ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳ ಖಾತಾ ಮಾಡಿಸಲು ಹೊಸ ವೆಬ್ ಸೈಟ್ ಬಿಡುಗಡೆ, ಬೇಕಾಗುವ ದಾಖಲೆಗಳೇನು?

ಆಸ್ತಿಗಳ ಖಾತಾ ಮಾಡಿಸಲು ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸ ವೆಬ್ ಸೈಟ್ ಬಿಡುಗಡೆ ಮಾಡಲಾಗಿದೆ. ಖಾತೆ ಇಲ್ಲದವರಿಗೆ ಖಾತಾ ಮಾಡಿಸುವುದುಕ್ಕೆ ಬಿಬಿಎಂಪಿ ಈ ವೆಬ್ ಸೈಟ್ ಬಿಡುಗಡೆ ಮಾಡಿದೆ. ಈ ಮೂಲಕ ಪಾಲಿಕೆ ವ್ಯಾಪ್ತಿಯ ಆಸ್ತಿಗಳನ್ನ ತೆರಿಗೆ ವ್ಯಾಪ್ತಿಗೆ ತರಲು ಪ್ಲಾನ್ ಮಾಡಲಾಗಿದೆ. ಹಾಗಾದ್ರೆ, ಆನ್ ಲೈನ್ ಮೂಲಕ ಖಾತಾ ಪಡೆಯೋದು ಹೇಗೆ? ಏನೆಲ್ಲಾ ದಾಖೆಗಳು ಬೇಕು ಎನ್ನುವ ವಿವರ ಇಲ್ಲಿದೆ.

ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳ ಖಾತಾ ಮಾಡಿಸಲು ಹೊಸ ವೆಬ್ ಸೈಟ್ ಬಿಡುಗಡೆ, ಬೇಕಾಗುವ ದಾಖಲೆಗಳೇನು?
Bbmp Khata Website
Follow us
ರಮೇಶ್ ಬಿ. ಜವಳಗೇರಾ
|

Updated on: Jan 13, 2025 | 9:37 PM

ಬೆಂಗಳೂರು, (ಜನವರಿ 13): ಆಸ್ತಿಗಳ ಖಾತಾ ಮಾಡಿಸಲು ಹೊಸ ವೆಬ್ ಸೈಟ್ ಬಿಡುಗಡೆ ಮಾಡಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್​ ಸೂಚನೆಯಂತೆ ಖಾತೆ ಇಲ್ಲದವರಿಗೆ ಖಾತಾ ಮಾಡಿಸೋಕೆ ಈ ವೆಬ್ ಸೈಟ್ ಬಿಡುಗಡೆಗೊಳಿಸಲಾಗಿದೆ. ಬಿಬಿಎಂಪಿ ಖಾತಾ ಹೊಂದಿರದ 5 ಲಕ್ಷ ಆಸ್ತಿಗಳಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಪಾಲಿಕೆ, ಹೊಸ ಖಾತಾ ಮಾಡಿಸೋರಿಗೆ ಅವಕಾಶ ಕೊಟ್ಟಿದ್ದು, https://bbmp.karnataka.gov.in/newkhata ವೆಬ್ ಮೂಲಕ ನೋಂದಣಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಪಾಲಿಕೆ ವ್ಯಾಪ್ತಿಯ ಆಸ್ತಿಗಳನ್ನ ತೆರಿಗೆ ವ್ಯಾಪ್ತಿಗೆ ತರಲು ಪ್ಲಾನ್ ಮಾಡಲಾಗಿದೆ.

ರಾಜ್ಯದಲ್ಲಿ ವಸತಿ, ವಾಣಿಜ್ಯ ಮತ್ತು ಕೃಷಿ ಭೂಮಿ ಸೇರಿದಂತೆ ಎಲ್ಲಾ ರೀತಿಯ ಆಸ್ತಿಗಳ ನೋಂದಣಿಗೆ ಇ-ಖಾತಾಗಳನ್ನು ರಾಜ್ಯ ಸರ್ಕಾರ ಕಡ್ಡಾಯ ಮಾಡಿದೆ. ಗ್ರಾಮ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಸ್ತಿಗಳ ನೋಂದಣಿಗೆ ಇ-ಖಾತಾಗಳನ್ನು ತ್ವರಿತವಾಗಿ ವಿತರಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಎ ಮತ್ತು ಬಿ ಖಾತಾ ಎಂದರೇನು? ಗುರುತಿಸುವುದು ಹೇಗೆ, ಬಿ ಖಾತಾ ಇದ್ದರೆ ಏನು ಮಾಡಬೇಕು? ಇಲ್ಲಿದೆ ಮಾಹಿತಿ

ಅದರಂತೆ ಇದೀಗ ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳ ಖಾತಾ ಮಾಡಿಸಲು ಹೊಸ ವೆಬ್ ಸೈಟ್ ಬಿಡುಗಡೆ ಮಾಡಲಾಗಿದ್ದು, ಆನ್ ಲೈನ್ ಮೂಲಕ ಖಾತಾ ಪಡೆಯೋಕೆ ಬಿಬಿಎಂಪಿ ಅವಕಾಶ ನೀಡಿದೆ. ಇದಕ್ಕೆ ಬೇಕಾಗುವ ದಾಖಲೆಗಳೇನು ಎನ್ನುವುದು ಈ ಕೆಳಗಿನಂತಿದೆ ನೋಡಿ.

  • ಆಧಾರ್ ಕಾರ್ಡ್
  • ಆಸ್ತಿ ಮಾರಾಟ ನೋಂದಣಿ ಪತ್ರ
  • ಆಸ್ತಿಯ ಛಾಯಾಚಿತ್ರ
  • ಆಸ್ತಿಯ ಋಣಭಾರ ಪತ್ರ
  • ಬೆಸ್ಕಾಂ ಬಿಲ್

ಅರ್ಜಿ ಸಲ್ಲಿಕೆ ಹಂತಗಳು

  • ನಾಗರಿಕರು ಆಸ್ತಿ ಮಾರಾಟದ ಅಥವಾ ನೋಂದಣಿ ಡೀಡ್​ ನಂಬರ್​ ಅನ್ನು ನಮೂದಿಸಿ.
  • 2004ರ ಏಪ್ರಿಲ್​ 1 ರಿಂದ ಈವರೆಗಿನ ಋಣಭಾರ ಪ್ರಮಾಣಪತ್ರ (ಇಸಿ) ಸಂಖ್ಯೆ ಸಲ್ಲಿಸಬೇಕು.
  • ಆಸ್ತಿ ತೆರಿಗೆಯ ಅಪ್ಲಿಕೇಷನ್​ ಸಂಖ್ಯೆ ಸಲ್ಲಿಸಬೇಕು.
  • ಬೆಸ್ಕಾಂ ಮೀಟರ್​​ ಸಂಖ್ಯೆ ಸಲ್ಲಿಸಬೇಕು.
  • ಆಸ್ತಿಯ ಜಿಪಿಎಸ್​ ದತ್ತಾಂಶ, ಆಸ್ತಿ ಛಾಯಾಚಿತ್ರಗಳನ್ನು ಸಲ್ಲಿಸಬೇಕು.

ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಮಹಾಕುಂಭದ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಕಾರ್ಯಕರ್ತರಿಂದಲೇ ಸರ್ಕಾರ ಅಂತ ಹತ್ತು ಸಲ ಹೇಳಿದ್ದೇನೆ: ಸತೀಶ್ ಜಾರಕಿಹೊಳಿ
ಕಾರ್ಯಕರ್ತರಿಂದಲೇ ಸರ್ಕಾರ ಅಂತ ಹತ್ತು ಸಲ ಹೇಳಿದ್ದೇನೆ: ಸತೀಶ್ ಜಾರಕಿಹೊಳಿ
ನಿನ್ನೆ ಜೋಡಿ, ಇಂದು ವೈರಿ: ಕಿತ್ತಾಡಿದ ಭವ್ಯಾ-ತ್ರಿವಿಕ್ರಮ್
ನಿನ್ನೆ ಜೋಡಿ, ಇಂದು ವೈರಿ: ಕಿತ್ತಾಡಿದ ಭವ್ಯಾ-ತ್ರಿವಿಕ್ರಮ್