AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರ್ಡ್ ಮರು ವಿಂಗಡಣೆ ನಕ್ಷೆ ಬಿಡುಗಡೆ ಮಾಡಿದ ಬಿಬಿಎಂಪಿ; ಸಾರ್ವಜನಿಕರ ಆಕ್ಷೇಪಣೆಗೆ 15 ದಿನ ಕಾಲಾವಕಾಶ

ಕರಡು ಅಧಿಸೂಚನೆಯಲ್ಲಿ, ನಗರಾಭಿವೃದ್ಧಿ ಇಲಾಖೆಯು 225 ವಾರ್ಡ್‌ಗಳ ಗಡಿಗಳನ್ನು ಚಿತ್ರಿಸಿದೆ ಮತ್ತು ಕ್ರಮವಾಗಿ ಹೆಸರಿಸಿದೆ. ಬಿಬಿಎಂಪಿ BBMP ward delimitation; ಈಗ ಎಲ್ಲ ಗಡಿಗಳ ನಕ್ಷೆಯನ್ನು ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ನಕ್ಷೆಯು ಅಸ್ತಿತ್ವದಲ್ಲಿರುವ ಮತ್ತು ವಿಂಗಡಣೆಯಾದ ವಾರ್ಡ್, ಆ ವಾರ್ಡ್ ವಿಸ್ತೀರ್ಣ, ಜನಸಂಖ್ಯೆ, ವಿಧಾನಸಭೆ ಮತ್ತು ಸಂಸದೀಯ ಕ್ಷೇತ್ರದ ವಿವರಗಳನ್ನು ನೀಡುತ್ತದೆ.

ವಾರ್ಡ್ ಮರು ವಿಂಗಡಣೆ ನಕ್ಷೆ ಬಿಡುಗಡೆ ಮಾಡಿದ ಬಿಬಿಎಂಪಿ; ಸಾರ್ವಜನಿಕರ ಆಕ್ಷೇಪಣೆಗೆ 15 ದಿನ ಕಾಲಾವಕಾಶ
ವಾರ್ಡ್ ಮರು ವಿಂಗಡಣೆ ನಕ್ಷೆ
TV9 Web
| Edited By: |

Updated on: Aug 23, 2023 | 2:36 PM

Share

ಬೆಂಗಳೂರು, ಆಗಸ್ಟ್ 23: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (BBMP) ಆಗಸ್ಟ್ 18 ರಂದು ವಾರ್ಡ್​​ ಮರುವಿಗಡಣೆಯ (Ward delimitation) ಕರಡು ಅಧಿಸೂಚನೆ ಬಿಡುಗಡೆ ಮಾಡಿ ಸಾರ್ವಜನಿಕರಿಂದ ಆಕ್ಷೇಪಣೆ ಕೋರಿತ್ತು. ಆ ಕರಡು ಅಧಿಸೂಚನೆಯಲ್ಲಿರುವ ಪ್ರಕಾರ ಬೆಂಗಳೂರಿನ (Bangalore) ಎಲ್ಲಾ 225 ವಾರ್ಡ್‌ಗಳ ನಕ್ಷೆಯನ್ನು ಇದೀಗ ಬಿಡುಗಡೆ ಮಾಡಿದೆ. ಅಧಿಸೂಚನೆ ಹೊರಡಿಸಿದ 15 ದಿನಗಳಲ್ಲಿ ಸಾರ್ವಜನಿಕರು ತಮ್ಮ ಆಕ್ಷೇಪಣೆಗಳನ್ನು ಕಳುಹಿಸಲು ನಗರಾಭಿವೃದ್ಧಿ ಇಲಾಖೆ (Urban Development Department / UDD) ಅವಕಾಶ ನೀಡಿದೆ.

ಕರಡು ಅಧಿಸೂಚನೆಯಲ್ಲಿ, ನಗರಾಭಿವೃದ್ಧಿ ಇಲಾಖೆಯು 225 ವಾರ್ಡ್‌ಗಳ ಗಡಿಗಳನ್ನು ಚಿತ್ರಿಸಿದೆ ಮತ್ತು ಕ್ರಮವಾಗಿ ಹೆಸರಿಸಿದೆ. ಬಿಬಿಎಂಪಿ ಈಗ ಎಲ್ಲ ಗಡಿಗಳ ನಕ್ಷೆಯನ್ನು ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.

ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ನಕ್ಷೆಯು ಅಸ್ತಿತ್ವದಲ್ಲಿರುವ ಮತ್ತು ವಿಂಗಡಣೆಯಾದ ವಾರ್ಡ್, ಆ ವಾರ್ಡ್ ವಿಸ್ತೀರ್ಣ, ಜನಸಂಖ್ಯೆ, ವಿಧಾನಸಭೆ ಮತ್ತು ಸಂಸದೀಯ ಕ್ಷೇತ್ರದ ವಿವರಗಳನ್ನು ನೀಡುತ್ತದೆ.

ಜನರು ತಮ್ಮ ವಾರ್ಡ್ ಗಡಿಗಳನ್ನು ಪರಿಶೀಲಿಸಬಹುದು ಮತ್ತು ಪೋಸ್ಟ್ ಮೂಲಕ ನಗರಾಭಿವೃದ್ಧಿ ಇಲಾಖೆಗೆ ಆಕ್ಷೇಪಣೆಗಳನ್ನು ಕಳುಹಿಸಬಹುದು ಎಂದು ಬಿಬಿಂಎಪಿ ತಿಳಿಸಿದೆ.

ಅಂಚೆ ಮೂಲಕ ಮಾತ್ರ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಹೇಳಿರುವುದು ನಾಗರೀಕರ ಅಸಮಾಧಾನಕ್ಕೆ ಕಾರಣವಾಗಿದೆ. ಆನ್‌ಲೈನ್‌ನಲ್ಲಿ ಆಕ್ಷೇಪಣೆಗಳನ್ನು ಕಳುಹಿಸಲು ನಗರಾಭಿವೃದ್ಧಿ ಇಲಾಖೆ ಅನುಮತಿ ನೀಡಬೇಕು ಎಂದು ಹಲವಾರು ಜನರು ದೂರಿದ್ದಾರೆ. ಈಗಾಗಲೇ ಆಕ್ಷೇಪಣೆಗಳನ್ನು ಕಳುಹಿಸಿರುವ ಕೆಲವರು ತಮ್ಮ ವಾರ್ಡ್ ಎರಡು ವಿಧಾನಸಭಾ ಕ್ಷೇತ್ರಗಳ ಅಡಿಯಲ್ಲಿ ಬರುವ ಬಗ್ಗೆ ಆಡಳಿತದ ಗಮನ ಸೆಳೆದಿದ್ದಾರೆ. ಜತೆಗೆ ಒಂದೇ ವಿಧಾನಸಭಾ ಕ್ಷೇತ್ರದ ಅಡಿಯಲ್ಲಿ ತರುವಂತೆ ಮಾಡುವ ನಿಟ್ಟಿನಲ್ಲಿ ಬಿಬಿಎಂಪಿಯ ಗಮನ ಸೆಳೆದಿದ್ದಾರೆ.

15 ದಿನಗಳ ನಂತರ, ನಗರಾಭಿವೃದ್ಧಿ ಇಲಾಖೆಯು ಎಲ್ಲಾ ಆಕ್ಷೇಪಣೆಗಳನ್ನು ಪರಿಗಣಿಸುತ್ತದೆ ಮತ್ತು ಅಗತ್ಯ ಬದಲಾವಣೆಗಳನ್ನು ಮಾಡಲಿದೆ. ಆ ನಂತರ ವಾರ್ಡ್‌ಗಳ ಅಂತಿಮ ವಿಂಗಡಣೆಗೆ ಸಂಬಂಧಿಸಿದ ಅಧಿಸೂಚನೆ ಹೊರಡಿಸಲಿದೆ.

ಕರ್ನಾಟಕ ಹೈಕೋರ್ಟ್ ಜೂನ್‌ನಲ್ಲಿ ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಕಾರ್ಯವನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ 12 ವಾರಗಳ ಕಾಲಾವಕಾಶ ನೀಡಿತ್ತು. ಈ ವರ್ಷ ಡಿಸೆಂಬರ್ ಒಳಗೆ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಮುಂದಾಗಿದೆ.

ಇದನ್ನೂ ಓದಿ: ಬಿಬಿಎಂಪಿ ವಾರ್ಡ್​​ ವಿಂಗಡಣೆ ಕರಡು ಪ್ರತಿ ಅಧಿಸೂಚನೆ ಪ್ರಕಟ; ಸಾರ್ವಜನಿಕರ ಆಕ್ಷೇಪಣೆ ಕೋರಿದ ಸರ್ಕಾರ

ಈ ಹಿಂದಿನ ಬಿಜೆಪಿ ಸರ್ಕಾರ ಬಿಬಿಎಂಪಿ ವಾರ್ಡ್​​ಗಳ ಮರು ವಿಂಗಡಣೆ ಮಾಡಿ ವಾರ್ಡ್​ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸಿತ್ತು. ಅದರ ಬಗ್ಗೆ ಆಕ್ಷೇಪಗಳು ಕೇಳಿಬಂದಿದ್ದವು. ಹೀಗಾಗಿ ಮತ್ತೆ ವಾರ್ಡ್ ವಿಂಗಡಣೆ ಮಾಡಿ ಬಿಬಿಎಂಪಿ ಚುನಾವಣೆ ನಡೆಸುವುದಾಗಿ ಸರ್ಕಾರ ಹೇಳಿತ್ತು. ಈ ಮಧ್ಯೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮರು ವಿಂಗಡಣೆ ವಿಚಾರ ಪರಿಶೀಲಿಸುವುದಾಗಿ ಹೇಳಿತ್ತು. ಜೂನ್ 19 ರಂದು ಕರ್ನಾಟಕ ಹೈಕೋರ್ಟ್ ವಾರ್ಡ್ ಮರು ವಿಂಗಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ 12 ವಾರಗಳ ಕಾಲಾವಕಾಶವನ್ನು ನೀಡಿತ್ತು. ಆ ನಂತರದ ಬೆಳವಣಿಗೆಯಲ್ಲಿ ಕರ್ನಾಟಕ ಸರ್ಕಾರವು ಬಿಬಿಎಂಪಿಯ ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225 ಕ್ಕೆ ಇಳಿಸಿದೆ ಕರಡು ಅಧಿಸೂಚನೆ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
TV9 Web
TV9 Web

TV9 Kannada

Read More
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ