AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮೋದಿ ಸಂಚರಿಸುವ ರಸ್ತೆ ಕಾಮಗಾರಿಗೆ ಬಿಬಿಎಂಪಿ ಖರ್ಚು ಮಾಡಿದ್ದು ಎಷ್ಟು ಕೋಟಿ ರೂ. ಗೊತ್ತಾ?

ಮೈಸೂರಿನಲ್ಲಿ ಇಂದು ಬೆಳಿಗ್ಗೆ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೆಹಲಿಗೆ ತೆರಳಿದ್ದಾರೆ. ಇನ್ನು ಮೋದಿ ರಾಜ್ಯಕ್ಕೆ ಆಗಮಿಸುತ್ತಾರೆಂದು ಬಿಬಿಎಂಪಿ ಬೆಂಗಳೂರಿನಲ್ಲಿ ಕೆಲ ರಸ್ತೆಗಳನ್ನ ಸರಿಪಡಿಸಿದೆ.

ಬೆಂಗಳೂರಿನಲ್ಲಿ ಮೋದಿ ಸಂಚರಿಸುವ ರಸ್ತೆ ಕಾಮಗಾರಿಗೆ ಬಿಬಿಎಂಪಿ ಖರ್ಚು ಮಾಡಿದ್ದು ಎಷ್ಟು ಕೋಟಿ ರೂ. ಗೊತ್ತಾ?
ಬಿಬಿಎಂಪಿ ಕಚೇರಿ
TV9 Web
| Edited By: |

Updated on:Jun 21, 2022 | 12:30 PM

Share

ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಹಿನ್ನೆಲೆ ದೇಶದ ಪ್ರಧಾನಿ ನರೇಂದ್ರ ಮೋದಿ (PM Narendra Modi) ರಾಜ್ಯಕ್ಕೆ ಆಗಮಿಸಿದ್ದರು. ನಿನ್ನೆ ಮಧ್ಯಾಹ್ನ 12 ಗಂಟೆ ಹೊತ್ತಿಗೆ ಬೆಂಗಳೂರಿಗೆ ಬಂದಿಳಿದಿದ್ದರು. ಬಳಿಕ ಕೆಲ ಯೋಜನೆಗಳಿಗೆ ಚಾಲನೆ ನೀಡಿ ಮೈಸೂರಿಗೆ ತೆರಳಿದ್ದರು. ಮೈಸೂರಿನಲ್ಲಿ ಇಂದು ಬೆಳಿಗ್ಗೆ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೆಹಲಿಗೆ ತೆರಳಿದ್ದಾರೆ. ಇನ್ನು ಮೋದಿ ರಾಜ್ಯಕ್ಕೆ ಆಗಮಿಸುತ್ತಾರೆಂದು ಬಿಬಿಎಂಪಿ ಬೆಂಗಳೂರಿನಲ್ಲಿ ಕೆಲ ರಸ್ತೆಗಳನ್ನ ಸರಿಪಡಿಸಿದೆ. ಮೋದಿ ಸಂಚರಿಸಿದ್ದ ರಸ್ತೆಮಾರ್ಗ ಅಭಿವೃದ್ಧಿಗೆಂದು ಬಿಬಿಎಂಪಿ ಒಟ್ಟು 23 ಕೋಟಿ ರೂ. ಖರ್ಚು ಮಾಡಿದೆ ಎಂದು ತಿಳಿದುಬಂದಿದೆ.

ಮೋದಿ ಸಂಚರಿಸಲು ನಗರದಲ್ಲಿ 14 ಕಿ.ಮೀ. ರಸ್ತೆ ಡಾಂಬರೀಕರಣ, ಫುಟ್​​ಪಾತ್ ಸ್ಲ್ಯಾಬ್, ಬೀದಿ ದೀಪ, ಮರಗಳ ರೆಂಬೆ ಕಟ್, ಚರಂಡಿ ಸ್ವಚ್ಛತೆಗೆ ಬಿಬಿಎಂಪಿ ಸುಮಾರು 23 ಕೋಟಿ ರೂ. ಖರ್ಚು ಮಾಡಿದೆ. ಮುಖ್ಯ ಆಯುಕ್ತರ ವಿವೇಚನಾ ಅನುದಾನದಡಿಯಲ್ಲಿ ಹಣ ಖರ್ಚಾಗಿದ್ದು, ಈ ಬಗ್ಗೆ ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: IND vs IRE: ಭಾರತ-ಐರ್ಲೆಂಡ್ ಟಿ20 ಸರಣಿ 7 ಗಂಟೆಗೆ ಶುರುವಾಗಲ್ಲ: ಹಾಗಿದ್ರೆ ಎಷ್ಟು ಗಂಟೆಗೆ?, ಇಲ್ಲಿದೆ ಎಲ್ಲ

ಇದನ್ನೂ ಓದಿ
Image
Rahul Gandhi: ಅನುಮತಿ ಪಡೆಯದೆ ಲಂಡನ್​ಗೆ ಹೋದ ಸಂಸದ ರಾಹುಲ್ ಗಾಂಧಿ; ಪಕ್ಷದ ವತಿಯಿಂದ ಬಂತು ಪ್ರತಿಕ್ರಿಯೆ: ಏನದು? ಮತ್ತದೇ ಯಡವಟ್ಟು!
Image
ರಸ್ತೆ ಬದಿಯ ಹೋಟೆಲ್​ನಲ್ಲಿ ಊಟ ಮಾಡಿದ ಈ ಸ್ಟಾರ್​ ನಟನನ್ನು ಗುರುತಿಸುತ್ತೀರಾ? ಇಲ್ಲಿದೆ ವೈರಲ್ ವಿಡಿಯೋ
Image
ಸ್ಟೇಜ್​ ಮೇಲೆ ಕೆಜಿಎಫ್​2 ಡೈಲಾಗ್ ಹೊಡೆದ ಎಸ್.ಡಿ.ಪಿ.ಐ ಮುಖಂಡ
Image
IPL 2022 Final Tickets: ಐಪಿಎಲ್ ಫೈನಲ್ ಮ್ಯಾಚ್ ಟಿಕೆಟ್ ಖರೀದಿಸುವುದು ಹೇಗೆ?

ನಿನ್ನೆಯಿಂದ ಬೆಂಗಳೂರು ಮತ್ತು ಮೈಸೂರಿನಲ್ಲಿ ಮೋದಿಗಾಗಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಮೈಸೂರಿನಲ್ಲಿ 10 ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತೆಗಾಗಿ ನಿಯೋಜನೆಗೊಂಡಿದ್ದರು.

ಮೋದಿ ಆಗಮಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ರಾಜಮಾತೆ ಪ್ರಮೋದಾ ದೇವಿ ಒಡೆಯರ್, ಪ್ರಧಾನಿಗಳ ಜತೆ ನಾವು ಯೋಗಾಭ್ಯಾಸ ಮಾಡಿದ್ದು ಖುಷಿ ವಿಚಾರ ಎಂದರು. ಇನ್ನು ಪ್ರಧಾನಿಗೆ ಪ್ರಮೋದಾ ದೇವಿ ಅವರು ಪಂಚಮುಖಿ ಆಂಜನೇಯ ಫೋಟೋವನ್ನು ಉಡುಗೊರೆಯಾಗಿ ನೀಡಿದರು.

ಮೋದಿ ನೋಡಿ ಸಂತಸಪಟ್ಟ ವಿಶೇಷಚೇತನ ಮಕ್ಕಳು: ಯೋಗ ದಿನಾಚರಣೆಯಲ್ಲಿ ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ ವಿಶೇಷ ಚೇತನ ಮಕ್ಕಳು ಭಾಗಿಯಾಗಿದ್ದರು. ಮೋದಿ ಜೊತೆ ಯೋಗ ಮಾಡಿ ಮಕ್ಕಳು ಖುಷಿಪಟ್ಟರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:09 pm, Tue, 21 June 22

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ