AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Encroachment: ಒತ್ತುವರಿ ತರೆವಿಗೆ ಅಡ್ಡಿಪಡಿಸಿದ ಮಾಜಿ ಶಾಸಕನ ವಿರುದ್ಧ ದೂರು ದಾಖಲಿಸಲು ಮುಂದಾದ ಬಿಬಿಎಂಪಿ

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ಆರೋಪದಡಿ ಮಾಜಿ ಶಾಸಕ ನಂದೀಶ್ ರೆಡ್ಡಿ ವಿರುದ್ಧ ದೂರು ದಾಖಲಿಸಲು ಬಿಬಿಎಂಪಿ ಮುಂದಾಗಿದೆ.

Bengaluru Encroachment: ಒತ್ತುವರಿ ತರೆವಿಗೆ ಅಡ್ಡಿಪಡಿಸಿದ ಮಾಜಿ ಶಾಸಕನ ವಿರುದ್ಧ ದೂರು ದಾಖಲಿಸಲು ಮುಂದಾದ ಬಿಬಿಎಂಪಿ
ಮಾಜಿ ಶಾಸಕ ನಂದೀಶ್​​ ರೆಡ್ಡಿ (ಎಡಚಿತ್ರ) ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (ಬಲಚಿತ್ರ)
ವಿವೇಕ ಬಿರಾದಾರ
|

Updated on:Jun 20, 2023 | 12:46 PM

Share

ಬೆಂಗಳೂರು: ನಗರದಲ್ಲಿ ರಾಜಕಾಲುವೆ (Rajkaluve) ಒತ್ತುವರಿ ತೆರವಿಗೆ ಅಡ್ಡಿಪಡಿಸಿದ ಆರೋಪದಡಿ ಮಾಜಿ ಶಾಸಕ ನಂದೀಶ್ ರೆಡ್ಡಿ (Nandish Reddy) ವಿರುದ್ಧ ದೂರು ದಾಖಲಿಸಲು ಬಿಬಿಎಂಪಿ (BBMP) ಮುಂದಾಗಿದೆ. ಮಾಜಿ ಶಾಸಕ ನಂದೀಶ್ ರೆಡ್ಡಿ ವಿರುದ್ಧ ದೂರು ನೀಡಲು ಸೂಚಿಸಿದ್ದೇನೆ. ಮಹದೇವಪುರ ಠಾಣೆಯಲ್ಲಿ ಕ್ರಿಮಿನಲ್ ಕೇಸ್ (Criminal Case) ದಾಖಲಿಸಲು ಸೂಚಿಸಿದ್ದೇನೆ. ಕಾರ್ಯಾಚರಣೆಗೆ ಯಾರೇ ಅಡ್ಡಿಪಡಿಸಿದರೂ ದೂರು ದಾಖಲಿಸಿಕೊಳ್ಳಲು ಸೂಚಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಸೋಮವಾರ (ಜೂ.19) ರಂದು ಮಹದೇವಪುರ ವಲಯ ದೊಡ್ಡನೆಕ್ಕುಂದಿಯ 24/1,3,4 ಫರ್ನ್ ಸಿಟಿ ಬಡಾವಣೆಯ ವಿಲ್ಲಾದಲ್ಲಿ ಒತ್ತುವರಿ ಮಾಡಿಕೊಂಡಿರುವ ಐಶಾರಾಮಿ ಕ್ಲಬ್ ಹೌಸ್ ಮತ್ತು ಈಜುಕೊಳ ತೆರವು ಕಾರ್ಯಚರಣೆ ವೇಳೆ ನಿವಾಸಿಗಳು ಹಾಗೂ ಮಾಜಿ ಶಾಸಕ ನಂದೀಶ್ ರೆಡ್ಡಿ ಜೆಸಿಬಿ ಕೀ ಕಿತ್ತುಕೊಂಡು ತೆರವಿಗೆ ಅಡ್ಡಿಪಡಿಸಿದ್ದರು. ಹೀಗಾಗಿ ಬಿಬಿಂಪಿ ದೂರು ದಾಖಿಸಲು ಮುಂದಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ, ಹಲವಡೆ ಟ್ರಾಫಿಕ್ ಜಾಮ್ ಅಂಡರ್​ ಪಾಸ್​ ಬಂದ್

ಸಿಟಿಯಲ್ಲಿ ಇಂದು ಮುಂದುವರೆಯಲ್ಲಿದೆ ಒತ್ತುವರಿ ತೆರವು

ಇಂದು (ಜೂ.20) ಮತ್ತೆ ಬುಲ್ಡೋಜರ್ ಘರ್ಜಿಸಲಿದೆ. ದೊಡ್ಡನಕುಂದಿ ಹಾಗೂ ಪಣತ್ತೂರು ಎರಡು ಕಡೆ ಅಕ್ರಮ ಒತ್ತುವರಿಯನ್ನು ತೆರುವುಗೊಳಿಸಲಾಗುತ್ತದೆ. ಪಾಲಿಕೆ ಅಕ್ರಮ ಒತ್ತುವರಿ ವರದಿ ಪಡೆದಿದ್ದು, ಪಾಲಿಕೆ ವ್ಯಾಪ್ತಿಯ 8 ವಲಯಗಳ 100ಕ್ಕೂ ಹೆಚ್ಚು ಕಡೆ ಒತ್ತುವರಿಗೆ ಪ್ಲಾನ್ ಮಾಡಲಾಗಿದೆ.

ಇಂದು ಎರಡು ಭಾಗದಲ್ಲಿ ಪಾಲಿಕೆಯಿಂದ ತೆರವು ಕಾರ್ಯಚರಣೆ ನಡೆಯಲಿದೆ. ಪಾಲಿಕೆಯ ಟಾರ್ಗೆಟ್ ನಲ್ಲಿ 600 ಅಕ್ರಮ ಸ್ಥಳಗಳಿವೆ. ಒತ್ತುವರಿ ತೆರವುಗೊಳಿಸಲು ಸರ್ಕಾರ 15 ದಿನಗಳ ಡೆಡ್ ಲೈನ್ ನೀಡಿದೆ. 600 ಪೈಕಿ 110 ಕಡೆ ಕೋರ್ಟ್​​ನಿಂದ ತಡೆ ಆದೇಶ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Tue, 20 June 23

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು