AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಚುನಾವಣೆ: ಸರ್ಕಾರದ ವೈಫಲ್ಯಗಳ ಚಾರ್ಜ್​​ಶೀಟ್ ಸಿದ್ಧಪಡಿಸಲು ಕೆಪಿಸಿಸಿ ನಿರ್ಧಾರ

ಬಿಬಿಎಂಪಿ  ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದ ವೈಫಲ್ಯಗಳ ಚಾರ್ಜ್​​ಶೀಟ್ ಸಿದ್ಧಪಡಿಸಲು ರಾಜ್ಯ ಕಾಂಗ್ರೆಸ್ ನಿರ್ಧರಿಸಿದೆ.

ಬಿಬಿಎಂಪಿ ಚುನಾವಣೆ: ಸರ್ಕಾರದ ವೈಫಲ್ಯಗಳ ಚಾರ್ಜ್​​ಶೀಟ್ ಸಿದ್ಧಪಡಿಸಲು ಕೆಪಿಸಿಸಿ ನಿರ್ಧಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 28, 2022 | 6:21 PM

ಬೆಂಗಳೂರು: ಬಿಬಿಎಂಪಿ  ಚುನಾವಣೆ (BBMP Election) ಹಿನ್ನೆಲೆಯಲ್ಲಿ ಸರ್ಕಾರದ ವೈಫಲ್ಯಗಳ ಚಾರ್ಜ್​​ಶೀಟ್ ಸಿದ್ಧಪಡಿಸಲು ರಾಜ್ಯ ಕಾಂಗ್ರೆಸ್ (Congress) ನಿರ್ಧರಿಸಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಕೆಪಿಸಿಸಿ (KPCC) ಕಚೇರಿಯಲ್ಲಿ ಪ್ರಣಾಳಿಕೆ ಸಮಿತಿ ಸಭೆ ನಡೆಸಿದ್ದು, ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) , ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಭಾಗಿಯಾಗಿದ್ದರು.

ಸಭೆಯಲ್ಲಿ ಬೆಂಗಳೂರಿಗೆ ಸಂಬಂಧಿಸಿದಂತೆ ರಸ್ತೆಗುಂಡಿ, ಆರೋಗ್ಯ ಸಮಸ್ಯೆ, ಬಿಜೆಪಿ ಸರ್ಕಾರದ ವೈಫಲ್ಯಗಳ ಬಗ್ಗೆ ಚಾರ್ಜ್​​ಶೀಟ್ ಸಿದ್ಧಪಡಿಸಿ ಮನೆ ಮನೆಗೆ ತಲುಪಿಸಲು ನಿರ್ಧರಿಸಿದ್ದಾರೆ. ಚಾರ್ಜ್​​ಶೀಟ್ ಬಳಿಕ ಮಹಾಪಾಲಿಕೆಯಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ, ಬೆಂಗಳೂರಿಗೆ ನೀಡಬಹುದಾದ ಕೊಡುಗೆಗಳ ಬಗ್ಗೆ ಪ್ರತ್ಯೇಕ ಪ್ರಣಾಳಿಕೆ ತಯಾರಿಸಲು ನಿರ್ಧರಿಸಿದ್ದಾರೆ.

ಸಭೆ ಬಳಿಕ ರಣದೀಪ್ ಸಿಂಗ್ ಸುರ್ಜೇವಾಲ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಅವರ ಮನೆ ಭೇಟಿ ನೀಡಿದರು. ಭೇಟಿ ಬಳಿಕ ಮಾತನಾಡಿದ ಅವರು ಕೆ.ಹೆಚ್.ಮುನಿಯಪ್ಪನವರು ನನ್ನ ಹಿರಿಯ ಸಹೋದರ ಇದ್ದಂತೆ. ಕೆ.ಹೆಚ್.ಮುನಿಯಪ್ಪನವರ ಮನೆ ನೋಡಬೇಕೆಂದು ಆಸೆಪಟ್ಟಿದ್ದೆ. ಹಾಗಾಗಿ ಮುನಿಯಪ್ಪ ಮನೆಗೆ ಭೇಟಿ ನೀಡಿ ಚರ್ಚೆ ನಡೆಸಿದ್ದೇನೆ ಎಂದರು.

ಕೆ.ಹೆಚ್.ಮುನಿಯಪ್ಪ ಟ್ರಬಲ್​ಗೆ ಟ್ರಬಲ್ ಕೊಡುವಂತಹ ನಾಯಕ. ಎಐಸಿಸಿ ಸೂಚನೆ ಮೇರೆಗೆ ಕೆ.ಹೆಚ್.ಮುನಿಯಪ್ಪ ಭೇಟಿಗೆ ಬಂದಿಲ್ಲ. ಮುನಿಯಪ್ಪನವರ ಕುಟುಂಬ ಸದಸ್ಯನಾಗಿ ಬಂದಿದ್ದೇನೆ ಅಷ್ಟೇ. ನನ್ನ ತಂದೆ ಕಾಲದಿಂದಲೂ ನನಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಭಾರತ್ ಜೋಡೋ ಯಾತ್ರೆ ಸಂಬಂಧ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದರು.

ಬಳಿಕ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿ ರಣದೀಪ್ ಸುರ್ಜೇವಾಲ ನಮ್ಮ ಕುಟುಂಬದ ಸದಸ್ಯರಾಗಿ ಬಂದಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸುರ್ಜೇವಾಲ ಇಲ್ಲಿಗೆ ಬಂದಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಸುರ್ಜೇವಾಲ ತಂದೆಯ ಕಾಲದಿಂದ ನನ್ನ, ಅವರ ನಡುವೆ ವಿಶ್ವಾವಿದೆ ಎಂದು ಹೇಳಿದ್ದಾರೆ.

ನನ್ನ ಎಲ್ಲಾ ವಿಚಾರಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್​ಗೆ ತಿಳಿಸಿದ್ದೇನೆ. ನಾನು ಇನ್ನೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ, ಮುಂದೆಯೂ ಇರುತ್ತೇನೆ. ಎಲ್ಲವೂ ಸಮಾಧಾನವಾಗಿ ನಡೆಯುತ್ತಿದೆ, ಬೇರೆ ಚರ್ಚೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:21 pm, Sun, 28 August 22

ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ