ಬಿಬಿಎಂಪಿ ಕಸದ ಲಾರಿ-ಬೈಕ್​ ಅಪಘಾತ: ಚಾಲಕನ ಬಂಧನ

ಟೆಕ್ಕಿಗಳಿಬ್ಬರು ಊಟಕ್ಕೆಂದು ರವಿವಾರ ರಾತ್ರಿ 8:45ರ ಸುಮಾರಿಗೆ ಬೈಕ್​ನಲ್ಲಿ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿ ಮೃತಪಟ್ಟರು. ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಟೆಕ್ಕಿಗಳು ಮೃತಪಟ್ಟಿದ್ದಾರೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಪ್ರಕರಣದ ತನಿಖೆ ನಡೆಯುತ್ತಿದೆ.

ಬಿಬಿಎಂಪಿ ಕಸದ ಲಾರಿ-ಬೈಕ್​ ಅಪಘಾತ: ಚಾಲಕನ ಬಂಧನ
ಬಿಬಿಎಂಪಿ ಲಾರಿ
Follow us
ಶಾಂತಮೂರ್ತಿ
| Updated By: ವಿವೇಕ ಬಿರಾದಾರ

Updated on: Jul 30, 2024 | 10:26 AM

ಬೆಂಗಳೂರು, ಜುಲೈ 30: ಲಾರಿ-ಬೈಕ್ ಅಪಘಾತದಲ್ಲಿ ಇಬ್ಬರು ಟೆಕ್ಕಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿಂತೆ ಬಿಬಿಎಂಪಿ ಕಸದ ಲಾರಿ (BBMP Garbage Lorry) ಚಾಲಕನನ್ನು ಹಲಸೂರು ಗೇಟ್ ಸಂಚಾರ ಪೊಲೀಸರು (Traffic Police) ಬಂಧಿಸಿದ್ದಾರೆ. ಶಿವಶಂಕರ್ (38) ಬಂಧಿತ ಲಾರಿ ಚಾಲಕ. ಅಪಘಾತದ ಬಳಿಕ ಚಾಲಕ ಶಿವಶಂಕರ್ ಪರಾರಿಯಾಗಿದ್ದನು. ಸದ್ಯ ಪೊಲೀಸರು ಚಾಲಕ ಶಿವಶಂಕರ್​ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಚಾಲಕ ಶಿವಶಂಕರ್ ರಕ್ತ ಮಾದರಿಯನ್ನು ಸಂಗ್ರಹಿಸಿ ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಕುಡಿದು ವಾಹನ ಚಾಲನೆ ಮಾಡಿರುವ ಬಗ್ಗೆ ಪರಿಶೀಲನೆ ನಡೆಯಲಿದೆ.

ರವಿವಾರ ರಾತ್ರಿ ಅಪಘಾತ ಸಂಭವಿಸಿ, ಟೆಕ್ಕಿಗಳಿಬ್ಬರು ಮೃತಪಟ್ಟಿದ್ದಾರೆ. ಇದು ದುರದೃಷ್ಟಕರ. ಮೃತರ ಕುಟುಂಬಕ್ಕೆ ಬಿಬಿಎಂಪಿ ನೆರವು ನೀಡುತ್ತೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್​ ಹೇಳಿದರು.

ಘಟನೆಗೆ ಯಾರು ಕಾರಣ ಎನ್ನುವುದು ಬಹಳ ಮುಖ್ಯವಾಗಿರುತ್ತದೆ. ಬೈಕ್​ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದಿದ್ದರೆ ನಾವು ಜವಾಬ್ದಾರಾಗುತ್ತೇವೆ. ಆದರೆ ಈ ಪ್ರಕರಣದಲ್ಲಿ ಲಾರಿಗೆ ಹಿಂದಿನಿಂದ ಬೈಕ್ ಗುದ್ದಿದೆ. ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದವರು ಕಸದ ಲಾರಿ ಹಿಂಭಾಗ ಸಿಲುಕಿದ್ದರು. ಪೊಲೀಸರು ತನಿಖೆ ಮಾಡುತ್ತಿದ್ದಾರೆ, ಸತ್ಯಾಂಶ ತಿಳಿಯುವವರೆಗೆ ಕಾಯೋಣ. ಕಸದ ಲಾರಿ ಚಾಲಕರಿಂದ ತಪ್ಪಾಗಿದ್ದರೆ ನಾವೇ ಜವಾಬ್ಬಾರಿ ಹೊರುತ್ತೇವೆ. ಬಿಬಿಎಂಪಿ ಕಸ ವಿಲೇವಾರಿ ಗುತ್ತಿಗೆದಾರನಿಂದಲೂ ಪರಿಹಾರ ಕೊಡಿಸ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಇದನ್ನೂ ಓದಿ: ಕುಡುಕರ ಅಡ್ಡೆಯಂತಾದ ಬಿಬಿಎಂಪಿ ಆಸ್ಪತ್ರೆ ಆವರಣ; ರಾತ್ರಿಯಾದ್ರೆ ಆಸ್ಪತ್ರೆ ಅಂಗಳವೇ ಬಾರು, ಸುತ್ತಮುತ್ತ ಕಸದ ದರ್ಬಾರು!

ಏನಿದು ಪ್ರಕರಣ

ರವಿವಾರ ರಾತ್ರಿ 8:45ರ ಸುಮಾರಿಗೆ ಬೆಂಗಳೂರಿನ ಕೆಆರ್​ ಸರ್ಕಲ್ ಬಳಿ ಕಸದ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಟಿಸಿಎಸ್ ಕಂಪನಿ ಉದ್ಯೋಗಿಗಳಾದ ಪ್ರಶಾಂತ್, ಶಿಲ್ಪಾ ಮೃತಪಟ್ಟಿದ್ದಾರೆ. ಟೆಕ್ಕಿ ಪ್ರಶಾಂತ್ ಬೆಂಗಳೂರಿನ ಬಾಣಸವಾಡಿ ನಿವಾಸಿಯಾಗಿದ್ದಾನೆ.

ಟೆಕ್ಕಿ ಶಿಲ್ಪಾ ಆಂಧ್ರಪ್ರದೇಶದ ಹಿಂದೂಪುರ ನಿವಾಸಿಯಾಗಿದ್ದಳು. ಟೆಕ್ಕಿ ಶಿಲ್ಪಾ ಬೆಂಗಳೂರಿನ ನಾಗವಾರದ ಪಿಜಿಯಲ್ಲಿ ನೆಲೆಸಿದ್ದಳು. ಪ್ರಶಾಂತ್, ಶಿಲ್ಪಾ ಬೈಕ್​ನಲ್ಲಿ ಊಟಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಹಲಸೂರು ಗೇಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ