Big News: ವಸತಿ ಗೃಹಗಳಲ್ಲಿ ಅಗ್ನಿ ಅವಘಡ ತಡೆಯಲು ಬಿಬಿಎಂಪಿ ಹೊಸ ಆದೇಶ

ಬಿಬಿಎಂಪಿ ವ್ಯಾಪ್ತಿಯ ವಸತಿ ಸಮುಚ್ಚಯಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರೆ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.

Big News: ವಸತಿ ಗೃಹಗಳಲ್ಲಿ ಅಗ್ನಿ ಅವಘಡ ತಡೆಯಲು ಬಿಬಿಎಂಪಿ ಹೊಸ ಆದೇಶ
ಹೊತ್ತಿ ಉರಿದ ಫ್ಲಾಟ್
Follow us
TV9 Web
| Updated By: guruganesh bhat

Updated on: Sep 22, 2021 | 6:05 PM

ಬೆಂಗಳೂರು: ದೇವರಚಿಕ್ಕನಹಳ್ಳಿಯ ವಸತಿ ಗೃಹದಲ್ಲಿ ಭೀಕರ ಅಗ್ನಿ ಅವಘಡ ಜರುಗಿದ ಬೆನ್ನಲ್ಲೇ ಅಗ್ನಿ ಅವಘಡಗಳನ್ನು ತಡೆಗಟ್ಟುವ ನಿಟ್ಟನಲ್ಲಿ ಬಿಬಿಎಂಪಿ ಹೊಸ ಆದೇಶ ಪ್ರಕಟಿಸಿದೆ. ಬಿಬಿಎಂಪಿ ವ್ಯಾಪ್ತಿಯ ವಸತಿ ಸಮುಚ್ಚಯಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರೆ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಕಟ್ಟಡಗಳಿಗೆ ಕಟ್ಟಡ ಉಪವಿಧಿ – 2003, ಪರಿಷ್ಕೃತ ವಲಯ ನಿಯಮಾವಳಿಗಳು -2015 ಮತ್ತು National Building Code of India – 2016 ರ ಅನ್ವಯ ನಕ್ಷೆ ಮಂಜೂರಾತಿ, ಪ್ರಾರಂಭಿಕ ಪ್ರಮಾಣ ಪತ್ರ ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರಗಳನ್ನು ಪಡೆದ ನಂತರ ಕಟ್ಟಡಗಳ ಬಾಲ್ಕನಿಗಳನ್ನು ಸಂಪೂರ್ಣವಾಗಿ ಮುಚ್ಚಲು ಹಾಗೂ ಇನ್ನಿತರೆ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ನಿರ್ವಹಿಸಲು ನಿಯಮಾನುಸಾರ ಅವಕಾಶವಿರುವುದಿಲ್ಲ. ಆದರೂ ಕಟ್ಟಡ ಮಾಲೀಕರು ನಿಯಮಬಾಹಿರವಾಗಿ ಅಸುರಕ್ಷತೆಗೆ ಕಾರಣವಾಗುವಂತೆ ಕಟ್ಟಡ ಮಾರ್ಪಾಡು ಮಾಡುತ್ತಿರುವುದನ್ನು ಗಮನಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮೇಲ್ಕಂಡ ಹಿನ್ನಲೆಯಲ್ಲಿ ನಿಯಮಾನುಸಾರ ಕಟ್ಟಡಗಳಿಗೆ ನಕ್ಷೆ ಮಂಜೂರಾತಿ, ಪ್ರಾರಂಭಿಕ ಪ್ರಮಾಣ ಪತ್ರ ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರಗಳನ್ನು ಪಡೆದ ನಂತರ ವಸತಿ ಸಮುಚ್ಚಯಗಳಲ್ಲಿ ಅಥವಾ ಇತರೆ ಕಟ್ಟಡಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಬಾಲ್ಕನಿಯಲ್ಲಿ ಬದಲಾವಣೆಗಳು ಹಾಗೂ ಇನ್ನಿತರೆ ಅಸುರಕ್ಷತಾ ಕಟ್ಟಡ ಮಾರ್ಪಾಡುಗಳನ್ನು ತಡೆಗಟ್ಟಲು ಸೂಚಿಸಿದೆ. ಒಂದು ವೇಳೆ ವಸತಿ ಸಮುಚ್ಚಯಗಳಲ್ಲಿ/ಇತರೆ ಕಟ್ಟಡಗಳಲ್ಲಿ ಮಾರ್ಪಾಡು ಅವಶ್ಯವಿದ್ದಲ್ಲಿ ಪಾಲಿಕೆಯ ಸಕ್ಷಮ ಪ್ರಾಧಿಕಾರಗಳಿಂದ ಕಡ್ಡಾಯವಾಗಿ ಪೂರ್ವಾನುಮತಿಗಳನ್ನು ಪಡೆಯಲು ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: 

ಬೆಂಗಳೂರು ಅಗ್ನಿ ಅವಘಡ: ತಾಯಿ- ಮಗಳು ಸಜೀವ ದಹನ; ನಿನ್ನೆಯಷ್ಟೇ ಅಮೆರಿಕದಿಂದ ಬಂದಿದ್ದರು ಕುಟುಂಬಸ್ಥರು

Bengaluru: ಬೆಂಗಳೂರಿನಲ್ಲಿ ಸಾಲು ಸಾಲು ಬೆಂಕಿ ದುರಂತ; ಅಪಾಯದಲ್ಲಿರುವ 13 ಸಾವಿರಕ್ಕೂ ಹೆಚ್ಚು ಕಟ್ಟಡಗಳ ಕತೆಯೇನು?

(BBMP issues new ordinance to prevent fire in residential quarters)

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ