AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Election: ಬಿಬಿಎಂಪಿ ಚುನಾವಣೆ ವಿಚಾರಣೆ ಜುಲೈ 26ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

ಬಿಬಿಎಂಪಿ ಚುನಾವಣೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ಚೀಫ್ ಜಸ್ಟೀಸ್ ಎನ್​ ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ವಿಚಾರಣೆಯನ್ನು ಮುಂದಿನ ಮಂಗಳವಾರಕ್ಕೆ ಮುಂದೂಡಿತು.

BBMP Election: ಬಿಬಿಎಂಪಿ ಚುನಾವಣೆ ವಿಚಾರಣೆ ಜುಲೈ 26ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್
ಬಿಬಿಎಂಪಿ ಕಚೇರಿ
TV9 Web
| Edited By: ಸಾಧು ಶ್ರೀನಾಥ್​|

Updated on:Jul 22, 2022 | 5:06 PM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (BBMP Election) ಚುನಾವಣೆ ನಡೆಸುವ ಪ್ರಕರಣದ ವಿಚಾರಣೆಯನ್ನ ಸುಪ್ರೀಂಕೋರ್ಟ್ (supreme court) ಜುಲೈ 26ಕ್ಕೆ ಮುಂದೂಡಿದೆ. ಪ್ರಕರಣದ ವಿಚಾರಣೆ ನಡೆಯುತ್ತಿರುವ ಚೀಫ್ ಜಸ್ಟೀಸ್ ಎನ್​ ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ವಿಚಾರಣೆಯನ್ನು ಮುಂದಿನ ಮಂಗಳವಾರಕ್ಕೆ ಮುಂದೂಡಿತು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (Bruhat Bengaluru Mahanagara Palike – BBMP) ಚುನಾವಣೆ ನಡೆಸುವಂತೆ ಕರ್ನಾಟಕ ಸರ್ಕಾರಕ್ಕೆ ನೀಡಿದ್ದ ಎಂಟು ವಾರಗಳ ಗಡುವು ಅಂತ್ಯಗೊಂಡ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್​ ಇಂದು (ಜುಲೈ 22) ವಿಚಾರಣೆ ಕೈಗೆತ್ತಿಕೊಂಡಿತ್ತು. ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಬಿಬಿಎಂಪಿ ಪ್ರಕರಣದ ವಿಚಾರಣೆ ನಡೆಯಿತು.

ಈ ಮಧ್ಯೆ, ಚುನಾವಣೆ ನಡೆಸಲು ಮತ್ತಷ್ಟು ಕಾಲಾವಕಾಶ ಕೇಳಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ವಾರ್ಡ್​ಗಳ ಮರುವಿಂಗಡಣೆಯಾಗಿದೆಯಾದರೂ ಈವರೆಗೆ ರಾಜ್ಯ ಸರ್ಕಾರವು ಮೀಸಲಾತಿ ಪ್ರಕಟಿಸಲು ಆಗಿಲ್ಲ. ಮೀಸಲಾತಿ ಪ್ರಕಟಿಸಲು ಕನಿಷ್ಠ 4 ವಾರ ಸಮಯ ಕೇಳುವ ಸಾಧ್ಯತೆಯಿದೆ. ಆದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಲು ಅರ್ಜಿದಾರರಾದ ಶಿವರಾಜ್ ಮತ್ತು ವಾಜಿದ್ ಸಿದ್ಧತೆ ಮಾಡಿಕೊಂಡಿದ್ದಾರೆ.

ಶೇ 33ರ ಮೀಸಲಾತಿಗೆ ಭಕ್ತವತ್ಸಲ ಸಮಿತಿ ಶಿಫಾರಸು

ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ವಿವಿಧ ಸಮುದಾಯಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಗುರುತಿಸಲು ಕರ್ನಾಟಕ ಸರ್ಕಾರವು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕೆ. ಭಕ್ತವತ್ಸಲ ಅಧ್ಯಕ್ಷತೆಯ ಆಯೋಗವನ್ನು ರಚಿಸಿತ್ತು. ಈ ಆಯೋಗವು ಹಿಂದುಳಿದ ವರ್ಗಗಳ ‘ಎ’ ಮತ್ತು ‘ಬಿ’ ಪ್ರವರ್ಗದ ಸಮುದಾಯಗಳಿಗೆ ಈಗಿರುವ ರಾಜಕೀಯ ಮೀಸಲಾತಿಯನ್ನು ಶೇ 33ಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಯೋಗದ ಸದಸ್ಯರು ಅಂತಿಮ ವರದಿ ಸಲ್ಲಿಸಿದ್ದಾರೆ.

ಹೈಕೋರ್ಟ್​ ತೀರ್ಪು ಪ್ರಶ್ನಿಸಿ ಮೇಲ್ಮನವಿ

ಬಿಬಿಎಂಪಿ ಸದಸ್ಯರ ಅಧಿಕಾರ ಅವಧಿಯು ಸೆಪ್ಟೆಂಬರ್ 10, 2019ಕ್ಕೆ ಪೂರ್ಣಗೊಂಡಿತ್ತು. ಶೀಘ್ರದಲ್ಲಿ ಚುನಾವಣೆ ನಡೆಸಬೇಕೆಂಬ ಒತ್ತಾಯಗಳು ಕೇಳಿ ಬಂದಿತ್ತು. ಈ ಸಂಬಂಧ ಡಿಸೆಂಬರ್ 4, 2020ರಂದು ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿ, ‘ಆರು ವಾರಗಳಲ್ಲಿ ಚುನಾವಣೆ ನಡೆಸಬೇಕು’ ಎಂದು ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಆದರೆ ಡಿಸೆಂಬರ್ 18, 2020ರಂದು ಈ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತು. ಅಂದಿನಿಂದಲೂ ಒಂದಲ್ಲ ಒಂದು ಕಾರಣಕ್ಕೆ ಬಿಬಿಎಂಪಿ ಚುನಾವಣೆಯ ಗಡುವು ಮುಂದಕ್ಕೆ ಹೋಗುತ್ತಲೇ ಇದೆ.

ಶಾಸಕರ ಒತ್ತಡಕ್ಕೆ ಮಣಿಯಿತೇ ಸರ್ಕಾರ?

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯು ಮುಂದಿನ ವರ್ಷ ನಡೆಯಲಿದೆ. 28 ಸದಸ್ಯ ಬಲವಿರುವ ಬೆಂಗಳೂರು ನಗರವು ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಮಹತ್ವದ ಪಾತ್ರ ನಿರ್ವಹಿಸಲಿದೆ. ಪಾಲಿಕೆಯಲ್ಲಿ ಸದಸ್ಯರು ಇಲ್ಲದಿದ್ದರೆ ಆಕಾಂಕ್ಷಿಗಳನ್ನು ವಿಧಾನಸಭೆ ಚುನಾವಣೆ ವೇಳೆ ಅನುಕೂಲಕ್ಕೆ ತಕ್ಕಂತೆ ದುಡಿಸಬಹುದು ಎನ್ನುವ ಕಾರಣಕ್ಕೆ ಬಿಬಿಎಂಪಿ ಚುನಾವಣೆ ಮುಂದೂಡಬೇಕು ಎಂದು ಎಲ್ಲ ಪಕ್ಷಗಳ ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಮಾತುಗಳು ಪ್ರಬಲವಾಗಿ ಕೇಳಿಬರುತ್ತಿವೆ.

Published On - 4:37 pm, Fri, 22 July 22

Follow Us
TV9 Web
TV9 Web

TV9 Kannada

Read More
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ