ಟಿಇಟಿ ಪಾಸ್ ಮಾಡದ ಹೊರಗುತ್ತಿಗೆ ಶಿಕ್ಷಕರಿಗೆ ಗೇಟ್ ಪಾಸ್; ಬಿಬಿಎಂಪಿ ನಿರ್ಧಾರಕ್ಕೆ ಶಿಕ್ಷಕರು ಕಂಗಾಲು

ಪಾಠ ಮಾಡಲು ಬೇಕಾದ ಅರ್ಹತೆಯಿಲ್ಲದ 200ಕ್ಕೂ ಹೆಚ್ಚು ಹೊರ ಗುತ್ತಿಗೆ ಶಿಕ್ಷಕರಿಗೆ ಗೇಟ್ ಪಾಸ್ ನೀಡಲು ಮುಂದಾಗಿದೆ. ಬಿಬಿಎಂಪಿ ಸೂಚನೆ ನೀಡಿದರೂ ಕೂಡ ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ಪಾಸ್ ಮಾಡದ ಹೊರ ಗುತ್ತಿಗೆ ಶಿಕ್ಷಕರಿಗೆ ಕೊಕ್ ನೀಡಲಿದೆ.

ಟಿಇಟಿ ಪಾಸ್ ಮಾಡದ ಹೊರಗುತ್ತಿಗೆ ಶಿಕ್ಷಕರಿಗೆ ಗೇಟ್ ಪಾಸ್; ಬಿಬಿಎಂಪಿ ನಿರ್ಧಾರಕ್ಕೆ ಶಿಕ್ಷಕರು ಕಂಗಾಲು
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on:May 17, 2023 | 2:57 PM

ಬೆಂಗಳೂರು: ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕ್ಷೀಣಿಸುತ್ತಿರುವುದನ್ನು ಮನಗಂಡ ಪಾಲಿಕೆ ಈ ಬಗ್ಗೆ ಒಂದು ನಿರ್ಧಾರಕ್ಕೆ ಬಂದಿದೆ. ಪಾಠ ಮಾಡಲು ಬೇಕಾದ ಅರ್ಹತೆಯಿಲ್ಲದ 200ಕ್ಕೂ ಹೆಚ್ಚು ಹೊರ ಗುತ್ತಿಗೆ ಶಿಕ್ಷಕರಿಗೆ ಗೇಟ್ ಪಾಸ್ ನೀಡಲು ಮುಂದಾಗಿದೆ. ಬಿಬಿಎಂಪಿ ಸೂಚನೆ ನೀಡಿದರೂ ಕೂಡ ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ಪಾಸ್ ಮಾಡದ ಹೊರ ಗುತ್ತಿಗೆ ಶಿಕ್ಷಕರಿಗೆ ಕೊಕ್ ನೀಡಲಿದೆ.

ಕಳೆದ ವರ್ಷವೇ ಅನರ್ಹ ಹೊರ ಗುತ್ತಿಗೆ ಶಿಕ್ಷಕರಿಗೆ ಗೇಟ್ ಪಾಸ್ ನೀಡಲು ಬಿಬಿಎಂಪಿ ಮುಂದಾಗಿತ್ತು. ಆದ್ರೆ ಹೊರ ಗುತ್ತಿಗೆ ಶಿಕ್ಷಕರು ಕಾಲಾವಕಾಶ ಕೇಳಿದ ಕಾರಣ ಒಂದು ವರ್ಷ ಮುಂದೂಡಲಾಗಿತ್ತು. ಸದ್ಯ ಬಿಬಿಎಂಪಿಯ ಶಾಲೆ ಹಾಗೂ ಪಿಯು ಕಾಲೇಜುಗಳು ಜೂನ್ ತಿಂಗಳಲ್ಲಿ ಪುನಾರಂಭ ಆಗಲಿವೆ. ಪಾಲಿಕೆಯ 163 ಶಾಲಾ ಕಾಲೇಜುಗಳಲ್ಲಿ 728 ಹೊರ ಗುತ್ತಿಗೆ ಶಿಕ್ಷಕರಿದ್ದಾರೆ. ಈ ಪೈಕಿ 200ಕ್ಕೂ ಹೆಚ್ಚು ಬೋಧಕರು ಅರ್ಹತೆ ಹೊಂದಿಲ್ಲ. ಹೀಗಾಗಿ ದಾಖಲಾತಿ ಪರಿಶೀಲನೆಗೆ ಬಿಬಿಎಂಪಿ ಮುಂದಾಗಿದ್ದು 15 ದಿನ ದಾಖಲೆ ಪರಿಶೀಲನೆ ನಡೆಸಿ, ಅರ್ಹತೆಯಿಲ್ಲದವರಿಗೆ ಗೇಟ್ ಪಾಸ್ ನೀಡಲು ನಿರ್ಧರಿಸಿದೆ. ನೇಮಕಾತಿ ಪರಿಶೀಲನೆ ವೇಳೆ ಟಿಇಟಿ ಸರ್ಟಿಫಿಕೇಟ್ ಪರಿಶೀಲನೆ ಮಾಡಲಾಗುತ್ತೆ. ಪ್ರೌಡ ಶಾಲೆ ಹಾಗೂ ಕಾಲೇಜಿಗೂ ಕೂಡ ಬೇಕಾದ ಅರ್ಹತೆಯಿಲ್ಲದಿದ್ದರು ಗೇಟ್ ಪಾಸ್ ಮಾಡಲಾಗುತ್ತೆ. ಸದ್ಯ ಬಿಬಿಎಂಪಿ ನಿರ್ಧಾರಕ್ಕೆ ಶಿಕ್ಷಕರು ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲಾ ಶಿಕ್ಷಕನಿಂದ 18 ವಿದ್ಯಾರ್ಥಿನಿಯರಿಗೆ ಕಿರುಕುಳ, ಪ್ರಾಂಶುಪಾಲರ ಸಪೋರ್ಟ್​, ಬಂಧನ

ಅಕ್ರಮವಾಗಿ ಬಿ ಖಾತ ಟೂ ಎ ಖಾತ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Elections 2023) ಹಿನ್ನೆಲೆ ಜಾರಿಯಾಗಿದ್ದ ನೀತಿ ಸಂಹಿತೆ(Code of Conduct) ಮುಗಿಯುತ್ತಿದ್ದಂತೆ ಅಧಿಕಾರಿಗಳಿಗೆ ಬಿಬಿಎಂಪಿ(BBMP) ಚಾಟಿ ಬೀಸಿದೆ. ಹೀಗಾಗಿ ಈಗ ಅಕ್ರಮವಾಗಿ ಎ ಖಾತ ಮಾಡಿ ಕೊಟ್ಟ ಅಧಿಕಾರಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ. ಮಾರ್ಚ್ 29ರಂದು ಜಾರಿಯಾದ ನೀತಿ ಸಂಹಿತೆ ಮೇ 16ರಂದು ಮುಗಿಯುತ್ತಿದ್ದಂತೆ ಬಿಬಿಎಂಪಿ ಅಧಿಕಾರಿಗಳು ತಮ್ಮ ರೆಗ್ಯುಲರ್ ಕೆಲಸಗಳಿಗೆ ಮರಳಿದ್ದಾರೆ. ಸದ್ಯ ಅಕ್ರಮವಾಗಿ ಎ ಖಾತಗಳ ವಿಚಾರದಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಲು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್(Tushar Girinath) ಮುಂದಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:48 pm, Wed, 17 May 23

ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ