BBMP Elections: ಬಿಬಿಎಂಪಿ ಚುನಾವಣೆ; ಇಂದು ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ

ವಿಚಾರಣೆ ವೇಳೆ ಚುನಾವಣೆ ನಡೆಸಲು ಮತ್ತಷ್ಟು ಕಾಲಾವಕಾಶ ಕೇಳಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.

BBMP Elections: ಬಿಬಿಎಂಪಿ ಚುನಾವಣೆ; ಇಂದು ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ
ಬಿಬಿಎಂಪಿ ಕಚೇರಿ ಮತ್ತು ಸುಪ್ರೀಂಕೋರ್ಟ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 22, 2022 | 12:17 PM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (Bruhat Bengaluru Mahanagara Palike – BBMP) ಚುನಾವಣೆಗೆ ನೀಡಿದ್ದ ಎಂಟು ವಾರಗಳ ಗಡುವು ಅಂತ್ಯಗೊಂಡ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್​ ಇಂದು (ಜುಲೈ 22) ವಿಚಾರಣೆ ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಬಿಬಿಎಂಪಿ ಪ್ರಕರಣದ ವಿಚಾರಣೆ ನಡೆಯಲಿದೆ. ವಿಚಾರಣೆ ವೇಳೆ ಚುನಾವಣೆ ನಡೆಸಲು ಮತ್ತಷ್ಟು ಕಾಲಾವಕಾಶ ಕೇಳಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ವಾರ್ಡ್​ಗಳ ಮರುವಿಂಗಡಣೆಯಾಗಿದೆಯಾದರೂ ಈವರೆಗೆ ರಾಜ್ಯ ಸರ್ಕಾರವು ಮೀಸಲಾತಿ ಪ್ರಕಟಿಸಿಲ್ಲ. ಮೀಸಲಾತಿ ಪ್ರಕಟಿಸಲು ಕನಿಷ್ಠ 4 ವಾರ ಸಮಯ ಕೇಳುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ಇದಕ್ಕೆ ವಿರೋಧ ವ್ಯಕ್ತಪಡಿಸಲು ಅರ್ಜಿದಾರರಾದ ಶಿವರಾಜ್ ಮತ್ತು ವಾಜಿದ್ ಸಿದ್ಧತೆ ಮಾಡಿಕೊಂಡಿದ್ದಾರೆ.

ಚುನಾವಣೆಗೆ ಕಾಲಮಿತಿ ನಿಗದಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆಯನ್ನು ಎರಡು ತಿಂಗಳೊಳಗೆ (8 ವಾರ) ಆರಂಭಿಸಬೇಕು ಎಂದು ಕರ್ನಾಟಕ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಮೇ 20ರಂದು ಸೂಚನೆ ನೀಡಿತ್ತು. ಈ ಸಂಬಂಧ ವಾರ್ಡ್​ ಪುನರ್​ವಿಂಗಡನೆ ಮತ್ತು ಮೀಸಲಾತಿಯನ್ನೂ ಕಾಲಮಿತಿಯೊಳಗೆ ನಿಗದಿಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನೂ ಕೋರ್ಟ್ ನೀಡಿತ್ತು.

ಶೇ 33ರ ಮೀಸಲಾತಿಗೆ ಭಕ್ತವತ್ಸಲ ಸಮಿತಿ ಶಿಫಾರಸು

ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ವಿವಿಧ ಸಮುದಾಯಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಗುರುತಿಸಲು ಕರ್ನಾಟಕ ಸರ್ಕಾರವು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕೆ. ಭಕ್ತವತ್ಸಲ ಅಧ್ಯಕ್ಷತೆಯ ಆಯೋಗವನ್ನು ರಚಿಸಿತ್ತು. ಈ ಆಯೋಗವು ಹಿಂದುಳಿದ ವರ್ಗಗಳ ‘ಎ’ ಮತ್ತು ‘ಬಿ’ ಪ್ರವರ್ಗದ ಸಮುದಾಯಗಳಿಗೆ ಈಗಿರುವ ರಾಜಕೀಯ ಮೀಸಲಾತಿಯನ್ನು ಶೇ 33ಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಯೋಗದ ಸದಸ್ಯರು ಅಂತಿಮ ವರದಿ ಸಲ್ಲಿಸಿದ್ದಾರೆ.

ಹೈಕೋರ್ಟ್​ ತೀರ್ಪು ಪ್ರಶ್ನಿಸಿ ಮೇಲ್ಮನವಿ

ಬಿಬಿಎಂಪಿ ಸದಸ್ಯರ ಅಧಿಕಾರ ಅವಧಿಯು ಸೆಪ್ಟೆಂಬರ್ 10, 2019ಕ್ಕೆ ಪೂರ್ಣಗೊಂಡಿತ್ತು. ಶೀಘ್ರದಲ್ಲಿ ಚುನಾವಣೆ ನಡೆಸಬೇಕೆಂಬ ಒತ್ತಾಯಗಳು ಕೇಳಿ ಬಂದಿತ್ತು. ಈ ಸಂಬಂಧ ಡಿಸೆಂಬರ್ 4, 2020ರಂದು ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿ, ‘ಆರು ವಾರಗಳಲ್ಲಿ ಚುನಾವಣೆ ನಡೆಸಬೇಕು’ ಎಂದು ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಆದರೆ ಡಿಸೆಂಬರ್ 18, 2020ರಂದು ಈ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತು. ಅಂದಿನಿಂದಲೂ ಒಂದಲ್ಲ ಒಂದು ಕಾರಣಕ್ಕೆ ಬಿಬಿಎಂಪಿ ಚುನಾವಣೆಯ ಗಡುವು ಮುಂದಕ್ಕೆ ಹೋಗುತ್ತಲೇ ಇದೆ.

ಶಾಸಕರ ಒತ್ತಡಕ್ಕೆ ಮಣಿಯಿತೇ ಸರ್ಕಾರ?

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯು ಮುಂದಿನ ವರ್ಷ ನಡೆಯಲಿದೆ. 28 ಸದಸ್ಯ ಬಲವಿರುವ ಬೆಂಗಳೂರು ನಗರವು ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಮಹತ್ವದ ಪಾತ್ರ ನಿರ್ವಹಿಸಲಿದೆ. ಪಾಲಿಕೆಯಲ್ಲಿ ಸದಸ್ಯರು ಇಲ್ಲದಿದ್ದರೆ ಆಕಾಂಕ್ಷಿಗಳನ್ನು ವಿಧಾನಸಭೆ ಚುನಾವಣೆ ವೇಳೆ ಅನುಕೂಲಕ್ಕೆ ತಕ್ಕಂತೆ ದುಡಿಸಬಹುದು ಎನ್ನುವ ಕಾರಣಕ್ಕೆ ಬಿಬಿಎಂಪಿ ಚುನಾವಣೆ ಮುಂದೂಡಬೇಕು ಎಂದು ಎಲ್ಲ ಪಕ್ಷಗಳ ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಮಾತುಗಳು ಪ್ರಬಲವಾಗಿ ಕೇಳಿಬರುತ್ತಿವೆ.

Published On - 12:17 pm, Fri, 22 July 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು