಳ‌ ಮೇಲೆ ನಿಗಾ ಇಡಲು ನಾಯಿಗಳಿಗೆ ಜಿಯೋ ಟ್ಯಾಗಿಂಗ್ ಮಾಡಲಾಗುತ್ತೆ. ಮೈಕ್ರೋ ಚಿಪ್ ಅಳವಡಿಕೆ ಮಾಡುವ ಮೂಲಕ ಬೀದಿನಾಯಿಗಳ ಮೇಲೆ ನಿಗಾ ಇಡಬಹುದು ಎಂದು ತಿಳಿಸಿದ್ದಾರೆ.

ವಲಯವಾರು ಬೀದಿನಾಯಿಗಳ ವಿವರ ಹೀಗಿದೆ

  • ಪೂರ್ವ ವಲಯ : 37685
  • ಪಶ್ಚಿಮ ವಲಯ : 22026
  • ದಕ್ಷಿಣ ವಲಯ : 23241
  • ದಾಸರಹಳ್ಳಿ ವಲಯ : 21221
  • ಆರ್‌ಆರ್ ನಗರ : 41266
  • ಬೊಮ್ಮನಹಳ್ಳಿ ವಲಯ : 39183
  • ಯಲಹಂಕ ವಲಯ : 36434
  • ಮಹಾದೇವಪುರ : 58372
  • ಒಟ್ಟು : 279335

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 1:51 pm, Wed, 4 October 23

ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ