ಬಿಬಿಎಂಪಿಯಿಂದ ಅದ್ಧೂರಿ ಕೆಂಪೆಗೌಡರ ಜಯಂತಿ ಆಚರಣೆ: 31 ಸಾಧಕರಿಗೆ ಪ್ರಶಸ್ತಿ

|

Updated on: Nov 08, 2022 | 5:09 PM

ಈ ಬಾರಿ ಬಿಬಿಎಂಪಿ ನಾಡಪ್ರಭು ಕೆಂಪೆಗೌಡರ ಜನ್ಮದಿನವನ್ನು ವಿಜೃಂಭಣೆಯಾಗಿ ಆಚರಿಸಲು ನಿರ್ಧರಿಸಿದೆ.

ಬಿಬಿಎಂಪಿಯಿಂದ ಅದ್ಧೂರಿ ಕೆಂಪೆಗೌಡರ ಜಯಂತಿ ಆಚರಣೆ: 31 ಸಾಧಕರಿಗೆ ಪ್ರಶಸ್ತಿ
ನಾಡಪ್ರಭು ಕೆಂಪೆಗೌಡರು
Follow us on

ಬೆಂಗಳೂರು: ಈ ಬಾರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಾಡಪ್ರಭು ಕೆಂಪೆಗೌಡರ ಜನ್ಮದಿನವನ್ನು (Kempegowda jayanthi) ವಿಜೃಂಭಣೆಯಾಗಿ ಆಚರಿಸಲು ನಿರ್ಧರಿಸಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್ ಕೊವಿಡ್​ ಹಿನ್ನೆಲೆ 2 ವರ್ಷದಿಂದ ಕೆಂಪೇಗೌಡ ಜಯಂತಿ ಆಚರಿಸಿರಲಿಲ್ಲ. ಬಿಬಿಎಂಪಿ ನೌಕರರ ಸಂಘದ ಬೇಡಿಕೆಯಂತೆ ಇದೇ ತಿಂಗಳಲ್ಲಿ ಕೆಂಪೇಗೌಡರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುತ್ತೇವೆ. ಎಲ್ಲಿ ಜಯಂತಿ ಆಚರಿಸಬೇಕೆಂದು ಸಮಿತಿ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದರು.

ಈ ಬಾರಿ 31 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಹೀಗಾಗಿ ಕೆಂಪೇಗೌಡ ಪ್ರಶಸ್ತಿಗೆ ಅರ್ಜಿ ಆಹ್ವಾನಿಸುತ್ತೇವೆ. ಅರ್ಜಿಗಳು ಹೆಚ್ಚಿಗೆ ಬರುವ ಸಾಧ್ಯತೆ ಇದೆ ಎಂದು ತಿಳಸಿದ್ದಾರೆ.

ಪ್ರಧಾನಿ ಮೋದಿಯಿಂದ ಕೆಂಪೇಗೌಡ ಏರ್​ಪೋರ್ಟ್​​​ನಲ್ಲಿ ಕೆಂಪೇಗೌಡರ ಪ್ರತಿಮೆ ಉದ್ಘಾಟನೆ

 ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​​​ನಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್​​ 11 ರಂದು ಉದ್ಘಾಟನೆ ಮಾಡಲಿದ್ದಾರೆ. ಕೆಂಪೇಗೌಡರ ಪ್ರತಿಮೆ ಮುಂಭಾಗ ಥೀಮ್ ಪಾರ್ಕ್ ಸಹ ನಿರ್ಮಾಣವಾಗಿದೆ. ವಿಮಾನ ನಿಲ್ದಾಣ ಪ್ರವೇಶ ದ್ವಾರದ ಬಳಿ 64 ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗಿದೆ. 98 ಕೆಜಿ ಕಂಚು, 120 ಕೆಜಿ ಸ್ಟೀಲ್ ಬಳಸಿ ನಿರ್ಮಿಸಿರುವ ಪ್ರತಿಮೆ ಇದಾಗಿದೆ.

ಏರ್ಪೋಟ್ ನಲ್ಲಿ ತಲೆ ಎತ್ತಿದೆ 108 ಅಡಿಯ ಬೃಹತ್ ಕೆಂಪೇಗೌಡ ಪ್ರತಿಮೆ:

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಲೆ ಎತ್ತಿರೂ 64 ಕೋಟಿ ರೂ ವೆಚ್ಚದ 108 ಅಡಿಯ ಬೃಹತ್ ಕಂಚಿನ ಪ್ರತಿಮೆ ಅನಾವರಣವಾಗಲಿದೆ. ಹಾಗಾಗಿ ರಾಜ್ಯಾದ್ಯಂತ ನಡೆಯಲಿರುವ ಉದ್ಘಾಟನಾ ಅಭಿಯಾನಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ನಾಳೆ ಬೆಳಗ್ಗೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೃಹತ್ ಎಲ್ಈಡಿ ಸ್ಕ್ರೀನ್ಗಳು ವಾಹನ ಸೇರಿದಂತೆ ಪ್ರತಿಮೆ ಉದ್ಘಾಟನಾ ಅಭಿಯಾನಕ್ಕೆ ಚಾಲನೆ ನೀಡಲಿದ್ದು ಸಿಎಂ ಗೆ ಸಚಿವರಾದ ಅಶ್ವಥ್ ನಾರಾಯಣ್, ಸುಧಾಕರ್ ಸೇರಿದಂತೆ ಹಲವರು ಸಾಥ್ ನೀಡಲಿದ್ದಾರೆ.

ಇನ್ನು ಪ್ರತಿಮೆಯ ಮುಂಭಾಗದಲ್ಲಿ 3 ಎಕರೆ ಜಾಗದಲ್ಲಿ 20 ಕೋಟಿ ವೆಚ್ಚದಲ್ಲಿ ಥೀಮ್ ಪಾರ್ಕ್ ಸಹ ತಲೆ ಎತ್ತಲಿದ್ದು ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ ಆಡಳಿತದ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯವನ್ನು ಸರ್ಕಾರ ಮಾಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:59 pm, Tue, 8 November 22