AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆ ಈದ್ಗಾ ಸುತ್ತಲೂ ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ, ಸ್ವಾತಂತ್ರ್ಯ ದಿನಾಚರಣೆ ಅನುಮತಿಗಾಗಿ ಹಿಂದುತ್ವವಾದಿ ಸಂಘಟನೆಗಳಿಂದ ಬಿಬಿಎಂಪಿಗೆ ಡೆಡ್​ಲೈನ್

ಈದ್ಗಾ ಮೈದಾನದ ಸುತ್ತಲೂ ಬಿಬಿಎಂಪಿ 12 ಕಂಬಗಳನ್ನು ನೆಟ್ಟಿದ್ದು, ಸಿಸಿ ಕ್ಯಾಮೆರಾ, ದೀಪಗಳನ್ನು ಅಳವಡಿಸಲು ಸಿದ್ಧತೆ ಅಂತಿಮಗೊಳಿಸಿದೆ.

ಚಾಮರಾಜಪೇಟೆ ಈದ್ಗಾ ಸುತ್ತಲೂ ಸಿಸಿ ಕ್ಯಾಮೆರಾ ಅಳವಡಿಕೆಗೆ ಕ್ರಮ, ಸ್ವಾತಂತ್ರ್ಯ ದಿನಾಚರಣೆ ಅನುಮತಿಗಾಗಿ ಹಿಂದುತ್ವವಾದಿ ಸಂಘಟನೆಗಳಿಂದ ಬಿಬಿಎಂಪಿಗೆ ಡೆಡ್​ಲೈನ್
ಚಾಮರಾಜಪೇಟೆ ಈದ್ಗಾ ಮೈದಾನ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 13, 2022 | 1:24 PM

Share

ಬೆಂಗಳೂರು: ಚಾಮರಾಜಪೇಟೆಯ ವಿವಾದಿತ ಈದ್ಗಾ (Chamarajpete Idga) ಮೈದಾನದ ಸುತ್ತಲೂ ಬಿಬಿಎಂಪಿ (BBMP)395199 12 ಕಂಬಗಳನ್ನು ನೆಟ್ಟಿದ್ದು, ಸಿಸಿ ಕ್ಯಾಮೆರಾ ಅಳವಡಿಸಲು ಸಿದ್ಧತೆ ಅಂತಿಮಗೊಳಿಸಿದೆ. ವಿದ್ಯುತ್ ಪೂರೈಕೆಗೆ ವ್ಯವಸ್ಥೆ ಕಲ್ಪಿಸಿದೆ. ಪೊಲೀಸ್ ಇಲಾಖೆ ಮನವಿ ಮೇರೆಗೆ ಬಿಬಿಎಂಪಿ ಈ ವ್ಯವಸ್ಥೆ ರೂಪಿಸಿದೆ. ಮೊನ್ನೆ ನೆಟ್ಟಿದ್ದ 3 ಕಂಬಗಳ ಪೈಕಿ 2 ಕಂಬಗಳನ್ನು ಪುಂಡರು ಉರುಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಂಜೆಯೊಳಗೆ ಮೈದಾನಕ್ಕೆ ಲೈಟಿಂಗ್ ವ್ಯವಸ್ಥೆ, ಇನ್ನೆರಡು ದಿನಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಬಿಬಿಎಂಪಿ ಸಿದ್ಧತೆ ಮಾಡಿದೆ.

ಚಾಮರಾಜಪೇಟೆಯ ಈದ್ಗಾ ಮೈದಾನಲ್ಲಿ ಯೋಗ (International Yoga Day) ಆಚರಣೆ ಮಾಡಲು ಒಪ್ಪಿಗೆ ನೀಡುವಂತೆ ಹಿಂದುತ್ವ ಪರ ಸಂಘಟನೆಗಳು ಬಿಬಿಎಂಪಿಗೆ ಮನವಿ ಮಾಡಿವೆ. ಸ್ವಾತಂತ್ರ್ಯ ದಿನಾಚರಣೆ, ಗಣೇಶ ಚತುರ್ಥಿ, ಕನ್ನಡ ರಾಜ್ಯೋತ್ಸವ ಸೇರಿದಂತೆ ಹಲವು ಆಚರಣೆಗಳಿಗೆ ಅನುಮತಿ ಕೋರಿ ಮನವಿ ಪತ್ರ ಸಲ್ಲಿಸಿವೆ. ಸದ್ಯ ಮೈದಾನ ನೀಡುವ ವಿಚಾರದಲ್ಲಿ ಬಿಬಿಎಂಪಿ ತಟಸ್ಥವಾಗಿದೆ. ನಮಗೆ ಅವಕಾಶ ಕೊಡದಿದ್ದರೆ ಯಾರಿಗೂ ಕೊಡಬೇಡಿ. ನಮಾಜ್​ಗೆ ಅನುಮತಿ ಕೊಟ್ಟರೆ ನಮಗೂ ಕೊಡಿ. ಇಲ್ಲವಾದರೆ ಯಾವ ಧರ್ಮದವರಿಗೆ ಅನುಮತಿ ಕೊಡಬೇಡಿ ಎಂದು ಹಿಂದುತ್ವವಾದಿ ಸಂಘಟನೆಗಳು ಆಗ್ರಹಿಸಿವೆ.

ಈ ನಡುವೆ ಮೈದಾನದಲ್ಲಿ ನೆಟ್ಟಿದ್ದ ಮೂರು ಕಂಬಗಳು ಏಕಾಏಕಿ ನೆಲಸಮವಾಗಿದೆ. ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದ ಸ್ಥಳೀಯರೇ ಈ ಕೃತ್ಯ ಎಸಗಿದ್ದರಾ? ಅಥವಾ ಬೇರೆಯವರು ಬಂದು ಕಂಬ ಕಿತ್ತಿದ್ದಾರಾ ಎಂದು ತಿಳಿಯಲು ಪೊಲೀಸರು ಸಿಸಿ ಟಿವಿ ಫೂಟೇಜ್ ಪರಿಶೀಲನೆಗೆ ಮುಂದಾಗಿದ್ದಾರೆ. ನಿನ್ನೆ ಸಿಸಿ ಕ್ಯಾಮೆರಾ ಅಳವಡಿಕೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮೈದಾನಕ್ಕೆ ಪೊಲೀಸ್ ಬಂದೋಬಸ್ತ್​ ಹೆಚ್ಚಿಸಲಾಗಿದೆ. ಮೈದಾನದ ಬಳಿ ಪ್ರತಿಭಟನೆ, ಘೋಷಣೆಗೆ ಅವಕಾಶವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ
Image
ಚಾಮರಾಜಪೇಟೆ ಈದ್ಗಾ ಮೈದಾನ ಯೋಗ ಆಚರಣೆಗೆ ಮನವಿ; ಮೈದಾನದಲ್ಲಿ ನಿನ್ನೆ ನೆಟ್ಟಿದ್ದ ಕಂಬ ಏಕಾಏಕಿ ನೆಲಸಮ!
Image
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧಾರ; ಟಿವಿ9ಗೆ ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಆದಿ ಮಾಹಿತಿ
Image
ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದ; ಮತ್ತೊಂದು ಮಾಹಿತಿ ಬಹಿರಂಗ
Image
Chamrajpet Idgah Maidan: ಬಿಬಿಎಂಪಿ ಮಾಲೀಕತ್ವಕ್ಕೆ ಪುರಾವೆ ಇಲ್ಲ; ನ್ಯಾಯಾಲಯಗಳಲ್ಲಿ ನಡೆದ ಸುದೀರ್ಘ ವಾದ-ವಿವಾದದ ಸಂಪೂರ್ಣ ಮಾಹಿತಿ ಇಲ್ಲಿದೆ

ಬಿಬಿಎಂಪಿಗೆ ಡೆಡ್​ಲೈನ್

ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಅವಕಾಶ ನೀಡುವ ಬಗ್ಗೆ ನಾಳೆ (ಜೂನ್ 14) ಮಧ್ಯಾಹ್ನ 3 ಗಂಟೆಯ ಒಳಗೆ ನಿಲುವು ತಿಳಿಸಬೇಕೆಂದು ಕೋರಿ ಹಿಂದುತ್ವ ಪರ ಸಂಘಟನೆಗಳು ಬಿಬಿಎಂಪಿಗೆ ಡೆಡ್​ಲೈನ್​ ಕೊಟ್ಟಿವೆ. ಸ್ವಾತಂತ್ರ್ಯ ದಿನಾಚರಣೆಗೆ ಅವಕಾಶ ಕೊಡದಿದ್ದರೆ ನ್ಯಾಯಾಲಯದ​ ಮೊರೆ ಹೋಗುವುದಾಗಿ ವಿಶ್ವ ಸನಾತನ ಪರಿಷತ್​​ ಅಧ್ಯಕ್ಷ ಭಾಸ್ಕರ್ ಎಚ್ಚರಿಸಿದ್ದಾರೆ.

ಆಗಸ್ಟ್​ 14 ಮತ್ತು 15ರಂದು ಸ್ವಾತಂತ್ರ್ಯ ದಿನಾಚರಣೆಗೆ ಅವಕಾಶ ಕೋಡಬೇಕು ಎಂದು ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತರಿಗೆ ಮನವಿ ಮಾಡಲಾಗಿದೆ. ಈ ಸಂಬಂಧ ಜೂನ್ 7ರಂದು ಮನವಿ ಸಲ್ಲಿಸಿದ್ದರೂ ಪ್ರತಿಕ್ರಿಯೆ ನೀಡಿಲ್ಲ. ಅನುಮತಿ ಕೊಡುವುದು ಅಥವಾ ಇಲ್ಲ ಎನ್ನುವ ಬಗ್ಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಬೇಕು ಎಂದು ಅವರು ಕೋರಿದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:24 pm, Mon, 13 June 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?