ಬೆಂಗಳೂರಿನ ಎಂಟು ವಲಯಗಳಲ್ಲಿ ಕೊವಿಡ್ ನಿಯಂತ್ರಣಾ ಕೊಠಡಿಗಳು ಲಭ್ಯ ಬಿಬಿಎಂಪಿ ಪ್ರಕಟಣೆ

Covid Helpline Number: ಕೋವಿಡ್‌ ಪ್ರಕರಣಗಳ ಏರಿಕೆ ಹಿನ್ನಲೆಯಲ್ಲಿ ಬಿಬಿಎಂಪಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಕೋವಿಡ್ ಕೇರ್ ಸೆಂಟರ್ ಆರಂಭಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,387 ಹಾಸಿಗೆಗಳನ್ನು ಹೊಂದಿರುವ 16 ಕೋವಿಡ್ ಕೇರ್ ಸೆಂಟರ್‌ಗಳಿವೆ.

ಬೆಂಗಳೂರಿನ ಎಂಟು ವಲಯಗಳಲ್ಲಿ ಕೊವಿಡ್ ನಿಯಂತ್ರಣಾ ಕೊಠಡಿಗಳು ಲಭ್ಯ ಬಿಬಿಎಂಪಿ ಪ್ರಕಟಣೆ
ಕೋವಿಡ್​ ಕೇರ್​ ಸೆಂಟರ್​
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 19, 2022 | 12:22 PM

ಕರ್ನಾಟಕ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ (coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBPM) ವ್ಯಾಪ್ತಿಯಲ್ಲಿ ಕೊವಿಡ್ಗೆ ಸಂಬಂಧಿಸಿದ ಮಾಹಿತಿಗಾಗಿ ನಿಯಂತ್ರಣಾ ಕೊಠಡಿಗಳನ್ನು ತೆರೆಯಲಾಗಿದೆ. ಎಂಟು ವಲಯಗಳಲ್ಲಿ ನಿಯಂತ್ರಣಾ ಕೊಠಡಿಗಳನ್ನು ತೆರೆಯಲಾಗಿದ್ದು, ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ಹೆಲ್ಪ್​ಲೈನ್​ ನಂಬರ್​ಗಳನ್ನ ತಿಳಿಸಿದೆ.

ನಗರದ ಎಲ್ಲಾ ನಾಗರೀಕರು ಕೊವಿಡ್​ಗೆ ಸಂಬಂಧಿಸಿದಂತೆ ಟ್ರಯಾಜಿಂಗ್, ಕೊವಿಡ್ ಪರೀಕ್ಷೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಾಹಿತಿ, ಆಸ್ಪತ್ರೆಗೆ ದಾಖಲು, ಲಸಿಕೆ ಪಡೆಯುವುದು ಸೇರಿದಂತೆ ಇತರೆ ವಿಷಯಗಳ ಬಗ್ಗೆ ನಿಯಂತ್ರಣ ಕೊಠಡಿಯ ಸಿಬ್ಬಂದಿಯಿಂದ ಮಾಹಿತಿ ಪಡೆಯಬಹುದು. ದಿನದ 24 ಗಂಟೆಯೂ ಅಗತ್ಯ ಮಾಹಿತಿ ನೀಡಲಿದ್ದಾರೆ ಅಂತ ಬಿಬಿಎಂಪಿ ತಿಳಿಸಿದೆ.

ಕೋವಿಡ್‌ ಪ್ರಕರಣಗಳ ಏರಿಕೆ ಹಿನ್ನಲೆಯಲ್ಲಿ ಬಿಬಿಎಂಪಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಕೋವಿಡ್ ಕೇರ್ ಸೆಂಟರ್ ಆರಂಭಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,387 ಹಾಸಿಗೆಗಳನ್ನು ಹೊಂದಿರುವ 16 ಕೋವಿಡ್ ಕೇರ್ ಸೆಂಟರ್‌ಗಳಿವೆ ಎಂದು ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ ತಿಳಿಸಿದ್ದಾರೆ.

ಅಲ್ಲದೇ ಕೋವಿಡ್ ಸೋಂಕಿತರಿಗೆ ಸಹಾಯವಾಗಲು, ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡಲು ಬಿಬಿಎಂಪಿ ಸಹಾಯವಾಣಿ ಆರಂಭಿಸಿದೆ. ಸಹಾಯವಾಣಿ ಸಂಖ್ಯೆ 1533.

ಕೋವಿಡ್ ಕೇರ್ ಸೆಂಟರ್ ವಿವರ ಪಶ್ಚಿಮ ವಿಭಾಗ: ಗಾಂಧಿ ನಗರ, ಮಹಾಲಕ್ಷ್ಮೀಪುರಂನಲ್ಲಿ ಎರಡು ಕೋವಿಡ್ ಕೇರ್ ಸೆಂಟರ್ ಇದೆ. ಇವುಗಳಲ್ಲಿ ಸಾಮಾನ್ಯ ಬೆಡ್ 100, ಆಕ್ಸಿಜನ್ ಬೆಡ್ 100 ಸೇರಿದಂತೆ ಒಟ್ಟು 200 ಹಾಸಿಗೆಗಳ ವ್ಯವಸ್ಥೆ ಇದೆ.

ದಕ್ಷಿಣ ವಿಭಾಗ; ಜಯನಗರ (40 ಸಾಮಾನ್ಯ, 8 ಆಕ್ಸಿಜನ್ ಬೆಡ್), ಬಿಟಿಎಂ ಲೇಔಟ್ (4 ಸಾಮಾನ್ಯ, 20 ಆಕ್ಸಿಜನ್ ಬೆಡ್), ಚಿಕ್ಕಪೇಟೆ (4 ಸಾಮಾನ್ಯ, 20 ಆಕ್ಸಿಜನ್ ಬೆಡ್), ವಿಜಯನಗರ (38 ಆಕ್ಸಿಜನ್ ಬೆಡ್), ಬಸವನಗುಡಿ (5 ಸಾಮಾನ್ಯ, 5 ಆಕ್ಸಿಜನ್ ಬೆಡ್)ಗಳಿವೆ. ಪರ‍್ವ ವಿಭಾಗದ ಸಿ. ವಿ. ರಾಮನ್ ನಗರದಲ್ಲಿ ಕೋವಿಡ್ ಕೇರ್ ಸೆಂಟರ್ ಇದೆ, 30 ಆಕ್ಸಿಜನ್ ಬೆಡ್ ವ್ಯವಸ್ಥೆ ಇಲ್ಲಿದೆ. ಆರ್. ಆರ್. ನಗರ ವಿಭಾಗದಲ್ಲಿ ಯಶವಂತಪುರದಲ್ಲಿ 50 ಸಾಮಾನ್ಯ, 50 ಆಕ್ಸಿಜನ್ ಬೆಡ್ ವ್ಯವಸ್ಥೆ ಇದೆ. ಬೊಮ್ಮನಹಳ್ಳಿ ವಿಭಾಗದಲ್ಲಿ ಬೊಮ್ಮನಹಳ್ಳಿಯಲ್ಲಿ 30 ಸಾಮಾನ್ಯ, 20 ಆಕ್ಸಿಜನ್ ಬೆಡ್ ಇದೆ. ಮಹದೇವಪುರ ವಿಭಾಗದಲ್ಲಿ ಮಹದೇವಪುರದಲ್ಲಿ 153 ಸಾಮಾನ್ಯ ಬೆಡ್ ಇದೆ. ಕೆ. ಆರ್. ಪುರಂನಲ್ಲಿ 88 ಸಾಮಾನ್ಯ, 50 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲಾಗಿದೆ. ಯಲಹಂಕ ವಿಭಾಗದಲ್ಲಿ ಯಲಹಂಕದಲ್ಲಿ 60 ಸಾಮಾನ್ಯ, 40 ಆಕ್ಸಿಜನ್ ಬೆಡ್, ಬ್ಯಾಟರಾಯನಪುರದಲ್ಲಿ 280 ಸಾಮಾನ್ಯ, 100 ಆಕ್ಸಿಜನ್ ಬೆಡ ವ್ಯವಸ್ಥೆ ಇದೆ. ದಾಸರಹಳ್ಳಿ ವಿಭಾಗದಲ್ಲಿ 75 ಸಾಮಾನ್ಯ, 30 ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆ ಇದೆ.

ಕೋವಿಡ್ 3ನೇ ಅಲೆ ಸಂದರ್ಭದಲ್ಲಿ ಆಸ್ಪತ್ರೆ ಸೇರುವವರ ಸಂಖ್ಯೆ ಕಡಿಮೆ ಇದೆ. ಅಲ್ಲದೇ ಆಕ್ಸಿಜನ್ ಬೆಡ್‌ಗಳಿಗೆ ಸಹ ಬೇಡಿಕೆ ಬಂದಿಲ್ಲ. ಕೋವಿಡ್‌ ಸೋಂಕಿತರು ಹೋಂ ಐಸೋಲೇಷನ್‌ನಲ್ಲಿಯೇ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಾರೆ. ಆದರೆ ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಮತ್ತೆ ಆರಂಭಿಸಲಾಗಿದೆ. ಅಲ್ಲಿ ಆಕ್ಸಿಜನ್ ಬೆಡ್‌ಗಳಿಗೆ ಸಹ ವ್ಯವಸ್ಥೆ ಮಾಡಲಾಗಿದೆ. ಒಂದು ವೇಳೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಏರಿಕೆಯಾದರೆ ಆಗ ಇದು ಸಹಾಯಕ್ಕೆ ಬರಲಿದೆ. ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಸಹ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಹಾಸಿಗೆಗಳ ವ್ಯವಸ್ಥೆ ಮಾಡಲಾಗುತ್ತಿದೆ. ಈ ವಾರದ ಅಂತ್ಯದಲ್ಲಿ 5 ಸಾವಿರಕ್ಕೂ ಅಧಿಕ ಹಾಸಿಗೆಗಳು ಲಭ್ಯವಾಗಲಿವೆ. ಪ್ರಸ್ತುತ ನಗರದಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು 1836 ಹಾಸಿಗೆಗಳಲ್ಲಿ 1667ಹಾಸಿಗೆಗಳು ಖಾಲಿ ಇವೆ. 166 ಸೋಂಕಿತರು ಮಾತ್ರ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: 

ಓಮಿಕ್ರಾನ್​ ಆತಂಕ: ಬಟ್ಟೆಯ ಮಾಸ್ಕ್​ಗಳ ಬಳಕೆ ಬೇಡ ಎಂದ ತಜ್ಞರು

ಕೊರೊನಾ ಶಾಶ್ವತವಾಗಿ ಮುಂದುವರೆಯುವುದಿಲ್ಲ, ಅದರ ಅಂತ್ಯ ಹತ್ತಿರದಲ್ಲೇ ಇದೆ: ತಜ್ಞರ ಹೇಳಿಕೆ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ