AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ : ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ರಂಗ ಸಜ್ಜಾಗಿದ್ದು, ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟವಾಗಲಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ : ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟ
ಬಿಬಿಎಂಪಿ
TV9 Web
| Edited By: ವಿವೇಕ ಬಿರಾದಾರ|

Updated on: Aug 20, 2022 | 5:50 PM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಚುನಾವಣೆಗೆ ರಂಗ ಸಜ್ಜಾಗಿದ್ದು, ಆಗಸ್ಟ್ 25 ರಂದು ಮತದಾರರ (Voters) ಪಟ್ಟಿಯ ಕರಡು ಪ್ರಕಟವಾಗಲಿದೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮತದಾರರ ಪಟ್ಟಿಯ ಕರಡು ಪ್ರಕಟಗೊಂಡಿದೆ. ಮತದಾರರ ಪಟ್ಟಿಯ ಕರಡನ್ನು ಪಾಲಿಕೆಯ ಅಂತರ್ಜಾಲ ತಾಣದ ಜೊತೆಗೆ, ನೋಂದಾಯಿತ ರಾಜಕೀಯ ಪಕ್ಷಗಳ ಕಚೇರಿಗೆ ಹಾಗೂ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳಿಗೆ ಪ್ರತಿಯನ್ನು ನೀಡುವಂತೆ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದರು.

ಈ ಬಾರಿಯ ಚುನಾವಣೆಯಲ್ಲಿ ವಾರ್ಡ್​ಗಳ ಸಂಖ್ಯೆ 198 ರಿಂದ 243 ಕ್ಕೆ ಏರಿಕೆಯಾಗಿದೆ. ವಾರ್ಡ್ ಮರು ವಿಂಗಡನೆಯಾಗಿರುವ ಹಿನ್ನೆಲೆಯಲ್ಲಿ ಮೊದಲು ಮತಗಟ್ಟೆಗಳ ಪರಿಶೀಲನೆ ಆಗಬೇಕಿದೆ. ವಾರ್ಡ್​​ಗಳಿಗೆ ಉಸ್ತುವಾರಿ ಅಧಿಕಾರಿಗಳನ್ನು ಗುರುತಿಸಿ ನೇಮಕ ಮಾಡಲು ಪಟ್ಟಿ ಸಿದ್ಧಗೊಳಿಸಬೇಕಿದೆ ಎಂದು ಅವರು ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರತಿ ಬಾರಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಅತ್ಯಂತ ಕಡಿಮೆ ಇರುತ್ತದೆ. ಮತದಾನದ ಪ್ರಮಾಣ ಹೆಚ್ಚಿಸಲು ವ್ಯಾಪಕ ಪ್ರಚಾರ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಅವಶ್ಯಕತೆ ಇದೆ ಆದರೆ, ಈ ನಿಟ್ಟಿನಲ್ಲಿ ವೆಚ್ಚ ಮಾಡುವಲ್ಲಿ ಮಿತವ್ಯಯ ಸಾಧಿಸುವುದು ಮುಖ್ಯ ಹಾಗೂ ಸೂಕ್ತ ಎಂದರು.

ಸಭೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತರು, ಎಲ್ಲಾ ಎಂಟೂ ವಲಯಗಳ‌ ಜಂಟಿ ಆಯುಕ್ತರು, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಪ್ರತಿನಿಧಿ, ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಹೊನ್ನಾಂಬ ಹಾಜರಿದ್ದರು.

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?