ಬಿಬಿಎಂಪಿ ಚುನಾವಣೆಯ ಕುರಿತ ವಿಚಾರಣೆಯನ್ನು ಮುಂದೂಡಿದ ಸುಪ್ರೀಂ ಕೋರ್ಟ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆಗೆ ಸಂಬಂಧಿಸಿದಂತೆ ಹೈಕೋರ್ಟ್ (High court)ನೀಡಿದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ (Karnataka Government) ಸುಪ್ರೀಂ ಕೋರ್ಟ್ (Supreme court) ಮೊರೆ ಹೋಗಿದ್ದು, ಈಗ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಡಿಸೆಂಬರ್ ಮೊದಲ ವಾರಕ್ಕೆ ಮುಂದೂಡಿದೆ.
ಹಿನ್ನೆಲೆ
ರಾಜ್ಯ ಸರ್ಕಾರ ಬೆಂಗಳೂರಿನ ವಾರ್ಡ್ಗಳನ್ನು ಪುನರ್ ವಿಂಗಡಣೆ ಮಾಡಿದ್ದು, 198 ವಾರ್ಡ್ಗಳನ್ನು 243ಕ್ಕೆ ಹೆಚ್ಚಿಸಿತ್ತು. ಈ ವಾರ್ಡ್ಗಳ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಬೇಕೆಂದು ಜುಲೈ 28 ರಂದು ಸುಪ್ರಿಂಕೋರ್ಟ್ ಆದೇಶ ಹೊರಡಿಸಿತ್ತು. ಹಾಗೇ ಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದ ಕೂಡಲೆ ಚುನಾವಣಾ ಆಯೋಗ ಬಿಬಿಎಂಪಿ ಚುನಾವಣೆ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಆದೇಶ ನೀಡಿತ್ತು.
ಹೀಗಾಗಿ ರಾಜ್ಯ ಸರ್ಕಾರ (ಆ.4) ರಂದು ವಾರ್ಡ್‌ಗಳಿಗೆ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಬಿಎಂಪಿ ವಾರ್ಡ್‌ವಾರು ಮೀಸಲು ನಿಗದಿಯಲ್ಲಿ ತಾರತಮ್ಯವಾಗಿದೆ ಎಂದು ಆಕ್ಷೇಪಿಸಿ ಈಜಿಪುರದ ಕೆ.ಮಹದೇವ, ಕಮ್ಮನಹಳ್ಳಿಯ ಪಳನಿ ದಯಾಳನ್, ದೊಡ್ಡಬಾಣಸವಾಡಿಯ ವಿ.ಶ್ರೀನಿವಾಸ್, ನಾಗನಾಥಪುರದ ಕೆ.ಚಂದ್ರಶೇಖರ್ ಸೇರಿ 8 ಮಂದಿ ರಿಟ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಗಳ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ಹೈಕೋರ್ಟ್ನ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿ ವಿಲೇವಾರಿ ಮಾಡಿತು. ಜೊತೆಗೆ ನ. 30ರೊಳಗೆ ಮೀಸಲಾತಿ ಪ್ರಕಟಿಸಬೇಕು ಮತ್ತು ಡಿ. 31ರೊಳಗೆ ಪಾಲಿಕೆಗೆ ಚುನಾವಣೆ ನಡೆಸಬೇಕು ಎಂದು ನ್ಯಾಯಪೀಠ (ಅ. 2) ರಂದು ಆದೇಶ ಹೊರಡಿಸಿತ್ತು.
ಆದೇಶ ಹೊರಬೇಳುತ್ತಿದ್ದಂತೆ ರಾಜ್ಯ ಸರ್ಕಾರಕ್ಕ ಕಳವಳ ಸೃಷ್ಟಿಯಾಗಿತ್ತು. ಹೇಗಾದರು ಮಾಡಿ ಚುನಾವಣೆಯನ್ನು ಮುಂದೂಡುವದೂಡಿಕೆಗೆ ಇರುವ ದಾರಿಗಳ ಹುಡುಕಾಟ ನಡೆಸಿತ್ತು. ಇದರ ಬೆನ್ನಲ್ಲೇ ಮೀಸಲಾತಿ ಮರು ನಿಗದಿಗೆ 16 ವಾರಗಳ ಕಾಲಾವಕಾಶ ನೀಡಬೇಕೆಂದು ಕೋರಿದ್ದ ಸರಕಾರದ ಇಂಗಿತವು ಬಹಿರಂಗಗೊಂಡಿತ್ತು.
ಇದಾದ ನಂತರ ರಾಜ್ಯ ಸರ್ಕಾರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿಯನ್ನು ಸಲ್ಲಿಸಿತ್ತು. ಈ ಅರ್ಜಿಯು ಸದ್ಯ ಸುಪ್ರಿಂ ಅಂಗಳದಲ್ಲಿದ್ದು, ನ್ಯಾಯಾಲಯ ಡಿಸೆಂಬರ್ ಮೊದಲ ವಾರಕ್ಕೆ ಮುಂದೂಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:11 pm, Fri, 4 November 22