ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್; ಶೇಕಡ 50 ರಷ್ಟು ರಿಯಾಯಿತಿ

ಆಸ್ತಿ ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ಭರ್ಜರಿ ಆಫರ್ ನೀಡಿದೆ. ತೆರಿಗೆ ಬಾಕಿ ಉಳಿಸಿಕೊಂಡ ಕಟ್ಟಡ ಮಾಲೀಕರು ಶೇಕಡ 50 ರಷ್ಟು ತೆರಿಗೆ ಪಾವತಿ ಮಾಡಿದರೆ ಸಾಕು. ರಿಯಾಯಿತಿ ಆಫರ್ ಕೊಟ್ಟು ಅರ್ಧದಷ್ಟಾದ್ರೂ ತೆರಿಗೆ ಸಂಗ್ರಹಕ್ಕೆ ಪಾಲಿಕೆ ಮುಂದಾಗಿದೆ. ಟಾರ್ಗೆಟ್ ರೀಚ್ ಮಾಡಲು ಹೊಸ ಅಸ್ತ್ರಕ್ಕೆ ಪಾಲಿಕೆ ಮುಂದಾಗಿದೆ. ತೆರಿಗೆ ರಿಯಾಯಿತಿ ಬಗ್ಗೆ ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ಮಾಹಿತಿ ನೀಡಿದರು.

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್; ಶೇಕಡ 50 ರಷ್ಟು ರಿಯಾಯಿತಿ
ಬಿಬಿಎಂಪಿ
Follow us
TV9 Web
| Updated By: ಆಯೇಷಾ ಬಾನು

Updated on: Feb 06, 2024 | 1:47 PM

ಬೆಂಗಳೂರು, ಫೆ.06: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬೆಂಗಳೂರು ಮಹಾನಗರ ಪಾಲಿಕೆ (BBMP) ಗುಡ್ ನ್ಯೂಸ್ ಕೊಟ್ಟಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಕಟ್ಟಡ ಮಾಲೀಕರಿಗೆ ಶೇಕಡ 50 ರಷ್ಟು ತೆರಿಗೆ (Tax) ಪಾವತಿಗೆ ಪಾಲಿಕೆ ಆಫರ್ ನೀಡಿದೆ. ಆರ್ಥಿಕ ವರ್ಷ ಮುಗಿಯುವುದರೊಳಗೆ ಆದಾಯ ಗುರಿ ತಲುಪಲು ಬಿಬಿಎಂಪಿ ಪ್ಲ್ಯಾನ್ ಮಾಡಿದ್ದು ರಿಯಾಯಿತಿ ನೀಡಿದೆ. ಬಾಕಿ ಇರೋ ತೆರಿಗೆಯಲ್ಲಿ ಅರ್ಧದಷ್ಟು ತೆರಿಗೆ ಪಾವತಿ ಮಾಡಿ ಅಪೀಲು ಸಲ್ಲಿಸಿದವರಿಗೆ ಮಾತ್ರ ತೆರಿಗೆ ರಿಯಾಯಿತಿ ನೀಡಲಾಗುತ್ತೆ ಎಂದು ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಸ್ಥಳೀಯ ಪಾಲಿಕೆ ಕಂದಾಯ ಕಚೇರಿಯಲ್ಲಿ ಅರ್ಧ ತೆರಿಗೆ ಕಟ್ಟಿ, ಉಳಿದರರ್ಧ ತೆರಿಗೆ ಮನ್ನಾಕೆ ಮನವಿ ಸಲ್ಲಿಸಬೇಕು. ನೋಟಿಸ್ ಪಡೆದ ತೆರಿಗೆದಾರರು ಅರ್ಧದಷ್ಟು ತೆರಿಗೆ ಪಾವತಿಸಿ ನಂತರ ಪಾಲಿಕೆಗೆ ಅಪೀಲ್ ಸಲ್ಲಿಸಬೇಕು. ಸರ್ಕಾರ ಆಸ್ತಿ ತೆರಿಗೆ ಸಂಗ್ರಹದಲ್ಲಿ ತಿದ್ದುಪಡಿ ಮಾಡಿದ್ರೆ ಅರ್ಧದಷ್ಟು ತೆರಿಗೆ ವಿನಾಯಿತಿಯಾಗುವ ಸಾಧ್ಯತೆ ಇದೆ. ಸದ್ಯ ಬಾಕಿ ಇರೋ ತೆರಿಗೆಯಲ್ಲಿ ಅರ್ಧದಷ್ಟು ತೆರಿಗೆ ಪಾವತಿ ಮಾಡಿ ಅಪೀಲು ಸಲ್ಲಿಸಿದವರಿಗೆ ಮಾತ್ರ ತೆರಿಗೆ ರಿಯಾಯಿತಿ ನೀಡಲಾಗುತ್ತೆ ಎಂದು ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ಮಾಹಿತಿ ನೀಡಿದರು.

ಈ ಹಿಂದೆ ತೆರಿಗೆ ರಿಯಾಯಿತಿ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸುಳಿವು ನೀಡಿದ್ದರು. ಸದ್ಯ ರಿಯಾಯಿತಿ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಮತ್ತೊಂದು ಮಾರ್ಗದಲ್ಲಿ ತೆರಿಗೆ ವಸೂಲಿಗೆ ಪಾಲಿಕೆ ಪ್ಲಾನ್ ಮಾಡಿದೆ. ರಿಯಾಯಿತಿ ಆಫರ್ ಕೊಟ್ಟು ಅರ್ಧದಷ್ಟಾದ್ರೂ ತೆರಿಗೆ ಸಂಗ್ರಹಕ್ಕೆ ಪಾಲಿಕೆ ಮುಂದಾಗಿದೆ. ಟಾರ್ಗೆಟ್ ರೀಚ್ ಮಾಡಲು ಹೊಸ ಅಸ್ತ್ರಕ್ಕೆ ಪಾಲಿಕೆ ಮುಂದಾಗಿದೆ.

ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ 10 ಸಾವಿರ ದಂಡ ವಿಧಿಸಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್​ ಸೂಚನೆ

ಪೀಣ್ಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಪಾಲಿಕೆ ಸ್ಪೇಷಲ್ ಡ್ರೈವ್

ಬಿಬಿಎಂಪಿ ವಲಯಗಳಲ್ಲಿ ಹಳೆ ಬಾಕಿ ಬಿಲ್ ಉಳಿಸಿಕೊಂಡಿದ್ದ ಸಣ್ಣ ಪುಟ್ಟ ಅಂಗಡಿಗಳಿಗೆ ನೋಟಿಸ್ ನೀಡಿ ಬಿಸಿ ಮುಟ್ಟಿಸಿತ್ತು. ನಿನ್ನೆ ಪೀಣ್ಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಸ್ಪೇಷಲ್ ಡ್ರೈವ್ ನಡೆಸಿರೋ ಬಿಬಿಎಂಪಿ ಅಧಿಕಾರಿಗಳು 2016-17 ನೇ ಸಾಲಿನಿಂದ ಪಾಲಿಕೆ ತೆರಿಗೆಯನ್ನ ಸರಿ ಪ್ರಮಾಣದಲ್ಲಿ ಕಟ್ಟದೇ ಇರುವ ಹಾಗೂ ದೊಡ್ಡ ಮೊತ್ತದಲ್ಲಿ ಹಳೆ ಬಾಕಿ ಬಿಲ್ ಉಳಿಸಿಕೊಂಡ ಹಲವಾರು ಕಂಪನಿಗಳಿಗೆ ನೋಟಿಸ್ ನೀಡಿ ಬೀಗ ಹಾಕಿದೆ.

ಇನ್ನೂ ಪಾಲಿಕೆ‌ ಅಧಿಕಾರಿಗಳು ಏಕಾಏಕಿ ಕಂಪನಿಗಳಿಗೆ ಬೀಗ ಜಡಿದು ಸೀಲ್ ಮಾಡಿದ ಬೆನ್ನಲ್ಲೆ ಪೀಣ್ಯ ಕೈಗಾರಿಕೆ ಸಂಘ ವಿರೋಧ ವ್ಯಕ್ತಪಡಿಸಿತ್ತು. ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿಕೊಂಡಿದ್ದು ಲಾಕ್ ಮಾಡದಂತೆ ಸೂಚನೆ ನೀಡಿದ್ದರು. ಈ ಬಗ್ಗೆ ಚರ್ಚೆ ಮಾಡಿ ಕಾಲಾವಕಾಶ ನೀಡುವುದಾಗಿ ಹೇಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ