AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಗುತ್ತಿಗೆದಾರರ ಹೋರಾಟಕ್ಕೆ ಮಣಿದ BBMP, ಬಾಕಿ ಹಣ​ ಬಿಡುಗಡೆ

ಕಮಿಷನ್​ ಆರೋಪ ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಬಿಬಿಎಂಪಿ ಗುತ್ತಿಗೆದಾರರ ಬಾಕಿ ಹಣ ಕೊನೆಗೂ ಬಿಡುಗಡೆಯಾಗಿದೆ. 25 ಲಕ್ಷ ರೂ ಒಳಗೆ ಇರುವ ಬಾಕಿ ಬಿಲ್​ ಮಾತ್ರ ಬಿಬಿಎಂಪಿ ರಿಲೀಸ್ ಮಾಡಿದೆ.

ಬಿಬಿಎಂಪಿ ಗುತ್ತಿಗೆದಾರರ ಹೋರಾಟಕ್ಕೆ ಮಣಿದ BBMP, ಬಾಕಿ ಹಣ​ ಬಿಡುಗಡೆ
ಬಿಬಿಎಂಪಿ ಕಚೇರಿ
Shivaraj
| Edited By: |

Updated on:Aug 22, 2023 | 12:42 PM

Share

ಬೆಂಗಳೂರು, (ಆಗಸ್ಟ್ 22): ರಾಜ್ಯ ರಾಜಕಾರಣದಲ್ಲಿ (Karnataka Politics) ಹಲ್​ ಚಲ್​ ಎಬ್ಬಿಸಿದ್ದ ಬಿಬಿಎಂಪಿ ಗುತ್ತಿಗೆದಾರರ(BBMP contractors)  ಹೋರಾಟಕ್ಕೆ ಕೊನೆಗೂ ಬಿಬಿಎಂಪಿ ಮಣಿದಿದೆ. ಬಿಬಿಎಂಪಿ(BBMP) ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ ಮಾಡಿದೆ. ಸಣ್ಣ ಗುತ್ತಿಗೆದಾರರಿಗೆ(25 ಲಕ್ಷದೊಳಗಿನ ಬಾಕಿ ಬಿಲ್) ಬಾಕಿ ಹಣ ಕ್ಲಿಯರ್ ಮಾಡಲು ಮೊದಲ ಹಂತದಲ್ಲಿ 42 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದೆ. ಕೇವಲ 25 ಲಕ್ಷದೊಳಗೆ ಕಾಮಗಾರಿ ಮಾಡಿದ್ದ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ ಮಾಡಿದ್ದು,  25 ಲಕ್ಷ ರೂ ಮೇಲಿರುವ ಬಾಕಿ ಹಣ ಬಿಡುಗಡೆ ಮಾಡದೇ ಇರುವುದು ಅಚ್ಚರಿಕೆ ಕಾರಣವಾಗಿದೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್,  ಸಣ್ಣ ಗುತ್ತಿಗೆದಾರರಿಗೆ ಬಿಲ್‌ ಕ್ಲಿಯರ್​​ಗೆ ಮೊದಲ ಹಂತದ ಹಣ ಬಿಡುಗಡೆ ಮಾಡಲಾಗಿದೆ. ಉಳಿದ ಬಾಕಿ ಬಿಲ್ ಗುತ್ತಿಗೆದಾರರ ತನಿಖೆ ಹಂತದಲ್ಲಿದೆ. ಹೀಗಾಗಿ ತನಿಖಾ ವರದಿ ಬಂದ ಬಳಿಕ ಹಂತ ಹಂತವಾಗಿ ಬಿಲ್‌ ಬಿಡುಗಡೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಗುತ್ತಿಗೆದಾರರ ಬಳಿಕ ಬಿಬಿಎಂಪಿ ಅಧಿಕಾರಿಗಳನ್ನು ವಿಚಾರಣೆ ನಡೆಸಲು ನಿರ್ಧರಿಸಿದ ಪೊಲೀಸರು

ಗುತ್ತಿಗೆದಾರರ ವಿಚಾರಣೆ

ಬಾಕಿ ಬಿಲ್​ ಬಿಡುಗಡೆ ಮಾಡುವಂತೆ ಬಿಬಿಎಂಪಿ(BBMP) ಗುತ್ತಿಗೆದಾರರ ಸಂಘ ಆಗ್ರಹಿಸಿದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದೆ. ಈ ಹಿನ್ನೆಲೆಯಲ್ಲಿ ಇದೀಗ ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಬಿಬಿಎಂಪಿ ಅಧಿಕಾರಿ ಮಹದೇವ್ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಒಟ್ಟು 57 ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇನ್ನು ಈ ದೂರಿನ ಅನ್ವಯ ಪೊಲೀಸರು ಗುತ್ತಿಗೆದಾರರನ್ನು ವಿಚಾರಣೆಗೊಳಪಡಿಸಿದ್ದಾರೆ.

ಕಾಮಗಾರಿ ಸ್ಥಗಿತಕ್ಕೆ ರಾಜ್ಯ ಗುತ್ತಿಗೆದಾರರ ಸಂಘ ಚಿಂತನೆ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಗುತ್ತಿಗೆದಾರರ ಸಂಘ (Karnataka Contractors Association) ಸಮರ ಸಾರಲು ಮುಂದಾಗಿದೆ. ಹೌದು, ಕಾಮಗಾರಿ ಬಿಲ್ ಬಾಕಿ ಇರಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಶಾಕ್ ನೀಡಲು ಕಾಮಗಾರಿ ಸ್ಥಗಿತಕ್ಕೆ ಚಿಂತನೆ ನಡೆಸಿದೆ. ಈಗಾಗಲೇ ಬಿಬಿಎಂಪಿ ಗುತ್ತಿಗೆದಾರರ (Contractors)ಸಂಘ ಸಚಿವರ ವಿರುದ್ಧ ಕಮಿಷನ್​​ ಆರೋಪ ಮಾಡಿದೆ. ಇದರ ಮಧ್ಯೆ ಇದೀಗ ರಾಜ್ಯ ಗುತ್ತಿಗೆದಾರರ ಸಂಘವೂ ಸರ್ಕಾರಕ್ಕೆ ಶಾಕ್ ಕೊಡಲು ಮುಂದಾಗಿದ್ದು, ಈ ಕುರಿತು ‘ ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೆ ಕಾಮಗಾರಿ ಪೂರ್ಣ ಮಾಡಲು ಕಷ್ಟವಾಗುತ್ತೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕಾಮಗಾರಿ ನಿಲ್ಲಿಸುವ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:17 pm, Tue, 22 August 23

Follow Us
Shivaraj
Shivaraj
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ