AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ: 45 ಸಾವಿರ ಅಕ್ರಮ ಆಸ್ತಿಗಳಿಗೆ ಎ ಖಾತಾ ಪ್ರಮಾಣ ಪತ್ರ !

ಬಿಬಿಎಂಪಿ ಒಂದಲ್ಲಾ ಒಂದು ವಿವಾದದ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿದೆ. ಇದೀಗ ಅಕ್ರಮ ಸಕ್ರಮ ಯೋಜನೆ ಜಾರಿಗೂ ಮುನ್ನವೇ ಬಿಬಿಎಂಪಿ ಅಧಿಕಾರಿಗಳು ರಾಜಧಾನಿ ಬೆಂಗಳೂರಲ್ಲಿ 45 ಸಾವಿರಕ್ಕೂ ಅಧಿಕ ಆಸ್ತಿಗಳಿಗೆ ಅಕ್ರಮವಾಗಿ "ಎ" ಖಾತಾ ಪ್ರಮಾಣ ಪತ್ರ ನೀಡಿದ್ದಾರೆ.

ಬಿಬಿಎಂಪಿ: 45 ಸಾವಿರ ಅಕ್ರಮ ಆಸ್ತಿಗಳಿಗೆ ಎ ಖಾತಾ ಪ್ರಮಾಣ ಪತ್ರ !
ಬಿಬಿಎಂಪಿ
ವಿವೇಕ ಬಿರಾದಾರ
|

Updated on: Aug 07, 2023 | 11:22 AM

Share

ಬೆಂಗಳೂರು: ಬಿಬಿಎಂಪಿ ಒಂದಲ್ಲಾ ಒಂದು ವಿವಾದದ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿದೆ. ಇದೀಗ ಅಕ್ರಮ ಸಕ್ರಮ ಯೋಜನೆ ಜಾರಿಗೂ ಮುನ್ನವೇ ಬಿಬಿಎಂಪಿ (BBMP) ಅಧಿಕಾರಿಗಳು ರಾಜಧಾನಿ ಬೆಂಗಳೂರಲ್ಲಿ 45 ಸಾವಿರಕ್ಕೂ ಅಧಿಕ ಆಸ್ತಿಗಳಿಗೆ ಅಕ್ರಮವಾಗಿ “ಎ” ಖಾತಾ (A Account) ಪ್ರಮಾಣ ಪತ್ರ ನೀಡಿದ್ದಾರೆ. ಅಧಿಕಾರಿಗಳು ಎ ಖಾತಾ ಪ್ರಮಾಣ ಪತ್ರ ನೀಡಿದ್ದರಿಂದ ನಾಗರಿಕ ಸಂಸ್ಥೆಗೆ 5 ಸಾವಿರ ಕೋಟಿ ರೂ. ನಷ್ಟವಾಗಿದೆ.

ಕಾನೂನಿನ ಪ್ರಕಾರ, ‘ಎ’ ಖಾತಾ (ನೋಂದಾವಣೆ) ಅನ್ನು ಲೇಔಟ್ ಅಥವಾ ಅನುಮತಿ ಪಡೆದ ಸೈಟ್‌ಗೆ ಮಾತ್ರ ನೀಡಬಹುದು. ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ (KMC) ಕಾಯ್ದೆ, 1976 ಅಥವಾ ಬಿಬಿಎಂಪಿ ಕಾಯ್ದೆ 2020 ಆಕ್ಯುಪೆನ್ಸಿ ಪ್ರಮಾಣಪತ್ರ ಸೇರಿದಂತೆ ಶಾಸನಬದ್ಧ ಅನುಮೋದನೆಗಳನ್ನು ಹೊಂದಿರದ ಆಸ್ತಿಗಳಿಗೆ ‘ಎ’ ಖಾತಾ ಪ್ರಮಾಣಪತ್ರವನ್ನು ನೀಡಲಾಗುವುದಿಲ್ಲ.

ಇನ್ನು ಎ ಖಾತೆ ಪ್ರಮಾಣ ಪತ್ರ ನೀಡಲು ಬಿಬಿಎಂಪಿ ಅಧಿಕಾರಿಗಳು ಅಕ್ರಮವಾಗಿ ಸಾಫ್ಟವೇರ್​ಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಎ ಖಾತಾ ಪ್ರಮಾಣ ಪತ್ರ ಪಡೆಯಲು ಕಂದಾಯ ಇಲಾಖೆಯ ಕಿರಿಯ ಅಧಿಕಾರಿಗಳಿಗೆ, ಕೆಲ ಹಿರಿಯ ಅಧಿಕಾರಿಗಳು ಮತ್ತು ಇನ್​​ಸ್ಪೆಕ್ಟರ್​​​ಗಳು ಬೆಲೆಬಾಳುವ ವಸ್ತುಗಳನ್ನು ಅಕ್ರಮವಾಗಿ ನೀಡಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಬಿಬಿಎಂಪಿ ಮೇಲೆ ಡಿಕೆ ಶಿವಕುಮಾರ್​ ಮತ್ತಷ್ಟು ಹಿಡಿತ; 2019-2023ರ ನಡುವಿನ ಕಾಮಗಾರಿಗಳ ವಿವರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ

ಸರ್ಕಾರಿ ಅನುದಾನಿತ ಆಶ್ರಯ ಯೋಜನೆ ಅಥವಾ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಯಿಂದ ಅನುಮೋದಿಸಲ್ಪಟ್ಟಿರುವ ಲೇಔಟ್‌ಗಳ ಅಡಿಯಲ್ಲಿ ನಿರ್ಮಿಸಲಾದ ಮನೆಗಳಿಗೆ ಕೋಡ್​​​​ಗಳ ಮೂಲಕ ಎ ಖಾತಾ ಪ್ರಮಾಣ ಪತ್ರ ನೀಡಲಾಗುತ್ತದೆ. ಆದರೆ ಯಾವುದೇ ಶಾಸನಬದ್ಧ ಅನುಮೋದನೆಗಳನ್ನು ಹೊಂದಿರದ ಆಸ್ತಿಗಳಿಗೆ ‘ಎ’ ಖಾತಾ ನೀಡಲು ಈ ಕೋಡ್‌ಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.

ಪ್ರಸ್ತುತ ನಡೆಯುತ್ತಿರುವ ಆಂತರಿಕ ತನಿಖೆಯಲ್ಲಿ ಭ್ರಷ್ಟ ಕಂದಾಯ ಅಧಿಕಾರಿಗಳು 45,133 ಕ್ಕೂ ಹೆಚ್ಚು ಆಸ್ತಿಗಳಿಗೆ ‘ಎ’ ಖಾತಾ ಪ್ರಮಾಣಪತ್ರವನ್ನು ನೀಡಿರುವುದು ಪತ್ತೆಯಾಗಿದೆ. ಇದಕ್ಕಿಂತ ಹೆಚ್ಚಾಗಿ, ಈ ಅಧಿಕಾರಿಗಳು ಈ ಆಸ್ತಿ ಮಾಲೀಕರಿಂದ 580 ಕೋಟಿ ರೂ. ಪಡೆದಿದ್ದಾರೆ ಎಂಬ ಅಂಶ ತಿಳಿದುಬಂದಿದೆ.

ವಲಯ ಅಕ್ರಮ ಖಾತಾ ಪ್ರಕರಣ

  1. ಬೊಮ್ಮನಹಳ್ಳಿ 6413
  2. ದಾಸರಹಳ್ಳಿ 3927
  3. ಪೂರ್ವ 6136
  4. ಮಹದೇವಪುರ 12,334
  5. ಆರ್‌ಆರ್‌ನಗರ 3,422
  6. ದಕ್ಷಿಣ 2157
  7. ಪಶ್ಚಿಮ 4623
  8. ಯಲಹಂಕ 6,121
  9. ಒಟ್ಟು: 45,133

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ