ಬಾಕಿ ಬಿಲ್ ತಡೆ, ಸರ್ಕಾರದ ವಿರುದ್ಧ ರಾಜ್ಯಪಾಲಗೆ ದೂರು ನೀಡಿದ ಬಿಬಿಎಂಪಿ ಗುತ್ತಿಗೆದಾರರ ಸಂಘ
ರಾಜ್ಯ ಸರ್ಕಾರದ ವಿರುದ್ಧ ಬಿಬಿಎಂಪಿ ಗುತ್ತಿಗೆದಾರರ ಸಂಘ ಸಿಡಿದೆದ್ದಿದ್ದು, ಬಾಕಿ ಹಣ ಬಿಡುಗಡೆಗೆ ತಡೆ ಹಿಡಿದಿರುವುದನ್ನು ಸರ್ಕಾರದ ಕ್ರಮ ಖಂಡಿಸಿ ರಾಜ್ಯಪಾಲರಿಗೆ ದೂರು ನೀಡಿದೆ.
ಬೆಂಗಳೂರು, (ಆಗಸ್ಟ್ 08): ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಬಿಬಿಎಂಪಿ ಗುತ್ತಿಗೆದಾರರ ಸಂಘ(BBMP contractor association) ಕಮಿಷನ್ ಆರೋಪ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ಬೆನಲ್ಲೇ ಇದೀಗ ಗುತ್ತಿಗೆದಾರರು, ಬಾಕಿ ಹಣ ಬಿಡುಗಡೆಗೆ ತಡೆ ಹಿಡಿದಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ರಾಜ್ಯಪಾಲರ ಮೊರೆ ಹೋಗಿದ್ದಾರೆ. ಇಂದು(ಆಗಸ್ಟ್ 08) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಸರ್ಕಾರ ತಡೆ ಹಿಡಿದಿರುವ ಬಾಕಿ ಬಿಲ್ ಬಗ್ಗೆ ದೂರು ನೀಡಿದೆ. BBMP ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ದೂರು ನೀಡಲಾಗಿದ್ದು, ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಸೂಚನೆ ನೀಡುವಂತೆ ಮನವಿ ಮಾಡಿದ್ದಾರೆ. ಬಳಿಕ ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಬಿಬಿಎಂಪಿ ಕಾಮಗಾರಿಗಳ ಬಿಲ್ ಬಿಡುಗಡೆಗೆ ಮನವಿ ಮಾಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯರು, BBMP ವ್ಯಾಪ್ತಿಯಲ್ಲಿ 28 ತಿಂಗಳ ಹಿಂದೆಯೇ ಕಾಮಗಾರಿ ಪೂರ್ಣಗೊಳಿಸಿದ್ದು, ಚುನಾವಣೆ, ಹೊಸ ಸರ್ಕಾರ ರಚನೆ ಕಾರಣಕ್ಕಾಗಿ ಬಿಡುಗಡೆ ಆಗಿಲ್ಲ. 8 ತಿಂಗಳಿನಿಂದ ಗುತ್ತಿಗೆದಾರರ ಬಾಕಿ ಮೊತ್ತ ಬಿಡುಗಡೆ ಆಗಿಲ್ಲ. ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಎಂದು ಅಳಲು ತೋಡಿಕೊಂಡರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಇದೆ. ಚುನಾವಣೆ, ಹೊಸ ಸರ್ಕಾರ ರಚನೆ ಹೀಗೆ 8 ತಿಂಗಳಿನಿಂದ ಬಾಕಿ ಮೊತ್ತ ಬಿಡುಗಡೆಯಾಗಿಲ್ಲ. ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ ಎಂಬ ವಿಷಯವನ್ನು ಸಂಘದ ಅಧ್ಯಕ್ಷ ಆರ್. ಅಂಬಿಕಾಪತಿ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ