BBMP: ಮಾರ್ಚ್​​ 1ರಿಂದ ಬಿಬಿಎಂಪಿ ನೌಕರರ ಪ್ರತಿಭಟನೆ: 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹ

ಬಿಬಿಎಂಪಿ ನೌಕರರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಾರ್ಚ್ 1 ರಿಂದ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆ ಮಾಡಲಿದ್ದಾರೆ.

BBMP: ಮಾರ್ಚ್​​ 1ರಿಂದ ಬಿಬಿಎಂಪಿ ನೌಕರರ ಪ್ರತಿಭಟನೆ: 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹ
ಬಿಬಿಎಂಪಿ
Follow us
ವಿವೇಕ ಬಿರಾದಾರ
|

Updated on:Feb 25, 2023 | 10:16 AM

ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸುಗಳು (7th Pay Commission) ಜಾರಿಯಾಗಬೇಕೆಂದು ರಾಜ್ಯ ಸರ್ಕಾರಿ ನೌಕರರು ಮಾರ್ಚ 1 ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಪ್ರತಿಭಟನೆ ಮಾಡಲು ಮುಂದಾಗಿದ್ದು, ಇದಕ್ಕೆ ಬೃಹತ್​ ಬೆಂಗಳೂರು ಮಹಾನಗರ ಪಾಲೀಕೆ (BBMP) ನೌಕರಸ್ಥರು ಕೂಡ ಕೈ ಜೋಡಿಸಿದ್ದಾರೆ. ಬಿಬಿಎಂಪಿ ನೌಕರರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಾರ್ಚ್ 1 ರಿಂದ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆ ಮಾಡಲಿದ್ದಾರೆ.

ಬಿಬಿಎಂಪಿ ನೌಕರರ ಬೇಡಿಕೆಗಳು

1. ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿಯನ್ನು ಆದಷ್ಟು ಬೇಗನೆ ಪಡೆಯಬೇಕು.

2. ಚುನಾವಣೆ ನೀತಿ ಸಂಹಿತೆಗಿಂತ ಮೊದಲು ಶೇ.40ರಷ್ಟು ಫಿಟ್‌ಮೆಂಟ್ ಸೌಲಭ್ಯವನ್ನು ಓದಗಿಸಬೇಕು.

3. ಅದು ದಿನಾಂಕ 01- 07-2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು.

4. ಎನ್.ಪಿ.ಎಸ್ ನೌಕರರನ್ನು ಓ.ಪಿ.ಎಸ್ ವ್ಯಾಪ್ತಿಗೆ ತರಬೇಕು.

5. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣೆ ಯೋಜನೆಯನ್ನು ಜಾರಿಗೆ ಬಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು.

 ಮಧ್ಯಂತರ ವರದಿ ಕೇಳಿದ ಸಿಎಂ ಬೊಮ್ಮಾಯಿ

ಗುರುವಾರ ನಡೆದ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  7 ನೇ ವೇತನ ಆಯೋಗದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ವೇತನ ಆಯೋಗದ ಮಧ್ಯಂತರ ವರದಿಯನ್ನು ಕೇಳಿದ್ದೇನೆ. ಈ ವರದಿ ಸಲ್ಲಿಕೆಯಾದ ಬಳಿಕ ಅದರ ಆಧಾರದ ಮೇಲೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಿದ್ದೇವೆ  ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:35 am, Sat, 25 February 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ