BBMP Elections 2022: 1 ವಾರದೊಳಗೆ ಮೀಸಲಾತಿ ಪಟ್ಟಿ ಪ್ರಕಟಿಸಿ, ಬಿಬಿಎಂಪಿ ಚುನಾವಣೆ ನಡೆಸಿ; ಸುಪ್ರೀಂ ಕೋರ್ಟ್​ ಮಹತ್ವದ ಆದೇಶ

Bengaluru News: ಇನ್ನು 1 ವಾರದೊಳಗೆ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಬೇಕು. ಅದಾದ ಕೂಡಲೆ ಚುನಾವಣಾ ಆಯೋಗ ಬಿಬಿಎಂಪಿ ಚುನಾವಣೆ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಸುಪ್ರೀಂ ಕೋರ್ಟ್​ ಆದೇಶ ನೀಡಿದೆ

BBMP Elections 2022: 1 ವಾರದೊಳಗೆ ಮೀಸಲಾತಿ ಪಟ್ಟಿ ಪ್ರಕಟಿಸಿ, ಬಿಬಿಎಂಪಿ ಚುನಾವಣೆ ನಡೆಸಿ; ಸುಪ್ರೀಂ ಕೋರ್ಟ್​ ಮಹತ್ವದ ಆದೇಶ
ಬಿಬಿಎಂಪಿ ಕಚೇರಿ ಮತ್ತು ಸುಪ್ರೀಂಕೋರ್ಟ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 28, 2022 | 2:22 PM

ಬೆಂಗಳೂರು: ಬೆಂಗಳೂರಿನ ಬಿಬಿಎಂಪಿ ಚುನಾವಣೆ (BBMP Election) ನಡೆಸುವ ಸಂಬಂಧ ಇಂದು ಸುಪ್ರೀಂ ಕೋರ್ಟ್​ನಲ್ಲಿ (Supreme Court) ಮಹತ್ವದ ವಿಚಾರಣೆ ನಡೆದಿದ್ದು, ಇನ್ನು 1 ವಾರದೊಳಗೆ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಬೇಕು. ಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದ ಕೂಡಲೆ ಚುನಾವಣಾ ಆಯೋಗ ಬಿಬಿಎಂಪಿ ಚುನಾವಣೆ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಆದೇಶ ನೀಡಿದೆ.

ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಎ.ಎಂ ಕಾನ್ವಿಲ್ಕರ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಸಲಾಗಿದ್ದು, ದೆಹಲಿ, ಮಹಾರಾಷ್ಟ್ರ ಕೇಸ್ ಗಳ ಜೊತೆ ಕರ್ನಾಟಕದ ಪ್ರಕರಣದ ವಿಚಾರಣೆ ನಡೆಸಲಾಗಿದೆ. ಸದ್ಯ ವಾರ್ಡ್‌ಗಳ ಪುನರ್ ವಿಂಗಡನೆಯಾದರೂ ಮೀಸಲಾತಿ ಹೊರಡಿಸಿಲ್ಲ. ಮುಂದಿನ ಒಂದು ವಾರದೊಳಗೆ ಮೀಸಲಾತಿ ಪಟ್ಟಿ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮೀಸಲಾತಿ ಬೆನ್ನಲ್ಲೇ ಚುನಾವಣೆಯನ್ನು ಘೋಷಣೆ ಮಾಡಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಲಾಗಿದೆ.

ಮೀಸಲಾತಿ ಪಟ್ಟಿ ಪ್ರಕಟಿಸಲು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್​ ಇಂದಿನಿಂದ ಒಂದು ವಾರ ಸಮಯ ನೀಡಿದೆ. ಭಕ್ತ ವತ್ಸಲ ವರದಿ ಸಲ್ಲಿಕೆ ವಿಳಂಬವಾಯಿತು. ಈ ಹಿನ್ನಲೆಯಲ್ಲಿ ಮೀಸಲಾತಿ ಪ್ರಕಟಿಸಲು ಸಾಧ್ಯವಾಗಲಿಲ್ಲ ಎಂದು ಸುಪ್ರೀಂ ಕೋರ್ಟ್ ಮುಂದೆ ರಾಜ್ಯ ಸರ್ಕಾರದ ಪರ ವಕೀಲರು ವಾದ ಮಂಡಿಸಿದ್ದಾರೆ.

ಇದನ್ನೂ ಓದಿ: PMLA Verdict: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ವಿರುದ್ಧದ ಅರ್ಜಿ ಕುರಿತು ಸುಪ್ರೀಂ ಕೋರ್ಟ್​ನಿಂದ​ ಇಂದು ಮಹತ್ವದ ತೀರ್ಪು

ವಾದ ಆಲಿಸಿದ ಬಳಿಕ ಒಂದು ವಾರ ಸಮಯಾವಕಾಶ ನೀಡಿ ಆದೇಶ ಹೊರಡಿಸಲಾಗಿದೆ. ಒಂದು ವಾರದ ಬಳಿಕ ಚುನಾವಣೆ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಲಾಗಿದೆ. ಸರ್ಕಾರ ಮೀಸಲಾತಿ ಪ್ರಕಟಿಸಿದ ಬಳಿಕ ಚುನಾವಣಾ ಆಯೋಗ ಚುನಾವಣಾ ನಡೆಸಲು ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಸೂಚನೆ ನೀಡಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ನೀಡಿದ್ದ 8 ವಾರಗಳ ಗಡುವು ಅಂತ್ಯಗೊಂಡ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್​ ವಿಚಾರಣೆ ಕೈಗೆತ್ತಿಕೊಂಡಿತ್ತು. ವಾರ್ಡ್​ಗಳ ಮರುವಿಂಗಡಣೆಯಾಗಿದೆಯಾದರೂ ಈವರೆಗೆ ರಾಜ್ಯ ಸರ್ಕಾರವು ಮೀಸಲಾತಿ ಪ್ರಕಟಿಸಿಲ್ಲ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆಯನ್ನು ಎರಡು ತಿಂಗಳೊಳಗೆ (8 ವಾರ) ಆರಂಭಿಸಬೇಕು ಎಂದು ಕರ್ನಾಟಕ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಮೇ 20ರಂದು ಸೂಚನೆ ನೀಡಿತ್ತು. ಈ ಸಂಬಂಧ ವಾರ್ಡ್​ ಪುನರ್​ವಿಂಗಡನೆ ಮತ್ತು ಮೀಸಲಾತಿಯನ್ನೂ ಕಾಲಮಿತಿಯೊಳಗೆ ನಿಗದಿಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನೂ ಕೋರ್ಟ್ ನೀಡಿತ್ತು.

ಶೇ. 33ರ ಮೀಸಲಾತಿಗೆ ಭಕ್ತವತ್ಸಲ ಸಮಿತಿ ಶಿಫಾರಸು: ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ವಿವಿಧ ಸಮುದಾಯಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಗುರುತಿಸಲು ಕರ್ನಾಟಕ ಸರ್ಕಾರವು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕೆ. ಭಕ್ತವತ್ಸಲ ಅಧ್ಯಕ್ಷತೆಯ ಆಯೋಗವನ್ನು ರಚಿಸಿತ್ತು. ಈ ಆಯೋಗವು ಹಿಂದುಳಿದ ವರ್ಗಗಳ ‘ಎ’ ಮತ್ತು ‘ಬಿ’ ಪ್ರವರ್ಗದ ಸಮುದಾಯಗಳಿಗೆ ಈಗಿರುವ ರಾಜಕೀಯ ಮೀಸಲಾತಿಯನ್ನು ಶೇ 33ಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಯೋಗದ ಸದಸ್ಯರು ಅಂತಿಮ ವರದಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: Supreme Court: ಇಂದು ಸುಪ್ರೀಂಕೋರ್ಟ್​ನಲ್ಲಿ ಬಿಬಿಎಂಪಿ ಚುನಾವಣೆ, ಮೇಕೆದಾಟು ಡಿಪಿಆರ್​ ವಿಚಾರಣೆ

ಬಿಬಿಎಂಪಿ ಸದಸ್ಯರ ಅಧಿಕಾರ ಅವಧಿಯು ಸೆಪ್ಟೆಂಬರ್ 10, 2019ಕ್ಕೆ ಪೂರ್ಣಗೊಂಡಿತ್ತು. ಶೀಘ್ರದಲ್ಲಿ ಚುನಾವಣೆ ನಡೆಸಬೇಕೆಂಬ ಒತ್ತಾಯಗಳು ಕೇಳಿ ಬಂದಿತ್ತು. ಈ ಸಂಬಂಧ ಡಿಸೆಂಬರ್ 4, 2020ರಂದು ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿ, ‘ಆರು ವಾರಗಳಲ್ಲಿ ಚುನಾವಣೆ ನಡೆಸಬೇಕು’ ಎಂದು ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಆದರೆ, ಡಿಸೆಂಬರ್ 18, 2020ರಂದು ಈ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತು. ಇದೀಗ ಸುಪ್ರೀಂ ಕೋರ್ಟ್​ ಆದೇಶ ಪ್ರಕಾರ ಆಗಸ್ಟ್​ ಮೊದಲ ವಾರದಲ್ಲೇ ಮೀಸಲಾತಿ ಪಟ್ಟಿ ಪ್ರಕಟವಾಗಲಿದ್ದು, ಅದಾದ ಕೂಡಲೆ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

Published On - 2:04 pm, Thu, 28 July 22

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು