ಬೆಂಗಳೂರು, (ಜನವರಿ 13): ಆಸ್ತಿಗಳ ಖಾತಾ ಮಾಡಿಸಲು ಹೊಸ ವೆಬ್ ಸೈಟ್ ಬಿಡುಗಡೆ ಮಾಡಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಸೂಚನೆಯಂತೆ ಖಾತೆ ಇಲ್ಲದವರಿಗೆ ಖಾತಾ ಮಾಡಿಸೋಕೆ ಈ ವೆಬ್ ಸೈಟ್ ಬಿಡುಗಡೆಗೊಳಿಸಲಾಗಿದೆ. ಬಿಬಿಎಂಪಿ ಖಾತಾ ಹೊಂದಿರದ 5 ಲಕ್ಷ ಆಸ್ತಿಗಳಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಪಾಲಿಕೆ, ಹೊಸ ಖಾತಾ ಮಾಡಿಸೋರಿಗೆ ಅವಕಾಶ ಕೊಟ್ಟಿದ್ದು, https://bbmp.karnataka.gov.in/newkhata ವೆಬ್ ಮೂಲಕ ನೋಂದಣಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಪಾಲಿಕೆ ವ್ಯಾಪ್ತಿಯ ಆಸ್ತಿಗಳನ್ನ ತೆರಿಗೆ ವ್ಯಾಪ್ತಿಗೆ ತರಲು ಪ್ಲಾನ್ ಮಾಡಲಾಗಿದೆ.
ರಾಜ್ಯದಲ್ಲಿ ವಸತಿ, ವಾಣಿಜ್ಯ ಮತ್ತು ಕೃಷಿ ಭೂಮಿ ಸೇರಿದಂತೆ ಎಲ್ಲಾ ರೀತಿಯ ಆಸ್ತಿಗಳ ನೋಂದಣಿಗೆ ಇ-ಖಾತಾಗಳನ್ನು ರಾಜ್ಯ ಸರ್ಕಾರ ಕಡ್ಡಾಯ ಮಾಡಿದೆ. ಗ್ರಾಮ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಸ್ತಿಗಳ ನೋಂದಣಿಗೆ ಇ-ಖಾತಾಗಳನ್ನು ತ್ವರಿತವಾಗಿ ವಿತರಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅದರಂತೆ ಇದೀಗ ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳ ಖಾತಾ ಮಾಡಿಸಲು ಹೊಸ ವೆಬ್ ಸೈಟ್ ಬಿಡುಗಡೆ ಮಾಡಲಾಗಿದ್ದು, ಆನ್ ಲೈನ್ ಮೂಲಕ ಖಾತಾ ಪಡೆಯೋಕೆ ಬಿಬಿಎಂಪಿ ಅವಕಾಶ ನೀಡಿದೆ. ಇದಕ್ಕೆ ಬೇಕಾಗುವ ದಾಖಲೆಗಳೇನು ಎನ್ನುವುದು ಈ ಕೆಳಗಿನಂತಿದೆ ನೋಡಿ.