ಬೆಂಗಳೂರು, ಆಗಸ್ಟ್ 29: ಕಾಂಗ್ರೆಸ್ ಸರ್ಕಾರದ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಗೆ (Gruha Lakshmi Scheme) ನಾಳೆ (ಆಗಸ್ಟ್ 30) ಮೈಸೂರಿನಲ್ಲಿ ಚಾಲನೆ ನೀಡಲಾಗುತ್ತಿದೆ. ಸಂಸದ ರಾಹುಲ್ ಗಾಂಧಿ (Rahul Gandhi) ಅವರು ಈ ಯೋಜನೆಯನ್ನು ಉದ್ಘಾಟಿಸಲಿದ್ದು, ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರಂತೆ, ಬಿಬಿಎಂಪಿಯ (BBMP) 198 ವಾರ್ಡ್ಗಳಲ್ಲೂ ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ.
ಮುಖ್ಯ ಕಾರ್ಯಕ್ರಮವನ್ನು ಟೌನ್ ಹಾಲ್ ಬಳಿ ಆಯೋಜಿಸಲಾಗಿದ್ದು, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಕಾರ್ಯಕ್ರಮದ ನೇರ ಪ್ರಸಾರವನ್ನ ಪ್ರತಿ ವಾರ್ಡ್ನಲ್ಲಿ ತೋರಿಸಲು ಬಿಬಿಎಂಪಿ ಸಿದ್ಧತೆ ನಡೆಸಿದೆ.
ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ. ನೀಡುವ ಈ ಯೋಜನೆಗೆ ನಾಳೆ ಬೆಳಗ್ಗೆ 11.30 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.
ಇದನ್ನೂ ಓದಿ: Gruha Lakshmi Scheme: ನಾನೇ ಯಜಮಾನಿ ಎಂದು ರಂಗೋಲಿ ಹಾಕಿ ಗೃಹಲಕ್ಷ್ಮಿ ಯೋಜನೆಗೆ ಸ್ವಾಗತಕೋರಿದ ಮಹಿಳೆಯರು
ರಾಜ್ಯದ ಸುಮಾರು 11 ಸಾವಿರ ಸ್ಥಳಗಳಲ್ಲಿ ವರ್ಚುವಲ್ ವೀಡಿಯೋ ಮೂಲಕ ಏಕಕಾಲಕ್ಕೆ ಚಾಲನೆ ಸಿಗಲಿದೆ. ಬಿಬಿಎಂಪಿಯ 198 ವಾರ್ಡ್ಗಳ ನಿಗದಿತ ಸ್ಥಳಗಳಲ್ಲಿ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಫಲಾನುಭವಿಗಳು ಹಾಗೂ ಸಾರ್ವಜನಿಕರು ಭಾಗಿಯಾಗಲಿದ್ದಾರೆ.
ಈಗಾಗಲೇ ಬೆಂಗಳೂರು ನಗರ ಜಿಲ್ಲೆಯಲ್ಲಿ ಸುಮಾರು 6,16,480 ಜನ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಗೆ ಹೆಸರನ್ನು ನೊಂದಾಯಿಸಿಕೊಂಡಿರುತ್ತಾರೆ. ಎಂಟು ವಲಯವಾರು ವಾರ್ಡ್ ಹಾಗೂ ಗುರುತಿಸಿರುವ ಸ್ಥಳಗಳ ವಿವರಗಳು ಈ ಕೆಳಗಿನಂತಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ