ಮಾ, 20ರಂದು ಬಿಬಿಎಂಪಿ ಪೌರಕಾರ್ಮಿಕರಿಂದ ಪ್ರತಿಭಟನೆಗೆ ಕರೆ: ನಗರದಲ್ಲಿ ಎದುರಾಗಲಿದೆ ಕಸ ವಿಲೇವಾರಿ ಸಮಸ್ಯೆ

ಘನತ್ಯಾಜ್ಯ ಸಾಗಣೆಯಲ್ಲಿ ತೊಡಗಿರುವ ಬಿಬಿಎಂಪಿ ಪೌರಕಾರ್ಮಿಕ ಸಂಘ, ತ್ಯಾಜ್ಯ ಸಂಗ್ರಹಕಾರರ ಉದ್ಯೋಗವನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಮಾರ್ಚ್ 20 ರಿಂದ ಮುಷ್ಕರ ನಡೆಸಲು ಮುಂದಾಗಿದ್ದಾರೆ.

ಮಾ, 20ರಂದು ಬಿಬಿಎಂಪಿ ಪೌರಕಾರ್ಮಿಕರಿಂದ ಪ್ರತಿಭಟನೆಗೆ ಕರೆ: ನಗರದಲ್ಲಿ ಎದುರಾಗಲಿದೆ ಕಸ ವಿಲೇವಾರಿ ಸಮಸ್ಯೆ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on:Mar 15, 2023 | 11:00 AM

ಬೆಂಗಳೂರು: ಬಿಬಿಎಂಪಿ ಕಸ ಸಾಗಣೆ ಕಾರ್ಮಿಕರು(BBMP Garbage Transport Workers) ಮಾರ್ಚ್ 20ರಂದು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಕಾಂಪ್ಯಾಕ್ಟ್ ವಾಹನ ಮತ್ತು ಆಟೋ-ಟಿಪ್ಪರ್ ಚಾಲಕರು, ಸಹಾಯಕರು ಮತ್ತು ಲೋಡರ್‌ಗಳಿಗೆ ನೇರ ಪಾವತಿ ವ್ಯವಸ್ಥೆ ಮತ್ತು ಖಾಯಂ ಉದ್ಯೋಗ ಸ್ಥಾನಮಾನಕ್ಕೆ ಒತ್ತಾಯಿಸಿ ಬಿಬಿಎಂಪಿ ಕಸ ಸಾಗಣೆ ಕಾರ್ಮಿಕರು ಮಾರ್ಚ್ 20ರ ಸೋಮವಾರ ಪ್ರತಿಭಟನೆ ನಡೆಸಲಿದ್ದಾರೆ.

ಚಾಲಕರು, ಸಹಾಯಕರು ಮತ್ತು ಲೋಡರ್‌ಗಳು ಮಾರ್ಚ್ 20 ರಂದು ಮುಷ್ಕರಕ್ಕೆ ಕರೆ ನೀಡಿದ್ದು, ಅಂದು ನಗರದಲ್ಲಿ ಕಸ ಸಂಗ್ರಹಣೆಗೆ ತೊಂದರೆಯಾಗುವ ಸಾಧ್ಯತೆ ಇದೆ. ಕಳೆದ ವಾರ ಪೌರಕಾರ್ಮಿಕರು ಮುಷ್ಕರ ನಡೆಸಿದ್ದರು. ಆದ್ರೆ ಸರ್ಕಾರದಿಂದ ಖಾಯಂ ಉದ್ಯೋಗ ಸ್ಥಾನಮಾನದ ಭರವಸೆ ಸಿಕ್ಕ ನಂತರ ಅದನ್ನು ಹಿಂಪಡೆದಿದ್ದರು. ಆದ್ರೆ ಈ ಬಾರಿ ಮತ್ತೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಇದನ್ನೂ ಓದಿ: Bengaluru: ಸಿಂಗಾಪುರ ಪ್ರವಾಸಕ್ಕೆ ತೆರಳಲಿರುವ ಬಿಬಿಎಂಪಿಯ 200 ಪೌರಕಾರ್ಮಿಕರು

ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ 593 ಕಾಂಪ್ಯಾಕ್ಟರ್ ವಾಹನ ಚಾಲಕರು, 9,300 ಆಟೊ ಟಿಪ್ಪರ್ ಚಾಲಕರು ಮತ್ತು ಸಹಾಯಕರು, 1,800 ಲೋಡರ್‌ಗಳಿಗೂ ಕಾಯಂ ಉದ್ಯೋಗ ನೀಡಬೇಕು ಎಂದು ಅಖಿಲ ಭಾರತ ಕೇಂದ್ರೀಯ ಕಾರ್ಮಿಕ ಸಂಘಗಳ ಒಕ್ಕೂಟದ ಬಿಬಿಎಂಪಿ ಪೌರಕಾರ್ಮಿಕರ ಸಂಘದ ಸದಸ್ಯರು ಒತ್ತಾಯಿಸಿದ್ದಾರೆ. ಹಾಗೂ ಈ ಬಗ್ಗೆ ಬಿಬಿಎಂಪಿಯ SWM ವಿಭಾಗದ ಜಂಟಿ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ಬಿಬಿಎಂಪಿಯ ಲೋಡರ್‌ಗಳು, ಕ್ಲೀನರ್‌ಗಳು ಮತ್ತು ಆಟೋ-ಟಿಪ್ಪರ್ ಚಾಲಕರು ಸೇರಿದಂತೆ ಕಾರ್ಮಿಕರು ಕನಿಷ್ಠ ವೇತನವನ್ನು ಸಹ ಪಡೆಯುವುದಿಲ್ಲ. ಅವರಿಗೆ ಇಎಸ್‌ಐ ಅಥವಾ ಪಿಎಫ್ ವ್ಯವಸ್ಥೆಯೂ ಇಲ್ಲ. ಅಲ್ಲದೆ ಅವರಿಗೆ ತಮ್ಮ ಕೆಲಸ ನಿರ್ವಾಹಣೆಗೆ ಅಗತ್ಯವಾದ ಸುರಕ್ಷತಾ ಸಾಧನಗಳನ್ನು ಒದಗಿಸಿಲ್ಲ. ಹೀಗಾಗಿ ಅವರಲ್ಲಿ ಅನೇಕರು ವಿವಿಧ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ ಎಂದು ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:00 am, Wed, 15 March 23

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ